வேதாகமம்
ಹಳೆಯ ಒಡಂಬಡಿಕೆ
ಸಂಖ್ಯಾಕಾಂಡ
1ನೇ ಅಧ್ಯಾಯ
- Verse 1: ಇಸ್ರಯೇಲರು ಈಜಿಪ್ಟ್ ದೇಶವನ್ನು ಬಿಟ್ಟು ಹೊರಟ ಎರಡನೆಯ ವರ್ಷದ ಎರಡನೆಯ ತಿಂಗಳ ಮೊದಲನೆಯ ದಿನ ಸರ್ವೇಶ್ವರ ಸ್ವಾಮಿ ಸೀನಾಯಿ ಮರುಭೂಮಿಯಲ್ಲಿ ದೇವದರ್ಶನದ ಗುಡಾರದಿಂದ ಮೋಶೆಗೆ ಹೀಗೆಂದು ಆಜ್ಞಾಪಿಸಿದರು:
- Verse 2: “ನೀನು ಮತ್ತು ಆರೋನ ಇಸ್ರಯೇಲ್ ಜನಸಮೂಹದ ಗಂಡಸರನ್ನು ಗೋತ್ರ ಹಾಗೂ ಕುಟುಂಬಗಳಿಗೆ ಅನುಗುಣವಾಗಿ ಹೆಸರು ಹಿಡಿದು ಒಬ್ಬೊಬ್ಬರನ್ನಾಗಿ ಎಣಿಸಬೇಕು.
- Verse 3: ಇಸ್ರಯೇಲರಲ್ಲಿ ಸೈನಿಕ ಸೇವೆ ಸಲ್ಲಿಸತಕ್ಕವರನ್ನು, ಅಂದರೆ ಇಪ್ಪತ್ತು ವರ್ಷ ಮೇಲ್ಪಟ್ಟ ವಯಸ್ಸುಳ್ಳ ಎಲ್ಲರನ್ನು ಸೈನ್ಯ ಸೈನ್ಯವಾಗಿ ಪಟ್ಟಿಮಾಡಬೇಕು.
- Verse 4: ಈ ಕೆಲಸಕ್ಕಾಗಿ ಒಂದೊಂದು ಕುಲದಿಂದ ಆಯಾ ಕುಲದ ಮುಖ್ಯಸ್ಥನನ್ನು ಸಹಾಯಕನನ್ನಾಗಿ ತೆಗೆದುಕೊಳ್ಳಿ;
- Verse 5: ನಿಮಗೆ ಸಹಾಯಕರಾಗಿರಬೇಕಾದವರ ಹೆಸರುಗಳು ಇವು: ರೂಬೇನ್ ಕುಲದಿಂದ ಶೆದೇಯೂರನ ಮಗ ಎಲೀಚೂರ್.
- Verse 6: ಸಿಮೆಯೋನ್ ಕುಲದಿಂದ ಚೂರಿಷದ್ದೈಯನ ಮಗ ಶೆಲುಮೀಯೇಲ್
- Verse 7: ಯೆಹೂದ ಕುಲದಿಂದ ಅಮ್ಮೀನಾದಾಬನ ಮಗ ನಹಶೋನ್
- Verse 8: ಇಸ್ಸಾಕಾರ್ ಕುಲದಿಂದ ಚೂವಾರನ ಮಗ ನೆತನೇಲ್
- Verse 9: ಜೆಬುಲೊನ್ ಕುಲದಿಂದ ಹೇಲೋನನ ಮಗ ಎಲೀಯಾಬ್
- Verse 10: ಜೀಸೆಫನ ವಂಶದವರಲ್ಲಿ - ಎಫ್ರಾಯಿಮ್ ಕುಲದಿಂದ ಅಮ್ಮೀಹೂದನ ಮಗ ಎಲೀಷಾಮಾ ಮನಸ್ಸೆ ಕುಲದಿಂದ ಪೆದಾಚೂರನ ಮಗನಾದ ಗಮ್ಲೀಯೇಲ್
- Verse 11: ಬೆನ್ಯಾಮೀನ್ ಕುಲದಿಂದ ಗಿದ್ಯೋನಿಯ ಮಗ ಅಬೀದಾನ್
- Verse 12: ದಾನ್ ಕುಲದಿಂದ ಅಮ್ಮೀಷದ್ದೈಯನ ಮಗ ಅಹೀಗೆಜೆರ್
- Verse 13: ಆಶೇರ್ ಕುಲದಿಂದ ಒಕ್ರಾನನ ಮಗ ಪಗೀಯೇಲ್
- Verse 14: ಗಾದ್ ಕುಲದಿಂದ ರೆಗೂವೇಲನ ಮಗ ಎಲ್ಯಾಸಾಫ್
- Verse 15: ನಫ್ತಾಲಿ ಕುಲದಿಂದ ಏನಾನನ ಮಗ ಅಹೀರ.
