P. O. C ബൈബിള്
ಹಳೆಯ ಒಡಂಬಡಿಕೆ
ಕೀರ್ತನೆಗಳು
48ನೇ ಅಧ್ಯಾಯ
- Verse 1: ಸರ್ವಸ್ತುತಿಗೆ ಪಾತ್ರ, ಪ್ರಭುವು ಪರಮೋನ್ನತ I ದೇವನಗರದಲಿ ಆತನ ಪವಿತ್ರ ಪರ್ವತ II
- Verse 2: ಎತ್ತರದಲಿ ಸುಂದರ, ಉತ್ತರದಲಿ ಸಿಯೋನ್ ಶಿಖರ I ಆನಂದದಾಯಕ ರಾಜಾಧಿರಾಜನ ಆ ನಗರ II
- Verse 3: ಅದರ ಕೋಟೆಕೊತ್ತಲಗಳ ನಡುವೆ ದೇವನು I ತಾನೇ ಸುಭದ್ರ ದುರ್ಗವೆಂದು ತೋರಿಹನು II
- Verse 4: ಕೂಡಿದರೊಂದಾಗಿ ರಾಜರುಗಳು, ದಾಳಿಮಾಡಬಂದರು I ನೋಡಿ ನಿಬ್ಬೆರಗಾದರು, ತಲ್ಲಣಗೊಂಡು ಓಡಿಹೋದರು II
- Verse 5: ಕೂಡಿದರೊಂದಾಗಿ ರಾಜರುಗಳು, ದಾಳಿಮಾಡಬಂದರು I ನೋಡಿ ನಿಬ್ಬೆರಗಾದರು, ತಲ್ಲಣಗೊಂಡು ಓಡಿಹೋದರು II
- Verse 6: ನಡುಗುವಂತಾಯಿತಲ್ಲಿ ಗಡಗಡನೆ I ಪ್ರಸವ ವೇದನೆಯಂತಾಯಿತವರಿಗೆ II
- Verse 7: ತಾರ್ಷಿಷ್ ನಾಡಿನ ದೊಡ್ಡ ದೊಡ್ಡ ಹಡಗುಗಳನು I ಚಂಡಮಾರುತದಿಂದ ಪುಡಿಪುಡಿ ಮಾಡಿದೆ ನೀನು II
- Verse 8: ಕಿವಿಯಾರೆ ಕೇಳಿದಂತೆಯೆ ಕಣ್ಣಾರೆ ಕಂಡೆವು I ಸರ್ವಶಕ್ತ ಪ್ರಭುವನು ದೇವನಗರದಲಿ ಕಂಡೆವು II
- Verse 9: ನಿನ್ನಚಲ ಪ್ರೀತಿಯನು ದೇವಾ, ಸ್ಮರಿಸುವೆವು I ನಿನ್ನ ಮಹದಾಲಯದೊಳು ಅದನು ಧ್ಯಾನಿಸುವೆವು II
- Verse 10: ನಿನ್ನ ನಾಮದಂತೆ ನಿನ್ನಾ ಹೊಗಳಿಕೆ I ಮುಟ್ಟುತ್ತದೆ ಜಗದ ಎಲ್ಲೆ ಎಲ್ಲೆಗೆ I ದೇವಾ, ನೀತಿಭರಿತ ನಿನ್ನ ಆಳ್ವಿಕೆ II
- Verse 11: ಸಿಯೋನ್ ಪಟ್ಟಣಿಗರು ಹರ್ಷಗೊಳ್ಳಲಿ I ಯೆಹೂದ್ಯ ನಗರಗಳು ಆನಂದಪಡಲಿ I ನಿನ್ನ ನ್ಯಾಯವನು ನೆನಪಿಸಿಕೊಳ್ಳಲಿ II
- Verse 12: ಸಂಚಾರಮಾಡಿರಿ ಸಿಯೋನ್ ನಗರದೊಳು I ಮಾಡಿರಿ ಪ್ರದಕ್ಷಿಣೆ ಅದರ ಸುತ್ತಲು I ಲೆಕ್ಕವಿಲ್ಲದಿವೆ ನೋಡಿ ಗೋಪುರಗಳು II
- Verse 13: ಕಣ್ಣಿಟ್ಟು ನೋಡಿರಿ ಅದರ ಕೋಟೆಗಳನು I ಚೆನ್ನಾಗಿ ಗಮನಿಸಿರಿ ಅದರ ಪ್ರಾಕಾರಗಳನು II
- Verse 14: ಆಗ ತಿಳಿಸಿರಿ ಮುಂದಣ ಪೀಳಿಗೆಗಿಂತೆಂದು - “ಈತನೀತನೇ ನಮ್ಮ ದೇವನು ಯುಗಯುಗಕು I ನಮಗೀತ ಮಾರ್ಗದರ್ಶಕ ತಲತಲಾಂತರಕು” II