పరిశుద్ధ గ్రంథము
ಹಳೆಯ ಒಡಂಬಡಿಕೆ
ಮೀಕ
1ನೇ ಅಧ್ಯಾಯ
- Verse 1: ಯೋಥಾಮ, ಆಹಾಜ, ಹಿಜ್ಕೀಯ ಇವರು ಜುದೇಯದ ಅರಸರು. ಇವರ ಕಾಲದಲ್ಲಿ ಮೋರೆಷೆತ್ ಊರಿನವನಾದ ಮೀಕನಿಗೆ ಒಂದು ದೈವದರ್ಶನವಾಯಿತು. ಅದು ಸಮಾರ್ಯ ಮತ್ತು ಜೆರುಸಲೇಮನ್ನು ಕುರಿತದ್ದಾಗಿತ್ತು.
- Verse 2: ಕೇಳಿರಿ ಸರ್ವಜನಾಂಗಗಳೇ ಕಿವಿಗೊಡಿ ಬುವಿಯ ಸರ್ವನಿವಾಸಿಗಳೇ.
- Verse 3: ಸಾಕ್ಷಿ ನುಡಿದಿಹನು ನಿಮ್ಮ ವಿರುದ್ಧ ಸರ್ವೇಶ್ವರ ಪವಿತ್ರಾಲಯದಿಂದ ಇಳಿದುಬರುತಿಹನಿದೋ ಸ್ವಾಮಿ ತನ್ನ ಆಸ್ಥಾನದಿಂದ ಜಗದ ಉನ್ನತ ಪ್ರದೇಶಗಳಲ್ಲಿ ಸಂಚರಿಸಲಿಹನಾತ.
- Verse 4: ಬೆಂಕಿಗೆ ಕರಗುವ ಮೇಣದಂತೆ ಇಳಿಜಾರು ಪ್ರದೇಶದ ನೀರು ನೆಲವನ್ನು ಕೊರೆವಂತೆ ಕರಗಿಹೋಗುವುವು ಆತನ ಪಾದದಡಿ ಪರ್ವತಗಳು; ಸೀಳಿಹೋಗುವುವು ಕೊಲ್ಲಿಗಳು.
- Verse 5: ಇದಕ್ಕೆಲ್ಲಾ ಕಾರಣ ಯಕೋಬನ ದ್ರೋಹ. ಇಸ್ರಯೇಲ್ ಮನೆತನದ ಪಾಪ. ಯಕೋಬನ ದ್ರೋಹಕ್ಕೆ ಕಾರಣ ಯಾವುದು? ಸಮಾರ್ಯ ಅಲ್ಲವೆ? ಜುದೇಯದ ವಿಗ್ರಹಾರಾಧನೆಯ ಸ್ಥಳ ಯಾವುದು? ಜೆರುಸಲೇಮ್ ಅಲ್ಲವೆ?
- Verse 6: ಆದಕಾರಣ, “ನಾನು ಸಮಾರ್ಯವನ್ನು ಧೂಳಿನ ರಾಶಿಯನ್ನಾಗಿಯೂ ದ್ರಾಕ್ಷಾತೋಟಕ್ಕೆ ಒಳ್ಳೆಯ ಬಯಲನ್ನಾಗಿಯೂ ಮಾಡುವೆನು. ಕಲ್ಲುಹೆಂಟೆಗಳನ್ನು ಕಣಿವೆಗೆ ಸುರಿದುಬಿಡುವೆನು. ಅದರ ತಳಪಾಯವೇ ತೆರೆದು ಕಾಣುವಂತೆ ಮಾಡುವೆನು.
- Verse 7: ಅದರಲ್ಲಿನ ಎರಕದ ಪ್ರತಿಮೆಗಳನ್ನು ಪುಡಿಪುಡಿ ಮಾಡುವೆನು. ಅದರ ಸಂಪಾದನೆಯೆಲ್ಲ ಅಗ್ನಿಗೆ ಆಹುತಿಯಾಗುವುದು. ಅದರ ವಿಗ್ರಹಗಳನ್ನೆಲ್ಲ ಹಾಳುಮಾಡುವೆನು. ಅವು ಸೂಳೆತನದಿಂದ ಸಂಪಾದನೆಯಾದುವು, ಸೂಳೆತನದ ಸಂಪಾದನೆಯಾಗಿಯೇ ಪರರ ಪಾಲಾಗುವುದು,” ಎಂದು ಸರ್ವೇಶ್ವರ ಹೇಳುತ್ತಾರೆ.
- Verse 8: ಆಗ ಮೀಕನು: “ಇದಕ್ಕಾಗಿ ನಾನು ಗೋಳಾಡಿ ರೋದಿಸುವೆನು; ಬೆತ್ತಲೆಯಾಗಿ ಬರಿಗಾಲಿನಲ್ಲಿ ಪಾದಯಾತ್ರೆ ಮಾಡುವೆನು; ಗುಳ್ಳೆನರಿಗಳಂತೆ ಊಳಿಡುವೆನು, ಗೂಬೆಯಂತೆ ಘೂಂಕರಿಸುವೆನು.
