पवित्र बाइबिल
ಹಳೆಯ ಒಡಂಬಡಿಕೆ
ಯೆಹೋಶುವ
19ನೇ ಅಧ್ಯಾಯ
- Verse 1: ಎರಡನೇ ಸಾರಿಯ ಚೀಟು ಸಿಮೆಯೋನ್ ಕುಲದವರಿಗೆ ಬಿದ್ದಿತು. ಈ ಸಿಮೆಯೋನ್ ಕುಲದ ಗೋತ್ರಗಳ ಸೊತ್ತು ಯೂದಕುಲದವರ ಸೊತ್ತಿನ ಮಧ್ಯದಲ್ಲಿತ್ತು.
- Verse 2: ಅದರ ಊರುಗಳು ಇವು: ಬೇರ್ಷೆಬ,
- Verse 3: ಶೆಬ, ಮೋಲಾದಾ, ಹಚರ್ ಷೂವಾಲ್, ಬಾಲಾ,
- Verse 4: ಎಚೆಮ್, ಎಲ್ತೋಲದ್, ಬೆತೂಲ್,
- Verse 5: ಹೊರ್ಮಾ, ಚಿಕ್ಲಗ್, ಬೇತ್ ಮಾರ್ಕಾಬೋತ್,
- Verse 6: ಹಚರ್ ಸೂಸಾ, ಬೇತ್ ಲೆಬಾವೋತ್, ಶಾರೂಹೆನ್ ಎಂಬ ಹದಿಮೂರು ನಗರಗಳು ಮತ್ತು ಅವುಗಳ ಗ್ರಾಮಗಳು.
- Verse 7: ಆಯಿನ್, ರಿಮ್ಮೋನ್, ಏತೆರ್, ಅಷಾನ್ ಎಂಬ ನಾಲ್ಕು ನಗರಗಳು ಮತ್ತವುಗಳ ಗ್ರಾಮಗಳು;
- Verse 8: ಅವುಗಳ ಸುತ್ತಣ ಪ್ರದೇಶದಲ್ಲಿ ಬಾಲತ್ ಬೇರ್ ಎಂಬ ಊರಿನವರೆಗೆ ಇತರ ಗ್ರಾಮಗಳು ಇವೆ. ಬಾಲತ್ ಬೇರ್ ಎಂಬುದು ದಕ್ಷಿಣದ ರಾಮ ಎನಿಸಿಕೊಳ್ಳುತ್ತದೆ. ಸಿಮೆಯೋನ್ ಕುಲದ ಗೋತ್ರಗಳಿಗೆ ಸಿಕ್ಕಿದ ಆಸ್ತಿ ಇದೇ.
- Verse 9: ಈ ಆಸ್ತಿ ಯೂದವಂಶದ ಆಸ್ತಿಯಲ್ಲಿ ಒಂದು ಭಾಗ. ಯೂದವಂಶದವರಿಗೆ ದೊರಕಿದ ಪ್ರದೇಶ ಹೆಚ್ಚಾಗಿದ್ದುದರಿಂದ ಸಿಮೆಯೋನ್ಯರಿಗೆ ಅದರಲ್ಲೆ ಪಾಲು ಸಿಕ್ಕಿತು.
- Verse 10: ಮೂರನೇ ಸಾರಿಯ ಚೀಟು ಜೆಬುಲೂನ್ಯರಿಗೆ ಬಿದ್ದಿತು. ಈ ಕುಲದ ಗೋತ್ರಗಳಿಗೆ ಸಿಕ್ಕಿದ ಸೊತ್ತಿನ ಎಲ್ಲೆ.
- Verse 11: ಸಾರೀದಿನಿಂದ ತೊಡಗಿ ಪಶ್ಚಿಮ ದಿಕ್ಕಿನಲ್ಲಿರುವ ಮರ್ಗಲಾ, ದಬ್ಬೆಷೆತ್ ಇವುಗಳ ಮೇಲೆ ಯೊಕ್ನೆಯಾಮ್ ಊರಿನ ಈಚೆಯಲ್ಲಿರುವ ಹಳ್ಳಕ್ಕೆ ಹೋಗುತ್ತದೆ.
