ಕನ್ನಡ ಸತ್ಯವೇದವು
ಹಳೆಯ ಒಡಂಬಡಿಕೆ
ಕೀರ್ತನೆಗಳು
130ನೇ ಅಧ್ಯಾಯ
- Verse 1: ಅಂತರಾಳದಿಂದ ಪ್ರಭು, ಮೊರೆಯಿಡುತ್ತಿರುವೆ ನಿನಗೆ I
- Verse 2: ಆಲಿಸು, ಕಿವಿಗೊಡು ಪ್ರಭೂ, ನನ್ನಾರ್ತ ವಿಜ್ಞಾಪನೆಗೆ II
- Verse 3: ಪಾಪಗಳ ನೀ ಪಟ್ಟಿಮಾಡಿದೆಯಾದರೆ ಪ್ರಭು I ನಿನ್ನ ಮುಂದೆ ಯಾರುತಾನೆ ನಿಲ್ಲಬಲ್ಲರು ವಿಭು? II
- Verse 4: ಪಾಪವನು ಕ್ಷಮಿಸುವವನು ನೀನು I ಎಂತಲೆ ಭಯಭಕ್ತಿಗೆ ಪಾತ್ರನು II
- Verse 5: ಪ್ರಭುವಿಗಾಗಿ ಎನ್ನ ಮನ ಕಾದಿದೆ I ಆತನ ವಾಕ್ಯದಲಿ ನಂಬಿಕೆ ನನಗಿದೆ II
- Verse 6: ಸೂರ್ಯೋದಯಕ್ಕಾಗಿ ಕಾವಲುಗಾರ ಕಾದಿರುವುದಕ್ಕಿಂತ I ಆತುರದಿಂದ ಬೆಳಗಾಗುವುದನು ಎದುರು ನೋಡುವುದಕ್ಕಿಂತ I ಅತಿಯಾಗಿ ಪ್ರಭುವನು ನಿರೀಕ್ಷಿಸುತಿದೆ ಎನ್ನ ಮನ ನಿರುತ II
- Verse 7: ಇಸ್ರಯೇಲೇ, ನಂಬಿಕೊಂಡಿರು ಪ್ರಭುವನೆ I ಆತನಲ್ಲಿದೆ ಕರುಣೆ, ಪೂರ್ಣವಿಮೋಚನೆ II
- Verse 8: ಇಸ್ರಯೇಲನು ಉದ್ಧರಿಸುವನಾತ I ಅದು ಗೈದ ಸಕಲ ದೋಷಗಳಿಂದ II