పరిశుద్ధ గ్రంథము
ಹೊಸ ಒಡಂಬಡಿಕೆ
2 ತಿಮೊಥೇಯನಿಗೆ
1ನೇ ಅಧ್ಯಾಯ
- Verse 1: ನನ್ನ ಪ್ರೀತಿಯ ಪುತ್ರ ತಿಮೊಥೇಯನಿಗೆ ಪೌಲನು ಬರೆಯುವ ಪತ್ರ. ಕ್ರಿಸ್ತಯೇಸುವಿನಲ್ಲಿರುವವರಿಗೆ ಲಭಿಸುವ ಅಮರ ಜೀವದ ವಾಗ್ದಾನವನ್ನು ಸಾರಲು ದೈವಚಿತ್ತಾನುಸಾರ ಪ್ರೇಷಿತನಾದ ನಾನು ತಿಳಿಸುವುದೇನೆಂದರೆ: ಪಿತನಾಗಿರುವ ದೇವರೂ ಒಡೆಯರಾದ ಕ್ರಿಸ್ತಯೇಸುವೂ ನಿಮಗೆ ಕೃಪೆಯನ್ನೂ ಕರುಣೆಯನ್ನೂ ಶಾಂತಿಯನ್ನು ಅನುಗ್ರಹಿಸಲಿ!
- Verse 2: ನನ್ನ ಪ್ರೀತಿಯ ಪುತ್ರ ತಿಮೊಥೇಯನಿಗೆ ಪೌಲನು ಬರೆಯುವ ಪತ್ರ. ಕ್ರಿಸ್ತಯೇಸುವಿನಲ್ಲಿರುವವರಿಗೆ ಲಭಿಸುವ ಅಮರ ಜೀವದ ವಾಗ್ದಾನವನ್ನು ಸಾರಲು ದೈವಚಿತ್ತಾನುಸಾರ ಪ್ರೇಷಿತನಾದ ನಾನು ತಿಳಿಸುವುದೇನೆಂದರೆ: ಪಿತನಾಗಿರುವ ದೇವರೂ ಒಡೆಯರಾದ ಕ್ರಿಸ್ತಯೇಸುವೂ ನಿಮಗೆ ಕೃಪೆಯನ್ನೂ ಕರುಣೆಯನ್ನೂ ಶಾಂತಿಯನ್ನು ಅನುಗ್ರಹಿಸಲಿ!
- Verse 3: ನಾನು ಹಗಲಿರುಳೂ ನನ್ನ ಪ್ರಾರ್ಥನೆಯಲ್ಲಿ ತಪ್ಪದೆ ನಿನ್ನನ್ನು ಸ್ಮರಿಸಿಕೊಳ್ಳುತ್ತೇನೆ. ನನ್ನ ಪೂರ್ವಿಕರ ಹಾಗೆ ಶುದ್ಧಮನಸ್ಸಾಕ್ಷಿಯಿಂದ ನನ್ನ ಆರಾಧ್ಯ ದೇವರಿಗೆ ನಿನ್ನ ವಿಷಯವಾಗಿ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಅಂದು ನೀನು ಸುರಿಸಿದ ಕಣ್ಣೀರನ್ನು ನಾನು ಇನ್ನೂ ಮರೆತಿಲ್ಲ. ನಿನ್ನನ್ನು ಪುನಃ ನೋಡಿ ಆನಂದಪಡಬೇಕೆಂದು ಹಂಬಲಿಸುತ್ತಿದ್ದೇನೆ.
- Verse 4: ನಾನು ಹಗಲಿರುಳೂ ನನ್ನ ಪ್ರಾರ್ಥನೆಯಲ್ಲಿ ತಪ್ಪದೆ ನಿನ್ನನ್ನು ಸ್ಮರಿಸಿಕೊಳ್ಳುತ್ತೇನೆ. ನನ್ನ ಪೂರ್ವಿಕರ ಹಾಗೆ ಶುದ್ಧಮನಸ್ಸಾಕ್ಷಿಯಿಂದ ನನ್ನ ಆರಾಧ್ಯ ದೇವರಿಗೆ ನಿನ್ನ ವಿಷಯವಾಗಿ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಅಂದು ನೀನು ಸುರಿಸಿದ ಕಣ್ಣೀರನ್ನು ನಾನು ಇನ್ನೂ ಮರೆತಿಲ್ಲ. ನಿನ್ನನ್ನು ಪುನಃ ನೋಡಿ ಆನಂದಪಡಬೇಕೆಂದು ಹಂಬಲಿಸುತ್ತಿದ್ದೇನೆ.