- Verse 16: ಇವರು ಸಮಾಜದಲ್ಲಿ ಹೆಸರು ಪಡೆದವರು. ತಮ್ಮ ತಮ್ಮ ಕುಲಗಳಲ್ಲಿ ಪ್ರಧಾನ ಪುರುಷರು, ಇಸ್ರಯೇಲರಲ್ಲಿ ಸಹಸ್ರಾಧಿಪತಿಗಳು.
- Verse 17: ಹೀಗೆ ಹೆಸರಿನಿಂದ ಸೂಚಿತರಾದ ವ್ಯಕ್ತಿಗಳನ್ನು ಮೋಶೆ ಮತ್ತು ಆರೋನರು ಕರೆದರು.
- Verse 18: ಎರಡನೆಯ ತಿಂಗಳಿನ ಮೊದಲನೆ ದಿನ ಜನಸಮೂಹವನ್ನು ಕೂಡಿಸಿದರು. ಇಪ್ಪತ್ತು ವರ್ಷ ಮೇಲ್ಪಟ್ಟ ವಯಸ್ಸಿನವರೆಲ್ಲರೂ ಒಬ್ಬೊಬ್ಬರಾಗಿ ಗೋತ್ರ, ಕುಟುಂಬಗಳ ಪ್ರಕಾರ ತಮ್ಮ ತಮ್ಮ ವಂಶಾವಳಿಯನ್ನು ತಿಳಿಸಿ ಹೆಸರುಗಳನ್ನು ನೊಂದಾಯಿಸಿಕೊಂಡರು.
- Verse 19: ಸರ್ವೇಶ್ವರ ಆಜ್ಞಾಪಿಸಿದಂತೆ ಮೋಶೆ ಸೀನಾಯಿ ಮರುಭೂಮಿಯಲ್ಲಿ ಜನಗಣತಿ ಮಾಡಿದನು.
- Verse 20: ಇಸ್ರಯೇಲನ ಚೊಚ್ಚಲ ಮಗ ರೂಬೇನ್ ವಂಶದವರಲ್ಲಿ ಸೈನಿಕ ಸೇವೆ ಸಲ್ಲಿಸಲು ಶಕ್ತರಾದವರ, ಅಂದರೆ 30 ವರ್ಷ ಮೇಲ್ಪಟ್ಟ ವಯಸ್ಸಿನ ಹಾಗೂ ಗೋತ್ರ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರಿಸಿ ಎಣಿಕೆಯಾದ ಗಂಡಸರ ಸಂಖ್ಯೆ 46,500:
- Verse 21: ಇಸ್ರಯೇಲನ ಚೊಚ್ಚಲ ಮಗ ರೂಬೇನ್ ವಂಶದವರಲ್ಲಿ ಸೈನಿಕ ಸೇವೆ ಸಲ್ಲಿಸಲು ಶಕ್ತರಾದವರ, ಅಂದರೆ 30 ವರ್ಷ ಮೇಲ್ಪಟ್ಟ ವಯಸ್ಸಿನ ಹಾಗೂ ಗೋತ್ರ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರಿಸಿ ಎಣಿಕೆಯಾದ ಗಂಡಸರ ಸಂಖ್ಯೆ 46,500:
- Verse 22: ಸಿಮೆಯೋನ್ ವಂಶದವರಲ್ಲಿ ಸೈನಿಕ ಸೇವೆ ಸಲ್ಲಿಸಲು ಶಕ್ತರಾದವರ, ಅಂದರೆ 30 ವರ್ಷ ಮೇಲ್ಪಟ್ಟ ವಯಸ್ಸಿನ ಹಾಗೂ ಗೋತ್ರ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರಿಸಿ ಎಣಿಕೆಯಾದ ಗಂಡಸರ ಸಂಖ್ಯೆ 59,300:
- Verse 23: ಸಿಮೆಯೋನ್ ವಂಶದವರಲ್ಲಿ ಸೈನಿಕ ಸೇವೆ ಸಲ್ಲಿಸಲು ಶಕ್ತರಾದವರ, ಅಂದರೆ 30 ವರ್ಷ ಮೇಲ್ಪಟ್ಟ ವಯಸ್ಸಿನ ಹಾಗೂ ಗೋತ್ರ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರಿಸಿ ಎಣಿಕೆಯಾದ ಗಂಡಸರ ಸಂಖ್ಯೆ 59,300:
