வேதாகமம்
ಹಳೆಯ ಒಡಂಬಡಿಕೆ
ಜೆಕರ್ಯ
2ನೇ ಅಧ್ಯಾಯ
- Verse 1: ನನಗೆ ಮತ್ತೊಂದು ದರ್ಶನವಾಯಿತು. ಕೈಯಲ್ಲಿ ಅಳತೆನೂಲನ್ನು ಹಿಡಿದುಕೊಂಡಿದ್ದ ಒಬ್ಬನು ಕಾಣಿಸಿಕೊಂಡ.
- Verse 2: “ಎಲ್ಲಿಗೆ ಹೋಗುತ್ತಿರುವೆ?” ಎಂದು ನಾನು ಅವನನ್ನು ಕೇಳಿದಾಗ, ಅವನು: “ಜೆರುಸಲೇಮಿನ ಉದ್ದ - ಅಗಲ ಎಷ್ಟಿದೆಯೆಂದು ಅಳೆಯಲು ಹೋಗುತ್ತಿದ್ದೇನೆ,” ಎಂದು ಉತ್ತರಕೊಟ್ಟನು.
- Verse 3: ಆಗ ಸೂತ್ರಧಾರಿಯಾದ ದೂತನು ಮುಂದೆ ಬರುತ್ತಿರಲು, ಇನ್ನೊಬ್ಬ ದೂತನು ಆತನನ್ನು ಎದುರಗೊಂಡು,
- Verse 4: “ಅಳೆಯಲು ಹೋಗುತ್ತಿರುವ ಆ ಯುವಕನಿಗೆ ಓಡಿಹೋಗಿ ಈ ಮಾತನ್ನು ತಿಳಿಸು: ‘ಜೆರುಸಲೇಮಿನಲ್ಲಿ ಜನರ ಮತ್ತು ದನಕರುಗಳ ಸಂಖ್ಯೆ ಅಪಾರವಾಗುವುದು. ಅದು ಪೌಳಿಗೋಡೆಗಳಿಲ್ಲದ ಊರುಕೇರಿಗಳಂತೆ ಹರಡಿಕೊಳ್ಳುವುದು.
- Verse 5: ನಾನೇ ಅದರ ಸುತ್ತಮುತ್ತಲು ಅಗ್ನಿ ಪ್ರಾಕಾರವಾಗಿ, ಅದರೊಳಗಿನ ವೈಭವವಾಗಿರುವೆನು. ಇದು ಸರ್ವೇಶ್ವರಸ್ವಾಮಿಯ ನುಡಿ,’ ಎಂದ.”
- Verse 6: ಸರ್ವೇಶ್ವರ ತಮ್ಮ ಜನರಿಗೆ ಇಂತೆನ್ನುತ್ತಾರೆ: “ಚತುರ್ದಿಕ್ಕುಗಳಿಗೆ ನಿಮ್ಮನ್ನು ಚದರಿಸಿದವನು ನಾನೇ. ಆದರೆ ಈಗ ಎಚ್ಚೆತ್ತುಕೊಳ್ಳಿ, ಹೊರನಾಡುಗಳಿಂದ ಓಡಿಬನ್ನಿ, ಇದು ಸರ್ವೇಶ್ವರನ ನುಡಿ. ಬಾಬಿಲೋನಿಗೆ ಸೆರೆಹೋದ ಸಿಯೋನಿನವರೇ, ಅಲ್ಲಿಂದ ತಪ್ಪಿಸಿಕೊಂಡು ಬನ್ನಿ.
- Verse 7: ಸರ್ವೇಶ್ವರ ತಮ್ಮ ಜನರಿಗೆ ಇಂತೆನ್ನುತ್ತಾರೆ: “ಚತುರ್ದಿಕ್ಕುಗಳಿಗೆ ನಿಮ್ಮನ್ನು ಚದರಿಸಿದವನು ನಾನೇ. ಆದರೆ ಈಗ ಎಚ್ಚೆತ್ತುಕೊಳ್ಳಿ, ಹೊರನಾಡುಗಳಿಂದ ಓಡಿಬನ್ನಿ, ಇದು ಸರ್ವೇಶ್ವರನ ನುಡಿ. ಬಾಬಿಲೋನಿಗೆ ಸೆರೆಹೋದ ಸಿಯೋನಿನವರೇ, ಅಲ್ಲಿಂದ ತಪ್ಪಿಸಿಕೊಂಡು ಬನ್ನಿ.