- Verse 12: ಅದೇ ಸಾರೀದಿನಿಂದ ಅದು ಪೂರ್ವದಿಕ್ಕಿನಲ್ಲಿ ಕಿಸ್ಲೋತ್ ತಾಬೋರಿನ ಎಲ್ಲೆಗೆ ಹತ್ತಿ ದಾಬೆರತಿಗೆ ಹೋಗುತ್ತದೆ. ಅಲ್ಲಿಂದ ಏರುತ್ತಾ ಯಾಫೀಯಕ್ಕೆ ಹೋಗುತ್ತದೆ.
- Verse 13: ಅಲ್ಲಿಂದ ಮತ್ತೂ ಪೂರ್ವಕ್ಕೆ ಮುಂದುವರೆದು ಗತ್ ಹೇಫರ್, ಎತ್ ಕಾಚೀನ್ ಇವುಗಳ ಮೇಲೆ ನೇಯದ ಮಗ್ಗಲಲ್ಲಿರುವ ರಿಮ್ಮೇನಿಗೆ ಹೋಗುತ್ತದೆ.
- Verse 14: ಅಲ್ಲಿಂದ ಅದು ಉತ್ತರಕ್ಕೆ ತಿರುಗಿಕೊಂಡು ಹನ್ನಾತೋನಿನ ಮೇಲೆ ಇಪ್ತಹೇಲಿನ ಕಣಿವೆಗೆ ಹೋಗಿ ಅಲ್ಲಿ ಮುಕ್ತಾಯಗೊಳ್ಳುತ್ತದೆ.
- Verse 15: ಕಟ್ಟಾತ್, ನಹಲ್ಲಾಲ್, ಶಿಮ್ರೋನ್, ಇದಲಾ, ಬೆತ್ಲೆಹೇಮ್ ಇವೇ ಮೊದಲಾದ ಹನ್ನೆರಡು ನಗರಗಳೂ ಅವುಗಳಿಗೆ ಸೇರಿದ ಗ್ರಾಮಗಳು -
- Verse 16: ಜೆಬುಲೂನ್ ಕುಲದ ಗೋತ್ರಗಳಿಗೆ ಸೊತ್ತಾಗಿ ದೊರಕಿದವು.
- Verse 17: ನಾಲ್ಕನೇ ಸಾರಿಯ ಚೀಟು ಇಸ್ಸಾಕಾರ್ ಕುಲದವರಿಗೆ ಬಿದ್ದಿತು. ಅದರ ಗೋತ್ರಗಳಿಗೆ ಸಿಕ್ಕಿದ ನಾಡಿನಲ್ಲಿರುವ ನಗರಗಳು ಯಾವುವು ಎಂದರೆ -
- Verse 18: ಇಜ್ರೇಲ್, ಕೆಸುಲ್ಲೋತ್,
- Verse 19: ಶೂನೇಮ್, ಹಫಾರಯಿಮ್, ಶೀಯೋನ್,
- Verse 20: ಅನಾಹರತ್, ರಬ್ಬೀತ್, ಕಿಷ್ಯೋನ್, ಎಬೆಜ್,
- Verse 21: ರೆಮೆತ್, ಏಂಗನ್ನೀಮ್, ಏನ್ ಹದ್ದಾ, ಬೇತ್ ಪಚ್ಚೇಚ್,
- Verse 22: ತಾಬೋರ್, ಶಹಚೀಮಾ, ಬೇತ್ ಷೆಮೆಷ್ ಎಂಬ ಊರುಗಳೂ ಅದರ ಮೇರೆಯೊಳಗಿದ್ದವು. ಈ ಮೇರೆಯು ಜೋರ್ಡನ್ ನದಿಯ ತೀರದಲ್ಲಿ ಮುಗಿಯುತ್ತದೆ.
- Verse 23: ಒಟ್ಟಾರೆ ಹದಿನಾರು ನಗರಗಳೂ ಅವುಗಳ ಗ್ರಾಮಗಳೂ ಇಸ್ಸಾಕಾರ್ ಕುಲದ ಗೋತ್ರಗಳಿಗೆ ದೊರಕಿದವು.
