ಕನ್ನಡ ಸತ್ಯವೇದವು
ಹಳೆಯ ಒಡಂಬಡಿಕೆ
ಯಾಜಕಕಾಂಡ
12ನೇ ಅಧ್ಯಾಯ
- Verse 1: ಸರ್ವೇಶ್ವರ ಸ್ವಾಮಿ ಮೋಶೆಗೆ ಹೀಗೆಂದು ಹೇಳಿದರು:
- Verse 2: “ನೀನು ಇಸ್ರಯೇಲರಿಗೆ ಇಂತೆಂದು ಆಜ್ಞಾಪಿಸು - ‘ಒಬ್ಬ ಮಹಿಳೆ ಗಂಡುಮಗುವನ್ನು ಹೆತ್ತರೆ ತಾನು ತಿಂಗಳ ಮುಟ್ಟಿನಿಂದ ಹೇಗೆ ಅಶುದ್ಧಳಾಗುತ್ತಾಳೋ ಹಾಗೆಯೇ ಏಳು ದಿನಗಳ ತನಕ ಅಶುದ್ಧಳಾಗಿರಬೇಕು.
- Verse 3: ಎಂಟನೆಯ ದಿನ ಆ ಮಗುವಿಗೆ ಸುನ್ನತಿ ಮಾಡಿಸಬೇಕು.
- Verse 4: ಆಮೇಲೆ ಆಕೆ ಪೂರ್ಣಶುದ್ಧಳಾಗಲು ಮೂವತ್ತುಮೂರು ದಿನಗಳವರೆಗೆ ಕಾದಿರಬೇಕು. ಅದು ಮುಗಿಯುವ ತನಕ ಆಕೆ ದೇವರ ವಸ್ತುಗಳನ್ನು ಮುಟ್ಟಕೂಡದು, ದೇವಸ್ಥಾನಕ್ಕೆ ಬರಕೂಡದು.
- Verse 5: ಹೆಣ್ಣುಮಗುವನ್ನು ಹೆತ್ತರೆ, ತಾನು ತಿಂಗಳ ಮುಟ್ಟಿನಿಂದ ಹೇಗೆ ಅಶುದ್ಧಳಾಗುತ್ತಾಳೋ ಹಾಗೆಯೇ ಎರಡು ವಾರಗಳು ಅಶುದ್ಧಳಾಗಿರಬೇಕು; ಮತ್ತು ಪೂರ್ಣಶುದ್ಧಳಾಗಲು ಅರವತ್ತಾರು ದಿನಗಳು ಕಾದಿರಬೇಕು.
- Verse 6: ಗಂಡುಮಗುವನ್ನು ಹೆತ್ತರೂ ಹೆಣ್ಣುಮಗುವನ್ನು ಹೆತ್ತರೂ ಆಕೆಯ ಶುದ್ಧೀಕರಣ ದಿನಗಳು ಮುಗಿದಾಗ ಆಕೆ ದಹನಬಲಿಗಾಗಿ ಒಂದು ವರ್ಷದ ಕುರಿಯನ್ನು, ದೋಷಪರಿಹಾರಕ್ಕಾಗಿ ಒಂದು ಮರಿ ಪಾರಿವಾಳವನ್ನು, ಇಲ್ಲವೆ ಬೆಳವಕ್ಕಿಯನ್ನು ದೇವದರ್ಶನದ ಗುಡಾರದ ಬಾಗಿಲಿಗೆ ತಂದು ಯಾಜಕನಿಗೆ ಒಪ್ಪಿಸಬೇಕು.
- Verse 7: ಯಾಜಕನು ಅವುಗಳನ್ನು ಸರ್ವೇಶ್ವರನ ಸನ್ನಿಧಿಯಲ್ಲಿ ಸಮರ್ಪಿಸಿ ಅವಳ ಪರವಾಗಿ ದೋಷಪರಿಹಾರ ಮಾಡಿದಾಗ ಅವಳಿಗೆ ರಕ್ತಸ್ರಾವದಿಂದ ಆದ ಅಪರಿಶುದ್ಧತೆ ನಿವಾರಣೆಯಾಗಿ ಶುದ್ಧಳಾಗುವಳು. ಗಂಡು ಮಗು ಹೆತ್ತಾಗಲು, ಹೆಣ್ಣು ಮಗು ಹೆತ್ತಾಗಲು ಅನುಸರಿಸಬೇಕಾದ ವಿಧಿ ಒಂದೇ.
- Verse 8: ಬಡತನದ ನಿಮಿತ್ತ ಕುರಿಯನ್ನು ಕೊಡುವುದಕ್ಕೆ ಆಗದಿದ್ದರೆ ಎರಡು ಬೆಳವಕ್ಕಿಗಳನ್ನಾಗಲಿ, ಎರಡು ಮರಿಪಾರಿವಾಳಗಳನ್ನಾಗಲಿ ತಂದು ದಹನಬಲಿಗಾಗಿ ಒಂದನ್ನು, ದೋಷಪರಿಹಾರಕ್ಕಾಗಿ ಒಂದನ್ನು ಸಮರ್ಪಿಸಬೇಕು. ಯಾಜಕನು ಅವಳ ಪರವಾಗಿ ದೋಷಪರಿಹಾರವನ್ನು ಮಾಡಿದಾಗ ಆಕೆ ಶುದ್ಧಳಾಗುವಳು.