- Verse 8: ತಮ್ಮ ಮಹಿಮೆಯನ್ನು ತಿಳಿಸುವುದಕ್ಕಾಗಿ ನನ್ನನ್ನು ಕಳುಹಿಸಿದ ಸೇನಾಧೀಶ್ವರ ಸರ್ವೇಶ್ವರ ನಿಮ್ಮನ್ನು ಸೂರೆಮಾಡಿದ ರಾಷ್ಟ್ರಗಳಿಗೆ ಕೊಡುವ ಎಚ್ಚರಿಕೆ ಇದು:
- Verse 9: ‘ನಿಮ್ಮನ್ನು ಮುಟ್ಟುವವರು ನನ್ನ ಕಣ್ಮಣಿಯನ್ನೇ ಮುಟ್ಟಿದಂತೆ! ಇಗೋ, ನಾನು ಅವರ ಮೇಲೆ ಕೈಯೆತ್ತುವೆನು. ಅವರು ತಮ್ಮ ದಾಸರ ಕೈಯಿಂದಲೇ ಸೂರೆಯಾಗುವರು. ನನ್ನನ್ನು ಕಳುಹಿಸಿದವರು ಸೇನಾಧೀಶ್ವರ ಸರ್ವೇಶ್ವರ ಎಂಬುದು ಆಗ ನಿಮಗೆ ಗೊತ್ತಾಗುವುದು’.”
- Verse 10: ಸರ್ವೇಶ್ವರ ಇಂತೆನ್ನುತ್ತಾರೆ: “ಎಲೈ ಸಿಯೋನ್ ನಗರವೇ, ಸಂತೋಷಪಡು, ಜಯಕಾರ ಮಾಡು; ಇಗೋ, ನಾನೇ ಬಂದು ನಿನ್ನ ಮಧ್ಯೆ ವಾಸಿಸುವೆನು!”
- Verse 11: ಆ ದಿನದಂದು ಹಲವಾರು ರಾಷ್ಟ್ರಗಳು ಸರ್ವೇಶ್ವರಸ್ವಾಮಿಯನ್ನು ಆಶ್ರಯಿಸಿಕೊಳ್ಳುವರು. ಅವರು ಆ ಸ್ವಾಮಿಯ ಜನರಾಗುವರು. ಸ್ವಾಮಿ ಅವರ ಮಧ್ಯೆ ವಾಸಿಸುವರು. ಸೇನಾಧೀಶ್ವರರಾದ ಆ ಸ್ವಾಮಿಯೇ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆ ಎಂಬುದು ಆಗ ನಿಮಗೆ ಗೊತ್ತಾಗುವುದು.
- Verse 12: ಪವಿತ್ರಭೂಮಿಯಲ್ಲಿ ಜುದೇಯ ನಾಡನ್ನು ಸ್ವಾಮಿ ತಮ್ಮ ಸೊತ್ತಾಗಿ ಮಾಡಿಕೊಳ್ಳುವರು. ಜೆರುಸಲೇಮನ್ನು ತಮಗಾಗಿ ಮರಳಿ ಆರಿಸಿಕೊಳ್ಳುವರು.
- Verse 13: ಸರ್ವೇಶ್ವರ ತಮ್ಮ ಪರಿಶುದ್ಧಾಲಯದಿಂದ ಹೊರಬರುತ್ತಿದ್ದಾರೆ. ನರಮಾನವರೇ, ಅವರ ಶ್ರೀಸನ್ನಿಧಿಯಲ್ಲಿ ನೀವೆಲ್ಲರು ಮೌನತಾಳಿರಿ.