- Verse 24: ಗಾದ್ ವಂಶದವರಲ್ಲಿ ಸೈನಿಕ ಸೇವೆ ಸಲ್ಲಿಸಲು ಶಕ್ತರಾದವರ, ಅಂದರೆ 30 ವರ್ಷ ಮೇಲ್ಪಟ್ಟ ವಯಸ್ಸಿನ ಹಾಗೂ ಗೋತ್ರ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರಿಸಿ ಎಣಿಕೆಯಾದ ಗಂಡಸರ ಸಂಖ್ಯೆ 45,650:
- Verse 25: ಗಾದ್ ವಂಶದವರಲ್ಲಿ ಸೈನಿಕ ಸೇವೆ ಸಲ್ಲಿಸಲು ಶಕ್ತರಾದವರ, ಅಂದರೆ 30 ವರ್ಷ ಮೇಲ್ಪಟ್ಟ ವಯಸ್ಸಿನ ಹಾಗೂ ಗೋತ್ರ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರಿಸಿ ಎಣಿಕೆಯಾದ ಗಂಡಸರ ಸಂಖ್ಯೆ 45,650:
- Verse 26: ಯೆಹೂದ ವಂಶದವರಲ್ಲಿ ಸೈನಿಕ ಸೇವೆ ಸಲ್ಲಿಸಲು ಶಕ್ತರಾದವರ, ಅಂದರೆ 30 ವರ್ಷ ಮೇಲ್ಪಟ್ಟ ವಯಸ್ಸಿನ ಹಾಗೂ ಗೋತ್ರ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರಿಸಿ ಎಣಿಕೆಯಾದ ಗಂಡಸರ ಸಂಖ್ಯೆ 74,600:
- Verse 27: ಯೆಹೂದ ವಂಶದವರಲ್ಲಿ ಸೈನಿಕ ಸೇವೆ ಸಲ್ಲಿಸಲು ಶಕ್ತರಾದವರ, ಅಂದರೆ 30 ವರ್ಷ ಮೇಲ್ಪಟ್ಟ ವಯಸ್ಸಿನ ಹಾಗೂ ಗೋತ್ರ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರಿಸಿ ಎಣಿಕೆಯಾದ ಗಂಡಸರ ಸಂಖ್ಯೆ 74,600:
- Verse 28: ಇಸ್ಸಾಕಾರ್ ವಂಶದವರಲ್ಲಿ ಸೈನಿಕ ಸೇವೆ ಸಲ್ಲಿಸಲು ಶಕ್ತರಾದವರ, ಅಂದರೆ 30 ವರ್ಷ ಮೇಲ್ಪಟ್ಟ ವಯಸ್ಸಿನ ಹಾಗೂ ಗೋತ್ರ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರಿಸಿ ಎಣಿಕೆಯಾದ ಗಂಡಸರ ಸಂಖ್ಯೆ 54,400:
- Verse 29: ಇಸ್ಸಾಕಾರ್ ವಂಶದವರಲ್ಲಿ ಸೈನಿಕ ಸೇವೆ ಸಲ್ಲಿಸಲು ಶಕ್ತರಾದವರ, ಅಂದರೆ 30 ವರ್ಷ ಮೇಲ್ಪಟ್ಟ ವಯಸ್ಸಿನ ಹಾಗೂ ಗೋತ್ರ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರಿಸಿ ಎಣಿಕೆಯಾದ ಗಂಡಸರ ಸಂಖ್ಯೆ 54,400:
- Verse 30: ಜೆಬುಲೂನ್ ವಂಶದವರಲ್ಲಿ ಸೈನಿಕ ಸೇವೆ ಸಲ್ಲಿಸಲು ಶಕ್ತರಾದವರ, ಅಂದರೆ 30 ವರ್ಷ ಮೇಲ್ಪಟ್ಟ ವಯಸ್ಸಿನ ಹಾಗೂ ಗೋತ್ರ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರಿಸಿ ಎಣಿಕೆಯಾದ ಗಂಡಸರ ಸಂಖ್ಯೆ 57,400:
- Verse 31: ಜೆಬುಲೂನ್ ವಂಶದವರಲ್ಲಿ ಸೈನಿಕ ಸೇವೆ ಸಲ್ಲಿಸಲು ಶಕ್ತರಾದವರ, ಅಂದರೆ 30 ವರ್ಷ ಮೇಲ್ಪಟ್ಟ ವಯಸ್ಸಿನ ಹಾಗೂ ಗೋತ್ರ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರಿಸಿ ಎಣಿಕೆಯಾದ ಗಂಡಸರ ಸಂಖ್ಯೆ 57,400:
- Verse 32: ಜೋಸೆಫನಿಂದ ಹುಟ್ಟಿದವರೊಳಗೆ: ಎಫ್ರಾಯೀಮ್ ವಂಶದವರಲ್ಲಿ ಸೈನಿಕ ಸೇವೆ ಸಲ್ಲಿಸಲು ಶಕ್ತರಾದವರ, ಅಂದರೆ 30 ವರ್ಷ ಮೇಲ್ಪಟ್ಟ ವಯಸ್ಸಿನ ಹಾಗೂ ಗೋತ್ರ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರಿಸಿ ಎಣಿಕೆಯಾದ ಗಂಡಸರ ಸಂಖ್ಯೆ 40,500:
- Verse 33: ಜೋಸೆಫನಿಂದ ಹುಟ್ಟಿದವರೊಳಗೆ: ಎಫ್ರಾಯೀಮ್ ವಂಶದವರಲ್ಲಿ ಸೈನಿಕ ಸೇವೆ ಸಲ್ಲಿಸಲು ಶಕ್ತರಾದವರ, ಅಂದರೆ 30 ವರ್ಷ ಮೇಲ್ಪಟ್ಟ ವಯಸ್ಸಿನ ಹಾಗೂ ಗೋತ್ರ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರಿಸಿ ಎಣಿಕೆಯಾದ ಗಂಡಸರ ಸಂಖ್ಯೆ 40,500:
- Verse 34: ಮನಸ್ಸೆ ವಂಶದವರಲ್ಲಿ ಸೈನಿಕ ಸೇವೆ ಸಲ್ಲಿಸಲು ಶಕ್ತರಾದವರ, ಅಂದರೆ 30 ವರ್ಷ ಮೇಲ್ಪಟ್ಟ ವಯಸ್ಸಿನ ಹಾಗೂ ಗೋತ್ರ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರಿಸಿ ಎಣಿಕೆಯಾದ ಗಂಡಸರ ಸಂಖ್ಯೆ 32,200:
- Verse 35: ಮನಸ್ಸೆ ವಂಶದವರಲ್ಲಿ ಸೈನಿಕ ಸೇವೆ ಸಲ್ಲಿಸಲು ಶಕ್ತರಾದವರ, ಅಂದರೆ 30 ವರ್ಷ ಮೇಲ್ಪಟ್ಟ ವಯಸ್ಸಿನ ಹಾಗೂ ಗೋತ್ರ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರಿಸಿ ಎಣಿಕೆಯಾದ ಗಂಡಸರ ಸಂಖ್ಯೆ 32,200:
- Verse 36: ಬೆನ್ಯಾಮೀನ್ ವಂಶದವರಲ್ಲಿ ಸೈನಿಕ ಸೇವೆ ಸಲ್ಲಿಸಲು ಶಕ್ತರಾದವರ, ಅಂದರೆ 30 ವರ್ಷ ಮೇಲ್ಪಟ್ಟ ವಯಸ್ಸಿನ ಹಾಗೂ ಗೋತ್ರ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರಿಸಿ ಎಣಿಕೆಯಾದ ಗಂಡಸರ ಸಂಖ್ಯೆ 35,400:
- Verse 37: ಬೆನ್ಯಾಮೀನ್ ವಂಶದವರಲ್ಲಿ ಸೈನಿಕ ಸೇವೆ ಸಲ್ಲಿಸಲು ಶಕ್ತರಾದವರ, ಅಂದರೆ 30 ವರ್ಷ ಮೇಲ್ಪಟ್ಟ ವಯಸ್ಸಿನ ಹಾಗೂ ಗೋತ್ರ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರಿಸಿ ಎಣಿಕೆಯಾದ ಗಂಡಸರ ಸಂಖ್ಯೆ 35,400:
- Verse 38: ದಾನ್ ವಂಶದವರಲ್ಲಿ ಸೈನಿಕ ಸೇವೆ ಸಲ್ಲಿಸಲು ಶಕ್ತರಾದವರ, ಅಂದರೆ 30 ವರ್ಷ ಮೇಲ್ಪಟ್ಟ ವಯಸ್ಸಿನ ಹಾಗೂ ಗೋತ್ರ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರಿಸಿ ಎಣಿಕೆಯಾದ ಗಂಡಸರ ಸಂಖ್ಯೆ 62,700:
- Verse 39: ದಾನ್ ವಂಶದವರಲ್ಲಿ ಸೈನಿಕ ಸೇವೆ ಸಲ್ಲಿಸಲು ಶಕ್ತರಾದವರ, ಅಂದರೆ 30 ವರ್ಷ ಮೇಲ್ಪಟ್ಟ ವಯಸ್ಸಿನ ಹಾಗೂ ಗೋತ್ರ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರಿಸಿ ಎಣಿಕೆಯಾದ ಗಂಡಸರ ಸಂಖ್ಯೆ 62,700:
- Verse 40: ಆಶೇರ್ ವಂಶದವರಲ್ಲಿ ಸೈನಿಕ ಸೇವೆ ಸಲ್ಲಿಸಲು ಶಕ್ತರಾದವರ, ಅಂದರೆ 30 ವರ್ಷ ಮೇಲ್ಪಟ್ಟ ವಯಸ್ಸಿನ ಹಾಗೂ ಗೋತ್ರ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರಿಸಿ ಎಣಿಕೆಯಾದ ಗಂಡಸರ ಸಂಖ್ಯೆ 41,500:
- Verse 41: ಆಶೇರ್ ವಂಶದವರಲ್ಲಿ ಸೈನಿಕ ಸೇವೆ ಸಲ್ಲಿಸಲು ಶಕ್ತರಾದವರ, ಅಂದರೆ 30 ವರ್ಷ ಮೇಲ್ಪಟ್ಟ ವಯಸ್ಸಿನ ಹಾಗೂ ಗೋತ್ರ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರಿಸಿ ಎಣಿಕೆಯಾದ ಗಂಡಸರ ಸಂಖ್ಯೆ 41,500:
- Verse 42: ನಫ್ತಾಲಿ ವಂಶದವರಲ್ಲಿ ಸೈನಿಕ ಸೇವೆ ಸಲ್ಲಿಸಲು ಶಕ್ತರಾದವರ, ಅಂದರೆ 30 ವರ್ಷ ಮೇಲ್ಪಟ್ಟ ವಯಸ್ಸಿನ ಹಾಗೂ ಗೋತ್ರ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರಿಸಿ ಎಣಿಕೆಯಾದ ಗಂಡಸರ ಸಂಖ್ಯೆ 53,400:
- Verse 43: ನಫ್ತಾಲಿ ವಂಶದವರಲ್ಲಿ ಸೈನಿಕ ಸೇವೆ ಸಲ್ಲಿಸಲು ಶಕ್ತರಾದವರ, ಅಂದರೆ 30 ವರ್ಷ ಮೇಲ್ಪಟ್ಟ ವಯಸ್ಸಿನ ಹಾಗೂ ಗೋತ್ರ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರಿಸಿ ಎಣಿಕೆಯಾದ ಗಂಡಸರ ಸಂಖ್ಯೆ 53,400:
- Verse 44: ಮೋಶೆ, ಆರೋನ್ ಮತ್ತು ಕುಲಪ್ರತಿನಿಧಿಗಳಾದ ಆ ಹನ್ನೆರಡು ಪ್ರಧಾನರು ಎಣಿಸಿದ ಇಸ್ರಯೇಲರ ಸಂಖ್ಯೆ ಇಷ್ಟು.
