P. O. C ബൈബിള്
ಹಳೆಯ ಒಡಂಬಡಿಕೆ
ಯೆಹೋಶುವ
12ನೇ ಅಧ್ಯಾಯ
- Verse 1: ಇಸ್ರಯೇಲರು ಜೋರ್ಡನ್ ನದಿಯ ಪೂರ್ವದಿಕ್ಕಿನಲ್ಲಿ ಅರ್ನೋನ್ ಕಣಿವೆ ಮೊದಲುಗೊಂಡು ಹೆರ್ಮೋನ್ ಪರ್ವತದವರೆಗಿದ್ದ ಪ್ರದೇಶವನ್ನು ಮತ್ತು ಕಣಿವೆ ಪ್ರದೇಶದ ಪೂರ್ವಭಾಗವನ್ನು ಸ್ವಾಧೀನಮಾಡಿಕೊಂಡರು. ಅವುಗಳಲ್ಲಿದ್ದ ಅರಸರನ್ನು ಸಂಹರಿಸಿದರು.
- Verse 2: ಅವರಲ್ಲಿ ಮೊದಲನೆಯವನು ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸ ಸೀಹೋನ್ ಎಂಬವನು. ಇವನ ರಾಜ್ಯ, ಅರ್ನೋನ್ ಕಣಿವೆಯ ಅಂಚಿನಲ್ಲಿ ಇರುವ ಅರೋಯೇರ್ ನಗರವನ್ನು ಮತ್ತು ಆ ಕಣಿವೆಯಲ್ಲೇ ಇರುವ ನಗರವನ್ನು ಮೊದಲುಗೊಂಡು ಅಮ್ಮೋನಿಯರ ಮೇರೆಯಾಗಿರುವ ಯಬ್ಬೋಕ್ ನದಿಯ ತನಕವಿರುವ ಗಿಲ್ಯಾದಿನ ಅರ್ಧಪ್ರಾಂತ್ಯ,
- Verse 3: ಹಾಗೂ ಜೋರ್ಡನ್ ನದಿಯ ಪೂರ್ವದಲ್ಲಿ ಕಿನ್ನೆರೋತ್ ಸಮುದ್ರದಿಂದ ಲವಣ ಸಮುದ್ರ (ಮೃತ್ಯುಕಡಲು) ಎಣಿಸಿಕೊಳ್ಳುವ ಅರಾಬಾ ಸಮುದ್ರದ ಹತ್ತಿರವಿರುವ ಬೇತ್ ಯೆಷಿಮೋತಿನವರೆಗೂ ದಕ್ಷಿಣದಲ್ಲಿರುವ ಪಿಸ್ಗಾ ಬೆಟ್ಟದ ಬುಡದವರೆಗೂ ಇರುವ ಕಣಿವೆ ಪ್ರದೇಶ ಇವುಗಳಿಂದ ಕೂಡಿತ್ತು.
- Verse 4: ಅಷ್ಟರೋತ್ ಹಾಗೂ ಎದ್ರೈ ಎಂಬ ಊರುಗಳಲ್ಲಿ ವಾಸವಾಗಿದ್ದ ರೆಫಾಯರ ವಂಶಸ್ಥನೂ ಬಾಷಾನಿನ ಅರಸನೂ ಆದ ಓಗನು ವಧಿತರಾದವರಲ್ಲಿ ಎರಡನೆಯವನು.
- Verse 5: ಇವನ ರಾಜ್ಯ, ಹೆರ್ಮೋನ್ ಮಲೆನಾಡು, ಸಲ್ಕಾನಗರ, ಗೆಷೂರ್ಯರ ಮತ್ತು ಮಾಕತೀಯರ ಮೇರೆಯವರೆಗಿದ್ದ ಬಾಷಾನ್ ನಾಡು, ಹೆಷ್ಬೋನಿನ ಅರಸನದ ಸೀಹೋನನ ಮೇರೆಯವರೆಗಿದ್ದ ಗಿಲ್ಯಾದಿನ ಅರ್ಧಪ್ರಾಂತ್ಯ ಇವುಗಳಿಂದ ಕೂಡಿತ್ತು.
- Verse 6: ಸರ್ವೇಶ್ವರನ ದಾಸ ಮೋಶೆ ಇಸ್ರಯೇಲರ ಸಹಿತವಾಗಿ ಈ ಇಬ್ಬರನ್ನು ಸೋಲಿಸಿ ಅವರ ರಾಜ್ಯಗಳನ್ನು ರೂಬೇನ್ಯರಿಗೂ ಗಾದ್ಯರಿಗೂ ಮತ್ತು ಮನಸ್ಸೆಕುಲದ ಅರ್ಧಜನರಿಗೂ ಶಾಶ್ವತ ಸೊತ್ತಾಗಿ ಕೊಟ್ಟನು.