- Verse 9: ಸಮಾರ್ಯಕ್ಕೆ ಬಿದ್ದ ಪೆಟ್ಟು ಗಡುಸಾದುದು. ಅದು ಜುದೇಯಕ್ಕೂ ತಾಕಿದೆ. ಅದು ನನ್ನ ಊರಾದ ಜೆರುಸಲೇಮಿನ ಪುರದ್ವಾರವನ್ನು ಮುಟ್ಟಿದೆ,” ಎಂದನು.
- Verse 10: ಈ ವಿಷಯವನ್ನು ಗಾತ್ ಊರಿನವರಿಗೆ ತಿಳಿಸಬೇಡಿ; ಅಳಲೂಬೇಡಿ. ಬೇತ್ಲೆಯಪ್ರದಲ್ಲಿ, ಧೂಳಿನಲ್ಲಿ ಬಿದ್ದು ಹೊರಳಾಡಿ.
- Verse 11: ಶಾಫೀರಿನವರೇ, ಬೆತ್ತಲೆಯಾಗಿ ಲಜ್ಜೆಗೆಟ್ಟು ತೊಲಗಿರಿ. ಚಾನಾನಿನವರಿಗೆ ಹೊರಬರಲು ಧೈರ್ಯವಿಲ್ಲ. ಬೇತೇಲಿನವರ ಗೋಳಾಟ ಕೇಳಿಬಂದಾಗ, ಅಲ್ಲಿ ನಿಮಗೆ ಆಶ್ರಯವಿಲ್ಲವೆಂದು ಗೊತ್ತಾಗುವುದು.
- Verse 12: ಮಾರೋತಿನ ನಿವಾಸಿಗಳು ತಮ್ಮ ಸಂಕಟ ಪರಿಹಾರವಾಗುವುದೋ ಇಲ್ಲವೋ ಎಂದು ವೇದನೆಪಡುತ್ತಾರೆ: ಏಕೆಂದರೆ ಸ್ವಾಮಿಯಿಂದ ಬಂದ ವಿಪತ್ತು ಜೆರುಸಲೇಮಿನ ಪುರದ್ವಾರವನ್ನು ಮುಟ್ಟಿದೆ.
- Verse 13: ಲಾಕೀಷಿನ ನಿವಾಸಿಗಳೇ, ನಿಮ್ಮ ಕುದುರೆಗಳನ್ನು ರಥಕ್ಕೆ ಹೂಡಿರಿ. ನಿಮ್ಮ ಊರೇ ಸಿಯೋನ್ ನಗರದ ಪಾಪಕ್ಕೆ ಮೂಲ ಕಾರಣ. ಹೌದು, ಇಸ್ರಯೇಲಿನ ದ್ರೋಹಗಳು ನಿಮ್ಮಲ್ಲಿಯೇ ಕಾಣಿಸಿಕೊಂಡವು.
- Verse 14: ಆದಕಾರಣ ನೀವು ಮೋರೆತಷತ್ಗಾತ್ ಪಟ್ಟಣ ನಿವಾಸಿಗಳಿಗೆ ಕಪ್ಪಕಾಣಿಕೆಯಿತ್ತು ಬೀಳ್ಕೊಡಬೇಕಾಗುವುದು. ಇಸ್ರಯೇಲಿನ ಅರಸರಿಗೆ ಅಕ್ಜೀಬಿನ ಮನೆತನದವರಿಂದ ವಂಚನೆಯಾಗುವುದು.
- Verse 15: ಮಾರೇಷದವರೇ, ಆಕ್ರಮಣಕಾರನೊಬ್ಬನನ್ನು ನಿಮ್ಮ ಬಳಿಗೆ ಬರಮಾಡುವೆನು. ಇಸ್ರಯೇಲಿನ ವೈಭವವು ಅದುಲ್ಲಾಮಿನ ಪಾಲಾಗುವುದು.
- Verse 16: ಜುದೇಯದ ನಿವಾಸಿಗಳೇ, ನಿಮ್ಮ ಮಕ್ಕಳು ಅಗಲಿ ಸೆರೆಹೋಗಿದ್ದಾರೆ. ನಿಮ್ಮ ಮುದ್ದು ಮಕ್ಕಳಿಗಾಗಿ ತಲೆಬೋಳಿಸಿಕೊಳ್ಳಿ, ಮುಂಡನ ಮಾಡಿಸಿಕೊಳ್ಳಿ. ನಿಮ್ಮ ಬೋಳುತಲೆಯು ರಣಹದ್ದಿನಂತೆ ನುಣ್ಣಗಿರಲಿ.