ಕನ್ನಡ ಸತ್ಯವೇದವು
ಹಳೆಯ ಒಡಂಬಡಿಕೆ
ಕೀರ್ತನೆಗಳು
125ನೇ ಅಧ್ಯಾಯ
- Verse 1: ಪ್ರಭುವಿನಲಿ ನಂಬಿಕೆ ನಿರೀಕ್ಷೆಯಿಂದಿರುವವರು I ನಿಶ್ಚಲ, ಸುಸ್ಥಿರ, ಗಿರಿ ಸಿಯೋನಿನಂತೆ ಇರುವರು II
- Verse 2: ಪರ್ವತಗಳಿರುವಂತೆ ಜೆರುಸಲೇಮಿನ ಸುತ್ತಮುತ್ತಲು I ಇಹನು ಪ್ರಭು ಇಂದಿಗೂ ಎಂದಿಗೂ ತನ್ನ ಜನರ ಸುತ್ತಲು II
- Verse 3: ಸಜ್ಜನರ ನಾಡಿನಲಿ ಉಳಿಯದು ದುರ್ಜನರ ದಬ್ಬಾಳಿಕೆ I ಉಳಿಯಿತಾದರೆ ಸಜ್ಜನರೂ ಕೈಹಚ್ಚಬಹುದು ಅಕ್ರಮಕೆ II
- Verse 4: ಒಳಿತನು ಮಾಡು ಪ್ರಭು, ಒಳ್ಳೆಯವರಿಗೆ I ಒಳ್ಳೆಯವರಿಗೆ ಮೇಣ್ ನೇರ ಮನಸ್ಕರಿಗೆ II
- Verse 5: ಅಕ್ರಮಿಗಳ ದುರ್ಗತಿ ದುರ್ಮಾರ್ಗಿಗಳಿಗೆ I ಶುಭವಾಗಲಿ ಪ್ರಭೂ, ಇಸ್ರಯೇಲರಿಗೆ II