- Verse 7: ಯೆಹೋಶುವನು ಇಸ್ರಯೇಲರ ಸಮೇತ, ಜೋರ್ಡನ್ ನದಿಯ ಪಶ್ಚಿಮದಲ್ಲಿ ಲೆಬನೋನ್ ಕಣಿವೆಯಲ್ಲಿದ್ದ ಬಾಲ್ಗಾದಿನಿಂದ ಸೇಯೀರಿನ ದಾರಿಯಲ್ಲಿದ್ದ ಹಾಲಾಕ್ ಪರ್ವತದವರೆಗೂ ವಿಸ್ತರಿಸಿಕೊಂಡಿದ್ದ ಮಲೆನಾಡಿನ ಪ್ರದೇಶ,
- Verse 8: ಇಳಿಜಾರಿನ ಪ್ರದೇಶ, ಕಣಿವೆ ಪ್ರದೇಶ, ತಪ್ಪಲು ಪ್ರದೇಶ, ಮರುಭೂಮಿ ಹಾಗೂ ದಕ್ಷಿಣಪ್ರಾಂತ್ಯ ಇವುಗಳನ್ನೂ ಇವುಗಳನ್ನು ಆಳುತ್ತಿದ್ದ ಹಿತ್ತೀಯ, ಅಮೋರಿಯ, ಕಾನಾನ್, ಪೆರಿಜ್ಜೀಯ, ಹಿವ್ವಿಯ ಹಾಗೂ ಯೆಬೂಸಿಯ ಅರಸರನ್ನೂ ಸೋಲಿಸಿ ಅವರ ನಾಡುಗಳನ್ನು ಇಸ್ರಯೇಲ್ ಕುಲಭಾಗಗಳಿಗೆ ಶಾಶ್ವತ ಸೊತ್ತಾಗಿ ಕೊಟ್ಟನು. ಆ ಅರಸರ ಪಟ್ಟಿ ಹೀಗಿದೆ :
- Verse 9: ಜೆರಿಕೋವಿನ ಅರಸ - 1 ಬೇತೇಲಿನ ಹತ್ತಿರವಿರುವ ಆಯಿ ಎಂಬ ಊರಿನ ಅರಸ - 1
- Verse 10: ಜೆರೂಸಲೇಮಿನ ಅರಸ - 1 ಹೆಬ್ರೋನಿನ ಅರಸ - 1 ಯರ್ಮೂತಿನ ಅರಸ - 1
- Verse 11: ಲಾಕೀಷಿನ ಅರಸ - 1 ಎಗ್ಲೋನಿನ ಅರಸ - 1
- Verse 12: ಗೆಜೆರಿನ ಅರಸ - 1
- Verse 13: ದೆಬೀರಿನ ಅರಸ - 1
- Verse 14: ಗೆದೆರಿನ ಅರಸ - 1 ಹೊರ್ಮದ ಅರಸ - 1 ಅರಾದಿನ ಅರಸ - 1
- Verse 15: ಲಿಬ್ನದ ಅರಸ - 1 ಅದುಲ್ಲಾಮದ ಅರಸ - 1
- Verse 16: ಮಕ್ಕೇದದ ಅರಸ - 1 ಬೇತೇಲಿನ ಅರಸ - 1
- Verse 17: ತಪ್ಪೂಹದ ಅರಸ - 1 ಹೇಫೆರಿನ ಅರಸ - 1
- Verse 18: ಅಷ್ಟಾರೋನಿನ ಅರಸ - 1 ಅಫೇಕದ ಅರಸ - 1
- Verse 19: ಮಾದೋನಿನ ಅರಸ - 1 ಹಾಚೋರಿನ ಅರಸ - 1 ಶಿಮ್ರೋನ್ಮೆರೋನಿನ ಅರಸ - 1
- Verse 20: ಅಕ್ಷಾಫಿನ ಅರಸ - 1 ತಾನಕದ ಅರಸ - 1
- Verse 21: ಮೆಗಿದ್ದೋವಿನ ಅರಸ - 1 ಕೆದೆಷಿನ ಅರಸ - 1
- Verse 22: ಕರ್ಮೆಲ್ ಬೆಟ್ಟದ ಮೇಲಿರುವ ಯೊಕ್ನೆಯಾಮದ ಅರಸ - 1
- Verse 23: ದೋರ್ ಬೆಟ್ಟದ ಮೇಲಿರುವ ದೋರಿನ ಅರಸ - 1 ಗಿಲ್ಗಾಲಿನವರ ಅರಸ - 1 ತಿರ್ಚದ ಅರಸ - 1
- Verse 24: ಒಟ್ಟು ಅರಸರು 31 ಮಂದಿ.