- Verse 24: ಐದನೇ ಸಾರಿಯ ಚೀಟು ಅಶೇರ್ ಕುಲದವರಿಗೆ ಬಿದ್ದಿತು. ಅವರ ಗೋತ್ರಗಳಿಗೆ ಸಿಕ್ಕಿದ ಊರುಗಳು ಇವು:
- Verse 25: ಹೆಲ್ಕತ್, ಹಲೀ, ಬೆಟೆನ್, ಅಕ್ಷಾಫ್,
- Verse 26: ಅಲಮ್ಮೆಲೆಕ್, ಅಮಾದ್, ಮಿಷಾಲ್. ಇವರ ನಾಡಿನ ಎಲ್ಲೆ ಪಶ್ಚಿಮದಲ್ಲಿ ಕರ್ಮೆಲ್ ಬೆಟ್ಟಕ್ಕೂ ಶೀಹೋರ್ ಲಿಬ್ನತ್ ಎಂಬ ಹಳ್ಳಕ್ಕೂ ತಾಕಿ
- Verse 27: ಅಲ್ಲಿಂದ ಪೂರ್ವಕ್ಕೆ ತಿರುಗಿ ಬೇತ್ ದಾಗೋನಿಗೆ ಹೋಗುತ್ತದೆ. ಅಲ್ಲಿಂದ ಜೆಬುಲೂನ್ಯರ ಎಲ್ಲೆಗೂ ಇಫ್ತಹೇಲ್ ಕಣಿವೆಯ ಉತ್ತರದಿಕ್ಕಿನ ಮೂಲೆಗೂ ಹೊಂದಿಕೊಂಡು ಬೇತ್ ಏಮೆಕ್, ನೆಗೀಯೆಲ್ ಇವುಗಳ ಮೇಲೆ ಉತ್ತರಕ್ಕೆ ಮುಂದುವರೆದು
- Verse 28: ಕಾಬೂಲ್, ಎಬ್ರೋನ್, ರೆಹೋಬ್, ಹಮ್ಮೋನ್, ಕಾನಾ ಇವುಗಳ ಮೇಲೆ ಸಿದೋನ್ ಎಂಬ ಮಹಾನಗರಕ್ಕೆ ಹೋಗುತ್ತದೆ.
- Verse 29: ಅಲ್ಲಿಂದ ಅದು ತಿರುಗಿಕೊಂಡು ರಾಮಾ, ಟೈರ್ ಕೋಟೆ, ಹೋಸಾ ಇವುಗಳ ಮೇಲೆ ಅಕ್ಜೀಬ್ ಪ್ರಾಂತ್ಯಕ್ಕೆ ಹೋಗಿ ಸಮುದ್ರತೀರದಲ್ಲಿ ಕೊನೆಗೊಳ್ಳುತ್ತದೆ.
- Verse 30: ಉಮ್ಮಾ, ಅಫೇಕ್, ರೆಹೂಬ್ ಇವೇ ಮೊದಲಾದ ಇಪ್ಪತ್ತೆರಡು ನಗರಗಳೂ ಅವುಗಳ ಗ್ರಾಮಗಳೂ
- Verse 31: ಅಶೇರ್ ಕುಲದ ಗೋತ್ರಗಳ ಸೊತ್ತಾಗಿವೆ.
- Verse 32: ಆರನೇ ಸಾರಿಯ ಚೀಟು ನಫ್ತಾಲಿ ಕುಲದವರಿಗೆ ಬಿದ್ದಿತು. ಆ ಕುಲದ ಗೋತ್ರಗಳಿಗೆ ಸಿಕ್ಕಿದ ಸೊತ್ತಿನ ಎಲ್ಲೆ ಹೀಗಿದೆ:
- Verse 33: ಚಾನನ್ನೀಮಿನಲ್ಲಿರುವ ಹೇಲೆಫಿನ ಅಲ್ಲೋನ್ ಮರದಿಂದ ತೊಡಗಿ ಅದಾಮೀನೆಕೆಬ್, ಯೆಬ್ನೆಯೇಲ್ ಇವುಗಳ ಮೇಲೆ ಲಕ್ಕೂಮಿಗೆ ಹೋಗಿ ಜೋರ್ಡನ್ ನದಿಯ ತೀರದಲ್ಲಿ ಮುಗಿಯುತ್ತದೆ.
