ಕನ್ನಡ ಸತ್ಯವೇದವು
ಹಳೆಯ ಒಡಂಬಡಿಕೆ
ಕೀರ್ತನೆಗಳು
133ನೇ ಅಧ್ಯಾಯ
- Verse 1: ಸೋದರರು ಒಂದಾಗಿ ಬಾಳ್ವುದು I ಅದೆಷ್ಟು ಚೆನ್ನ, ಅದೆಷ್ಟು ರಮ್ಯ II
- Verse 2: ಅದು ರಮ್ಯ, ಸುರಿದ ಸುಗಂಧತೈಲ ಗಡ್ಡಕೆ ಇಳಿವಂತೆ I ಆರೋನನ ಗಡ್ಡದಿಂದ ಅವನ ಕೊರಳಪಟ್ಟಿಗೆ ಇಳಿವಂತೆ II
- Verse 3: ರಮ್ಯ, ಹೆರ್ಮೋನ್ ಪರ್ವತದ ಮೇಲೆ ಬೀಳುವ ಮಂಜಿನಂತೆ I ಸಿಯೋನ್ ಪರ್ವತದ ಮೇಲೆ ಬೀಳುವ ಇಬ್ಬನಿಯಂತೆ II ಆಶೀರ್ವಾದವು, ಅಮರ ಜೀವವು I ಅಲ್ಲೆ ಇರಬೇಕೆಂದು ಆಜ್ಞಾಪಿಸಿಹನು ಪ್ರಭುವು II