- Verse 5: ನಿನ್ನ ದೃಢವಿಶ್ವಾಸವು ನನ್ನ ನೆನಪಿನಲ್ಲಿದೆ. ನಿನ್ನ ಅಜ್ಜಿ ಲೋವಿಯಳಲ್ಲೂ ತಾಯಿ ಯೂನಿಸಳಲ್ಲೂ ನೆಲೆಗೊಂಡಿದ್ದ ವಿಶ್ವಾಸ ಈಗ ನಿನ್ನಲ್ಲೂ ಪೂರ್ಣವಾಗಿ ನೆಲೆಗೊಂಡಿದೆಯೆಂದು ನಾನು ನಂಬಿದ್ದೇನೆ.
- Verse 6: ನಾನು ನಿನ್ನ ಮೇಲೆ ಹಸ್ತ ನಿಕ್ಷೇಪಮಾಡಿ ಪ್ರಾರ್ಥಿಸಿದಾಗ ನೀನು ಪಡೆದಂಥ ವರದಾನವನ್ನು ಪುನಃ ಪ್ರಜ್ವಲಿಸುವಂತೆ ಮಾಡಬೇಕೆಂದು ನಿನಗೆ ಜ್ಞಾಪಿಸುತ್ತೇನೆ.
- Verse 7: ದೇವರು ನಮಗೆ ಪ್ರದಾನಮಾಡಿರುವ ಪವಿತ್ರಾತ್ಮ ನಮ್ಮನ್ನು ಹೇಡಿಗಳನ್ನಾಗಿ ಮಾಡುವುದಿಲ್ಲ; ನಮ್ಮಲ್ಲಿ ದೈವೀಶಕ್ತಿ, ಪ್ರೀತಿ ಹಾಗೂ ಸಂಯಮಗಳು ಪ್ರವರ್ಧಿಸುವಂತೆ ಮಾಡುತ್ತಾರೆ.
- Verse 8: ಆದ್ದರಿಂದ ಕ್ರಿಸ್ತಯೇಸುವಿಗೆ ಸಾಕ್ಷಿ ಆಗಿರಲು ನಾಚಬೇಡ. ಅವರಿಗಾಗಿ ಬಂಧಿಯಾಗಿರುವ ನನ್ನ ವಿಷಯದಲ್ಲೂ ನಾಚಬೇಡ. ದೇವರ ಶಕ್ತಿಯನ್ನು ಆಶ್ರಯಿಸಿ ನನ್ನೊಡನೆ ಶುಭಸಂದೇಶಕ್ಕೋಸ್ಕರ ನಿನ್ನ ಪಾಲಿನ ಶ್ರಮವನ್ನು ಅನುಭವಿಸು.
- Verse 9: ನಾವು ಸ್ವಂತ ಸತ್ಕಾರ್ಯಗಳಿಂದಲ್ಲ, ದೇವರ ಯೋಜನೆ ಹಾಗೂ ಅನುಗ್ರಹಗಳಿಂದಲೇ ಜೀವೋದ್ಧಾರ ವರವನ್ನು ಪಡೆದಿದ್ದೇವೆ; ದೇವರ ಪ್ರಜೆಗಳೆನಿಸಿಕೊಂಡಿದ್ದೇವೆ. ಈ ಅನುಗ್ರಹವನ್ನು ಕ್ರಿಸ್ತಯೇಸುವಿನಲ್ಲಿ ಅನಾದಿಯಿಂದಲೇ ನಮಗೆ ಕೊಡಲಾಯಿತು.
- Verse 10: ಈ ಕಾಲದಲ್ಲೂ ನಮ್ಮ ಉದ್ಧಾರಕ ಕ್ರಿಸ್ತಯೇಸುವಿನ ಪ್ರತ್ಯಕ್ಷದ ಮೂಲಕ ಅದನ್ನು ಬಹಿರಂಗಪಡಿಸಲಾಗಿದೆ. ಮೃತ್ಯುಶಕ್ತಿಯನ್ನು ವಿನಾಶಗೊಳಿಸಿ ಅಮರ ಜೀವವನ್ನು ಶುಭಸಂದೇಶದ ಮೂಲಕ ಬೆಳಕಿಗೆ ತಂದವರು ಯೇಸುವೇ.