- Verse 34: ಮತ್ತೆ ಅದೇ ಸ್ಥಳದಿಂದ ತೊಡಗಿ ಅಜ್ನೋತ್ ತಾಬೋರಿನ ಮೇಲೆ ಹುಕ್ಕೋಕಿಗೆ ಹೋಗುತ್ತದೆ. ದಕ್ಷಿಣದಲ್ಲಿ ಜೆಬುಲೂನ್ಯರ ಎಲ್ಲೆಗೂ ಪಶ್ಚಿಮದಲ್ಲಿ ಆಶೇರ್ಯರ ಮತ್ತು ಯೂದವಂಶದವರ ಎಲ್ಲೆಗೂ ಪೂರ್ವದಲ್ಲಿ ಜೋರ್ಡನ್ ನದಿಗೂ ಹೊಂದಿಕೊಂಡಿರುತ್ತದೆ.
- Verse 35: ಚಿದ್ದೀಮ್, ಚೇರ್, ಹಮ್ಮತ್,
- Verse 36: ರಕ್ಕತ್, ಕಿನ್ನೆರೆತ್, ಅದಾಮಾ, ರಾಮಾ, ಹಾಚೋರ್,
- Verse 37: ಕೆದೆಷ್, ಎದ್ರೈ, ಏನ್ ಹಾಚೋರ್, ಇರೋನ್, ಮಿಗ್ದಲೇಲ್, ಹೊರೇಮ್, ಬೇತನಾತ್, ಬೇತ್ ಷೆಮೆಷ್ ಇವೇ ಮೊದಲಾದ ಹತ್ತೊಂಬತ್ತು ಕೋಟೆಕೊತ್ತಲಗಳುಳ್ಳ ನಗರಗಳೂ ಅವುಗಳ ಗ್ರಾಮಗಳೂ
- Verse 38: ಕೆದೆಷ್, ಎದ್ರೈ, ಏನ್ ಹಾಚೋರ್, ಇರೋನ್, ಮಿಗ್ದಲೇಲ್, ಹೊರೇಮ್, ಬೇತನಾತ್, ಬೇತ್ ಷೆಮೆಷ್ ಇವೇ ಮೊದಲಾದ ಹತ್ತೊಂಬತ್ತು ಕೋಟೆಕೊತ್ತಲಗಳುಳ್ಳ ನಗರಗಳೂ ಅವುಗಳ ಗ್ರಾಮಗಳೂ
- Verse 39: ನಫ್ತಾಲಿ ಕುಲದ ಗೋತ್ರಗಳಿಗೆ ಸಿಕ್ಕಿದ ಸೊತ್ತಾಗಿವೆ.
- Verse 40: ಏಳನೇ ಸಾರಿಯ ಚೀಟು ದಾನ್ ಕುಲದವರಿಗೆ ಬಿದ್ದಿತು. ಅವರ ಗೋತ್ರಗಳಿಗೆ ಸೊತ್ತಾಗಿ ದೊರಕಿದ ಊರುಗಳು ಇವು:
- Verse 41: ಚೊರ್ಗಾ, ಎಷ್ಟಾವೋಲ್,
- Verse 42: ಈರ್ಷೆಮೆಷ್, ಶಾಲಬ್ಬೀನ್, ಅಯ್ಯಾಲೋನ್,
- Verse 43: ಇತ್ಲಾ, ಏಲೋನ್, ತಿಮ್ಮಾ, ಎಕ್ರೋನ್, ಎಲ್ತೆಕೇ,
- Verse 44: ಇತ್ಲಾ, ಏಲೋನ್, ತಿಮ್ಮಾ, ಎಕ್ರೋನ್, ಎಲ್ತೆಕೇ,
- Verse 45: ಗಿಬ್ಬೆತೋನ್, ಬಾಲತ್, ಯೆಹುದ್, ಬೆನೇಬೆರಕ್,
- Verse 46: ಗತ್ ರಿಮ್ಮೋನ್, ಮೇಯರ್ಕೋನ್, ರಕ್ಕೋನ್, ಮತ್ತು ಜೊಪ್ಪಕ್ಕೆ ಎದುರಿಗಿರುವ ಪ್ರದೇಶವೂ ಇವರಿಗೆ ದೊರಕಿತು.
