P. O. C ബൈബിള്
ಹಳೆಯ ಒಡಂಬಡಿಕೆ
ಕೀರ್ತನೆಗಳು
20ನೇ ಅಧ್ಯಾಯ
- Verse 1: ಸಂಕಟ ಬಂದಾಗ, ಪ್ರಭು ನಿನಗೆ ಕಿವಿಗೊಡಲಿ I ಯಕೋಬ ದೇವರ ನಾಮ, ನಿನ್ನ ಕಾಪಾಡಲಿ II
- Verse 2: ನೆರವು ನೀಡಲಾತ ಪವಿತ್ರಾಲಯದಿಂದ I ನಿನಗೊತ್ತಾಸೆ ಬರಲಿ, ಸಿಯೋನ್ ಶಿಖರದಿಂದ II
- Verse 3: ನೆನಸಿಕೊಳ್ಳಲಾತ ನೀನರ್ಪಿಸಿದ ಕಾಣಿಕೆಗಳನು I ಒಲಿದು ಸ್ವೀಕರಿಸಲಿ, ನೀನಿತ್ತಾ ಯಜ್ಞಬಲಿಗಳನು II
- Verse 4: ನೆರವೇರಿಸಲಿ ಆತ ನಿನ್ನಿಷ್ಟಾರ್ಥಗಳನು I ಪೂರೈಸಲಿ ಪ್ರಭು ನಿನ್ನಭೀಪ್ಸೆಗಳೆಲ್ಲವನು II
- Verse 5: ಜಯಘೋಷ ಮಾಡುವೆವು, ನಿನ್ನ ಗೆಲುವಿನ ನಿಮಿತ್ತ I ಧ್ವಜ ಹಾರಿಪೆವು, ಎಮ್ಮ ದೇವನ ನಾಮದ ನಿಮಿತ್ತ I ನಿನ್ನ ಕೋರಿಕೆಗಳೆಲ್ಲವನು, ಕೈಗೂಡಿಸಲಿ ಆತ II
- Verse 6: ಒದಗುವನು ಪ್ರಭುವು ಅಭಿಷಿಕ್ತನಿಗೆ I ಓಗೊಡುವನು ಸ್ವರ್ಗದಿಂದಾತನಿಗೆ I ಗೆಲುವನೀವನು ಭುಜಬಲದಿಂದವನಿಗೆ II
- Verse 7: ಹೆಚ್ಚಳಪಡುತಿಹರು ಕೆಲವರು ರಥಗಳಲಿ, ಹಲವರು ಅಶ್ವಗಳಲಿ I ಹೆಮ್ಮೆಪಡುತಿಹೆವು ನಾವಾದರೋ, ನಮ್ಮ ದೇವರ ನಾಮದಲಿ II
- Verse 8: ಕೆಳಗಿಳಿವರವರು, ಕುಸಿದು ಬೀಳುವರವರು I ಏಳುವೆವು, ಸ್ಥಿರನಿಲ್ಲುವೆವು ನಾವೆಲ್ಲರು II
- Verse 9: ಜಯವ ನೀಡು ಪ್ರಭು, ಅರಸನಿಗೆ I ಕಿವಿಗೊಡು ನೀ, ನಮ್ಮ ಪ್ರಾರ್ಥನೆಗೆ II