- Verse 45: ಹೀಗೆ ಇಸ್ರಯೇಲರಲ್ಲಿ ಎಣಿಕೆಯಾದ, ಅಂದರೆ 30 ವರ್ಷ ಮೇಲ್ಪಟ್ಟ ವಯಸ್ಸಿನವರಾಗಿದ್ದು ಸೈನಿಕ ಸೇವೆ ಕೈಗೊಳ್ಳಲು ಶಕ್ತರಾಗಿದ್ದವರ ಒಟ್ಟು ಸಂಖ್ಯೆ 6,03,550:
- Verse 46: ಹೀಗೆ ಇಸ್ರಯೇಲರಲ್ಲಿ ಎಣಿಕೆಯಾದ, ಅಂದರೆ 30 ವರ್ಷ ಮೇಲ್ಪಟ್ಟ ವಯಸ್ಸಿನವರಾಗಿದ್ದು ಸೈನಿಕ ಸೇವೆ ಕೈಗೊಳ್ಳಲು ಶಕ್ತರಾಗಿದ್ದವರ ಒಟ್ಟು ಸಂಖ್ಯೆ 6,03,550:
- Verse 47: ಆದರೆ ಲೇವಿಕುಲದ ಕುಟುಂಬಗಳು ಮೇಲ್ಕಂಡ ಲೆಕ್ಕದಲ್ಲಿ ಸೇರಿರಲಿಲ್ಲ.
- Verse 48: ಏಕೆಂದರೆ ಸರ್ವೇಶ್ವರ ಸ್ವಾಮಿ ಮೋಶೆಗೆ ಹೀಗೆಂದು ಆಜ್ಞಾಪಿಸಿದ್ದರು:
- Verse 49: “ನೀನು ಇಸ್ರಯೇಲರನ್ನು ಎಣಿಸುವಾಗ ಲೇವಿಯನ್ನು ಎಣಿಸಬಾರದು.
- Verse 50: ಆಜ್ಞಾಶಾಸನಗಳಿರುವ ಗುಡಾರವನ್ನು ಹಾಗು ಅವರ ಸಾಮಾನು ಸರಂಜಾಮುಗಳನ್ನು ನೋಡಿಕೊಳ್ಳುವುದಕ್ಕೆ ಅವರನ್ನು ನೇಮಿಸಬೇಕು. ಅವರು ಆ ಗುಡಾರವನ್ನು ಅದರ ಉಪಕರಣಗಳನ್ನು ಹೊರುವವರಾಗಿರಬೇಕು. ಅದರ ಸೇವೆ ಮಾಡುವವರಾಗಿ ಅದರ ಸುತ್ತಲೂ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು.
- Verse 51: ಹೊರಡುವಾಗ ಆ ಗುಡಾರವನ್ನು ಲೇವಿಯರೇ ಬಿಚ್ಚಬೇಕು; ಇಳಿದುಕೊಳ್ಳುವಾಗ ಲೇವಿಯರೇ ಅದನ್ನು ಹಾಕಬೇಕು. ಇತರರು ಹತ್ತಿರಕ್ಕೆ ಬಂದರೆ ಅವರಿಗೆ ಮರಣಶಿಕ್ಷೆಯಾಗಬೇಕು.
- Verse 52: ಇಸ್ರಯೇಲರೆಲ್ಲರ ಆಯಾ ಸೇನೆಗಳು ತಮ್ಮ ಡೇರೆಗಳನ್ನು ತಮ್ಮ ತಮ್ಮ ದಂಡಿನ ಧ್ವಜದ ಹತ್ತಿರ ಹಾಕಿಕೊಳ್ಳಬೇಕು.
- Verse 53: ಲೇವಿಯರು ಮಾತ್ರ ತಮ್ಮ ಡೇರೆಗಳನ್ನು ದೇವದರ್ಶನದ ಗುಡಾರದ ಸುತ್ತಲೂ ಹಾಕಿಕೊಳ್ಳಬೇಕು. ಹೀಗೆ ಮಾಡಿದರೆ ನನ್ನ ಕೋಪ ಇಸ್ರಯೇಲರ ಮೇಲೆ ಎರಗಲು ಆಸ್ಪದವಿರದು. ಲೇವಿಯರು ದೇವದರ್ಶನದ ಗುಡಾರವನ್ನು ಕಾಯುವವರಾಗಿರಬೇಕು.”
- Verse 54: ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಯೇಲರು ನಡೆದುಕೊಂಡರು.