పరిశుద్ధ గ్రంథము
ಹಳೆಯ ಒಡಂಬಡಿಕೆ
ಕೀರ್ತನೆಗಳು
128ನೇ ಅಧ್ಯಾಯ
1 : ಧನ್ಯನು, ಪ್ರಭುವಿನಲಿ ಭಯಭಕ್ತಿಯುಳ್ಳವನು I ಧನ್ಯನು, ಆತನ ಮಾರ್ಗಗಳಲೇ ನಡೆಯುವವನು II
2 : ನಿನ್ನ ಕೈ ಕೆಸರಾದರೆ ಬಾಯಿ ಮೊಸರಾಗುವುದು I ಧನ್ಯನಾಗುವೆ ನೀನು; ನಿನಗೆ ಶುಭವಾಗುವುದು II
3 : ಇರುವಳು ನಿನ್ನ ಪತ್ನಿ ಮನೆಯಲ್ಲಿ ಫಲಭರಿತ ದ್ರಾಕ್ಷಾಲತೆಯಂತೆ I ಕೂರುವರು ನಿನ್ನ ಮಕ್ಕಳು ಊಟದ ಪಂಕ್ತಿಯಲಿ ಓಲಿವ್ ಸಸಿಗಳಂತೆ II
4 : ಹೊಂದುವನು ಅಂತಹ ಆಶೀರ್ವಾದವನು I ಪ್ರಭುವಿನಲಿ ಭಯಭಕ್ತಿಯುಳ್ಳವನು II
5 : ಸಿಯೋನಿನಲ್ಲಿರುವ ಪ್ರಭು ನಿನ್ನನು ಆಶೀರ್ವದಿಸಲಿ I ಜೆರುಸಲೇಮಿನ ಏಳ್ಗೆಯನು ಕಾಣು ಇಡೀ ಜೀವಮಾನದಲಿ II
6 : ಮಕ್ಕಳ ಮಕ್ಕಳನು ನೀನು ಕಾಣುವಂತಾಗಲಿ I ಇಸ್ರಯೇಲಿನ ಮಕ್ಕಳಿಗೆ ಸುಖಶಾಂತಿ ಲಭಿಸಲಿ II