పరిశుద్ధ గ్రంథము
ಹಳೆಯ ಒಡಂಬಡಿಕೆ
ಕೀರ್ತನೆಗಳು
83ನೇ ಅಧ್ಯಾಯ
1 : ಮಾತನಾಡದೆ ದೇವಾ, ಸುಮ್ಮನಿರಬೇಡ I ಮೌನದಿಂದ ಸ್ವಾಮೀ, ನಿಶ್ಚಿಂತನಿರಬೇಡ II
2 : ದಂಗೆಯೆದ್ದಿಹರಿದೋ ನಿನ್ನ ಶತ್ರುಗಳು I ತಲೆಯೆತ್ತಿಕೊಂಡಿಹರು ನಿನ್ನ ದ್ವೇಷಿಗಳು II
3 : ಕುತಂತ್ರಮಾಡುತಿಹರು ನಿನ್ನ ಪ್ರಜೆಗೆ ವಿರುದ್ಧ I ಆಲೋಚಿಸುತಿಹರು ನಿನ್ನ ಶರಣರಿಗೆ ವಿರುದ್ಧ II
4 : ಇಂತೆನ್ನುತಿಹರು : “ಬನ್ನಿ ಸಂಹರಿಸೋಣ I ಆತನ ಜನಾಂಗ ಉಳಿಯದಂತೆ ಮಾಡೋಣ I ಇಸ್ರಯೇಲೆಂಬ ನಾಮವನಳಿಸಿಬಿಡೋಣ” II
5 : ಎದೋಮ್ಯರ ಪಾಳೆಯದವರು ಇಷ್ಮಾಯೇಲ್ಯರು, I ಗೇಬಾಲ್ಯರು, ಅಮ್ಮೋನಿಯರು, ಅಮಾಲೇಕ್ಯರು, II
6 : ಮೊವಾಬ್ಯ, ಹಗ್ರೀಯ, ಫಿಲಿಷ್ಟಿಯ, ಟೈರ್ ಜನರು I ಒಮ್ಮತದಿಂದಿವರೆಲ್ಲರು ಒಟ್ಟುಗೂಡಿಹರು I ನಿನ್ನ ವಿರುದ್ಧವಾಗಿ ಒಳಸಂಚು ಮಾಡಿಹರು II
7 : ಮೊವಾಬ್ಯ, ಹಗ್ರೀಯ, ಫಿಲಿಷ್ಟಿಯ, ಟೈರ್ ಜನರು I ಒಮ್ಮತದಿಂದಿವರೆಲ್ಲರು ಒಟ್ಟುಗೂಡಿಹರು I ನಿನ್ನ ವಿರುದ್ಧವಾಗಿ ಒಳಸಂಚು ಮಾಡಿಹರು II
8 : ಇವರೊಡನೆ ಕೂಡಿಕೊಂಡಿಹ ಅಸ್ಸೀರ್ಯರು I ಲೋಟನ ವಂಶಕ್ಕೆ ಭುಜಬಲವಾಗಿಹರು II
9 : ಮಾಡವರಿಗೆ ಪ್ರಭೂ, ನೀ ಮಿದ್ಯಾನ್ಯರಿಗೆ ಮಾಡಿದಂತೆ I ಕಿಷೋನ್ ನದಿಯ ಬಳಿ ಸೀಸೆರ್ಯಾಬೀನರಿಗೆ ಮಾಡಿದಂತೆ II
10 : ಎಂದೋರಿನಲ್ಲವರು ಕೊಲೆಯಾದರು I ಹೊಲಗದ್ದೆಗಳಿಗೆ ಗೊಬ್ಬರವಾದರು II
11 : ಒರೆಬ್, ಜೇಬ್ ಎಂಬವರ ಗತಿಯೊದಗಲಿ ಇವರ ಸಿರಿವಂತರಿಗೆ I ಜೇಬಹ, ಚೆಲ್ಮುನ್ನರ ಪಾಡು ಬರಲಿರುವ ಸಕಲ ರಾಜರಿಗೆ I “ಬನ್ನಿ, ದೇವರ ನಾಡುಬೀಡನು ಆಕ್ರಮಿಸೋಣ” ಎಂದವರಿಗೆ II
12 : ಒರೆಬ್, ಜೇಬ್ ಎಂಬವರ ಗತಿಯೊದಗಲಿ ಇವರ ಸಿರಿವಂತರಿಗೆ I ಜೇಬಹ, ಚೆಲ್ಮುನ್ನರ ಪಾಡು ಬರಲಿರುವ ಸಕಲ ರಾಜರಿಗೆ I “ಬನ್ನಿ, ದೇವರ ನಾಡುಬೀಡನು ಆಕ್ರಮಿಸೋಣ” ಎಂದವರಿಗೆ II
13 : ಮಾಡಿವರನು ದೇವಾ, ಗಾಳಿಗೆ ತೂರುವ ಹೊಟ್ಟಿನಂತೆ I ಸುಂಟರಗಾಳಿಯಲಿ ಮೇಲೇಳುವ ದೂಳೀಪಟದಂತೆ II
14 : ಕಾಡುಮೇಡನು ಸುಡುವಾ ಬೆಂಕಿಯಂತೆ I ಪರ್ವತವನೆ ಉರಿಸುವ ಜ್ವಾಲೆಯಂತೆ II
15 : ಓಡಿಸೋಡಿಸವರನು ನೀ ಬೀಸುವ ಬಿರುಗಾಳಿಗೆ I ಗುರಿಪಡಿಸವರನು ನಿನ್ನಾ ಚಂಡಮಾರುತಕೆ II
16 : ಕವಿಯಲಿ ಅವಮಾನ ನಿಂದೆ ಇವರ ಮುಖವನು I ಅರಸುವರಾಗ ಪ್ರಭೂ, ನಿನ್ನ ಸಿರಿನಾಮವನು II
17 : ಕಳವಳಗೊಳ್ಳಲಿ ಅವರು ಸತತವು ಲಜ್ಜೆಯಿಂದ I ಅವರಳಿದುಹೋಗಲಿ ಅವಮಾನ ನಿಂದೆಗಳಿಂದ II
18 : ಇವರು ಅರಿಯಲಿ ಪ್ರಭುವೆಂಬ ನಾಮ ನಿನ್ನದೆಂದು I ಧರೆಯಲ್ಲೆಲ್ಲಾ ಸರ್ವೋನ್ನತ ನೀನೇ ಎಂದು II