- Verse 47: ದಾನ್ ಕುಲದವರು ತಮ್ಮ ಪ್ರಾಂತ್ಯವನ್ನು ವಿಸ್ತರಿಸುವುದಕ್ಕಾಗಿ ಹೊರಟು ಲೆಷೆಮಿನವರೊಡನೆ ಯುದ್ಧಮಾಡಿ ಜಯಿಸಿದರು. ಆ ಜನರನ್ನು ಕತ್ತಿಯಿಂದ ಸಂಹರಿಸಿ ಅವರ ನಗರವನ್ನು ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸಿಸಿದರು. ಅಲ್ಲದೆ, ಅದಕ್ಕೆ ತಮ್ಮ ಮೂಲ ಪುರುಷನ ಹೆಸರಾದ ದಾನ್ ಎಂಬ ಹೆಸರನ್ನಿಟ್ಟರು.
- Verse 48: ದಾನ್ ಕುಲದ ಗೋತ್ರಗಳಿಗೆ ದೊರಕಿದ ಸೊತ್ತು ಹಾಗೂ ಅದರಲ್ಲಿದ್ದ ನಗರ ಹಾಗೂ ಗ್ರಾಮಗಳು ಇವೇ.
- Verse 49: ಇಸ್ರಯೇಲರು ನಾಡನ್ನು ಎಲ್ಲೆಎಲ್ಲೆಗಳ ಪ್ರಕಾರ ತಮ್ಮೊಳಗೆ ಹಂಚಿಕೊಂಡ ಮೇಲೆ ನೂನನ ಮಗ ಯೆಹೋಶುವನಿಗೂ ತಮ್ಮದರಲ್ಲಿ ಪಾಲು ಕೊಟ್ಟರು.
- Verse 50: ಆತ ತನಗೋಸ್ಕರ ಎಫ್ರಯಿಮರ ಮಲೆನಾಡಿನಲ್ಲಿರುವ ‘ತಿಮ್ನತ್ ಸೆರಹ’ ಎಂಬ ನಗರವನ್ನು ಕೇಳಿಕೊಂಡನು. ಸರ್ವೇಶ್ವರನ ಆಜ್ಞೆಯಂತೆ ಅವರು ಅದನ್ನು ಅವನಿಗೆ ಕೊಟ್ಟರು. ಅವನು ಅದನ್ನು ಹೊಸದಾಗಿ ಕಟ್ಟಿ ಅದರಲ್ಲೇ ವಾಸಮಾಡಿದನು.
- Verse 51: ಹೀಗೆ ಯಾಜಕ ಎಲ್ಲಾಜಾರನು, ನೂನನ ಮಗ ಯೆಹೋಶುವ ಮತ್ತು ಇಸ್ರಯೇಲ್ ಕುಲ ಮುಖ್ಯಸ್ಥರೂ ಶೀಲೋವಿನಲ್ಲಿದ್ದ ದೇವದರ್ಶನದ ಗುಡಾರದ ದ್ವಾರದಲ್ಲಿ ಸರ್ವೇಶ್ವರನ ಸನ್ನಿಧಿಯಲ್ಲೇ ಚೀಟುಹಾಕಿ ಪ್ರಾಂತ್ಯಗಳನ್ನು ಹಂಚಿಕೊಟ್ಟರು; ನಾಡಿನ ವಿಭಜನಾಕಾರ್ಯ ಮುಗಿಯಿತು.