- Verse 11: ಈ ಶುಭಸಂದೇಶವನ್ನು ಸಾರುವುದಕ್ಕೇ ಎಂದು ದೇವರು ನನ್ನನ್ನು ಪ್ರೇಷಿತನನ್ನಾಗಿಯೂ ಬೋಧಕನನ್ನಾಗಿಯೂ ನೇಮಿಸಿದ್ದಾರೆ.
- Verse 12: ಇದಕ್ಕಾಗಿಯೇ ಇಷ್ಟೆಲ್ಲಾ ಕಷ್ಟಕಾರ್ಪಣ್ಯಗಳನ್ನು ನಾಚಿಕೆಪಡದೆ ಅನುಭವಿಸುತ್ತಿದ್ದೇನೆ. ನಾನು ಯಾರಲ್ಲಿ ವಿಶ್ವಾಸವನ್ನಿಟ್ಟಿದ್ದೇನೆ ಎಂದು ಚೆನ್ನಾಗಿ ಬಲ್ಲೆ. ನನ್ನ ವಶಕ್ಕೆ ಒಪ್ಪಿಸಿರುವುದನ್ನು ಆ ದಿನದವರೆಗೂ ಕಾಪಾಡುವುದಕ್ಕೆ ಅವರು ಶಕ್ತರು. ಆದ್ದರಿಂದ ನಾನು ಪೂರ್ಣ ಭರವಸೆಯಿಂದ ಇದ್ದೇನೆ.
- Verse 13: ಕ್ರಿಸ್ತಯೇಸುವಿನಲ್ಲಿ ನಮ್ಮದಾಗಿರುವ ವಿಶ್ವಾಸ ಹಾಗೂ ಪ್ರೀತಿಯಲ್ಲಿ ನೀನು ನೆಲೆಗೊಂಡಿರು. ನಾನು ಬೋಧಿಸಿದ್ದನ್ನು ಆದರ್ಶವಾಗಿಟ್ಟುಕೊಂಡು ಅನುಸರಿಸು.
- Verse 14: ನಿನ್ನ ವಶಕ್ಕೆ ಕೊಡಲಾಗಿರುವ ಸದ್ಬೋಧನೆಯನ್ನು ನಮ್ಮಲ್ಲಿ ವಾಸಿಸುವ ಪವಿತ್ರಾತ್ಮರ ಸಹಾಯದಿಂದ ಸುರಕ್ಷಿತವಾಗಿಡು.
- Verse 15: ಏಷ್ಯಾ ಪ್ರಾಂತ್ಯದವರೆಲ್ಲ ನನ್ನನ್ನು ಕೈಬಿಟ್ಟುಹೋದರೆಂದು ನೀನು ಬಲ್ಲೆ. ಅವರೊಡನೆ ಫುಗೇಲನೂ ಹೆರ್ಮೊಗೇನನೂ ಸಹ ಹೊರಟುಹೋದರು.
- Verse 16: ಒನೇಸಿಫೊರನ ಕುಟುಂಬವನ್ನು ಪ್ರಭು ಆಶೀರ್ವದಿಸಲಿ. ಆತನು ಅನೇಕ ಸಾರಿ ನನ್ನನ್ನು ಆದರಿಸಿದನು.
- Verse 17: ನಾನು ಸೆರೆಯಾಳಾಗಿದ್ದರೂ ನಾಚಿಕೆಪಡದೆ ತಾನು ರೋಮ್ ನಗರಕ್ಕೆ ಬಂದ ಕೂಡಲೇ ನನ್ನನ್ನು ಎಲ್ಲೆಡೆಗಳಲ್ಲೂ ಹುಡುಕಿ ಕಂಡುಹಿಡಿದನು.
- Verse 18: ಅಂತಿಮ ದಿನದಂದು ಪ್ರಭು ಯೇಸು ಆತನಿಗೆ ಕರುಣೆತೋರಲಿ. ನಾನು ಏಷ್ಯಾದಲ್ಲಿದ್ದಾಗ ಆತನು ನನಗೆ ಎಷ್ಟೊಂದು ನೆರವು ನೀಡಿದನೆಂದು ನಿನಗೆ ಚೆನ್ನಾಗಿ ತಿಳಿದಿದೆ.