పరిశుద్ధ గ్రంథము
ಹಳೆಯ ಒಡಂಬಡಿಕೆ
ಕೀರ್ತನೆಗಳು
23ನೇ ಅಧ್ಯಾಯ
1 : ಪ್ರಭು ಕುರಿಗಾಹಿಯಾಗಿರಲು ನನಗೆ I ಕುಂದುಕೊರತೆಗಳೆಲ್ಲಿಯವು ಎನಗೆ? II
2 : ಹಸಿರುಗಾವಲುಗಳಲೆನ್ನ ತಂಗಿಸುವನು I ತಿಳಿಕೊಳಗಳ ಬಳಿಗೆನ್ನ ಕರೆದೊಯ್ಯುವನು II
3 : ಪುನಶ್ಚೇತನಗೊಳಿಸುವನು ನನ್ನ ಪ್ರಾಣವನಾತ I ಸನ್ಮಾರ್ಗದಲಿ ನಡೆಸುವನು ತನ್ನ ನಾಮನಿಮಿತ್ತ II
4 : ಕಾರ್ಗತ್ತಲ ಕಣಿವೆಯಲಿ ನಾ ನಡೆವಾಗಲು, ಅಂಜೆನು ಕೇಡಿಗೆ I ನಿನ್ನ ಕುರಿಗೋಲು, ಊರುಗೋಲು, ಧೈರ್ಯವನು ತರುವುದೆನಗೆ I ಕಾಣೆನೆಂದಿಗೂ ನಾ ದಿಗಿಲನು, ನೀನಿರಲು ನನ್ನೊಂದಿಗೆ II
5 : ಸಜ್ಜುಗೊಳಿಸುವೆ ನೀ ಶತ್ರುಗಳ ಕಣ್ಮುಂದೆಯೆ ನನಗೌತಣವನು I ಹಚ್ಚುವೆ ತಲೆಗೆ ತೈಲವನು, ತುಂಬಿತುಳುಕಿಸುವೆ ಪಾನಪಾತ್ರೆಯನು II
6 : ಶುಭಶಾಂತಿಯಿಂದ ನಾ ಬಾಳುವೆ ಜೀವಮಾನವೆಲ್ಲ I ದೇವಮಂದಿರದಲಿ ನಾ ವಾಸಿಸುವೆ ಚಿರಕಾಲವೆಲ್ಲ II