ಕನ್ನಡ ಸತ್ಯವೇದವು
ಹಳೆಯ ಒಡಂಬಡಿಕೆ
ಕೀರ್ತನೆಗಳು
149ನೇ ಅಧ್ಯಾಯ
- Verse 1: ಅಲ್ಲೆಲೂಯ! ಹಾಡಿರಿ ಪ್ರಭುವಿಗೆ ನೂತನ ಕೀರ್ತನೆಯನು I ಭಕ್ತರ ಸಭೆಯಲಿ ಸ್ತುತಿಮಾಡಿರಿ ಆತನನು II
- Verse 2: ಆನಂದಿಸಲಿ ತಮ್ಮ ಸೃಷ್ಟಿಕರ್ತನಲಿ ಇಸ್ರಯೇಲರು I ತಮ್ಮಾ ರಾಜನಿಗೆ ಜಯಕಾರ ಮಾಡಲಿ ಸಿಯೋನಿನವರು II
- Verse 3: ಆತನ ನಾಮವನು ಕೀರ್ತಿಸಲಿ ಕುಣಿತದಿಂದ I ಆತನನು ಭಜಿಸಲಿ ತಮಟೆ, ಕಿನ್ನರಿಗಳಿಂದ II
- Verse 4: ಪ್ರೀತಿಸುತ್ತಾನೆ ಪ್ರಭು ತನ್ನ ಪ್ರಜೆಯನು I ಜಯಶೀಲರನ್ನಾಗಿಸುತ್ತಾನೆ ದೀನದಲಿತರನು II
- Verse 5: ಹಿಗ್ಗಲಿ ಭಕ್ತಾದಿಗಳು ದೊರೆತ ವಿಜಯದಲಿ I ಜಯಕಾರ ಮಾಡಲಿ ತಮ್ಮ ತಮ್ಮ ಶಿಬಿರಗಳಲಿ II
- Verse 6: ಇರಲಿ ಪ್ರಭುವಿನ ಸ್ತೋತ್ರ ಅವರ ಬಾಯಲಿ I ಇರಲಿ ಇಬ್ಬಾಯಿ ಕತ್ತಿಯು ಅವರ ಕೈಯಲಿ II
- Verse 7: ಈ ಪರಿ ಮುಯ್ಯಿತೀರಿಸಲಿ ಜನಾಂಗಗಳಿಗೆ I ವಿಧಿಸಲಿ ದಂಡನೆಯನು ಅನ್ಯರಾಷ್ಟ್ರಗಳಿಗೆ II
- Verse 8: ಬಂದಿಸಲಿ ಅವರ ರಾಜರನು ಸಂಕೋಲೆಯಿಂದ I ಅವರ ಅಧಿಕಾರಿಗಳನು ಕಬ್ಬಿಣದ ಬೇಡಿಗಳಿಂದ II
- Verse 9: ವಿಧಿಸಲಿ ಅವರಿಗೆ ಲಿಖಿತಾಜ್ಞೆಯ ಶಿಕ್ಷೆಯನು I ಇದು ತರಲಿ ಭಕ್ತರೆಲ್ಲರಿಗೆ ಗೌರವವನು I ಅಲ್ಲೆಲೂಯ! II