P. O. C ബൈബിള്
ಹಳೆಯ ಒಡಂಬಡಿಕೆ
ಯೆಶಾಯ
12ನೇ ಅಧ್ಯಾಯ
- Verse 1: ಆ ದಿನದಂದು ಹಾಡುವುದು ಜನತೆ ಹೀಗೆಂದು : “ಹೇ ಸರ್ವೇಶ್ವರಾ, ನಿನಗೆನ್ನ ವಂದನ; ನಿನಗಿತ್ತು ಎನ್ನ ಮೇಲೆ ಕೋಪ ಮನ. ಆದರೆ ಅದೀಗ ಆಗಿದೆ ಶಮನ, ಬಂದಿತೆನ್ನ ಮನಕೆ ಸಾಂತ್ವನ.
- Verse 2: ದೇವರೇ ಉದ್ಧಾರಕನೆನಗೆ ಆತನಲ್ಲಿದೆ ನನಗೆ ನಿರ್ಭೀತ ನಂಬಿಕೆ. ದೇವಾದಿದೇವನೇ ಎನಗೆ ಶಕ್ತಿ ಆತನೆನ್ನ ಕೀರ್ತನೆಯ ವ್ಯಕ್ತಿ ತಂದಿಹನಾತ ಎನಗೆ ಮುಕ್ತಿ.”
- Verse 3: ಉದ್ಧರಿಸುವಾ ಒರತೆಗಳಿಂದ ಸೇದುವಿರಿ ನೀರನು ಹರುಷದಿಂದ.
- Verse 4: ಹೇಳುವಿರಿ ನೀವು ಆ ದಿನದಂದು ಈ ಪರಿ - “ಸಲ್ಲಿಸಿರಿ ಸರ್ವೇಶ್ವರನಿಗೆ ಕೃತಜ್ಞತೆಯನು ಸ್ಮರಿಸಿರಿ ಆತನ ಶ್ರೀನಾಮವನು ಸಾರಿರಿ ಜನತೆಗೆ ಆತನ ಕಾರ್ಯಗಳನು ಘೋಷಿಸಿರಿ ಆತನ ನಾಮಘನತೆಯನು.
- Verse 5: ಹಾಡಿರಿ ಸರ್ವೇಶ್ವರನಿಗೆ ಸ್ತುತಿಯನು ಎಸಗಿಹನಾತ ಮಹಿಮಾಕಾರ್ಯಗಳನು ತಿಳಿಸಿರಿ ಜಗದಾದ್ಯಂತಕೆ ಈ ವಿಷಯವನು.
- Verse 6: ಸಿಯೋನಿನ ನಿವಾಸಿಗಳೇ, ಹಾಡಿರಿ, ಮಾಡಿರಿ ಭಜನ ನಿಮ್ಮ ಮಧ್ಯೆಯಿರುವ ಆ ಘನವಂತನ ಇಸ್ರಯೇಲಿನಾ ಸ್ವಾಮಿ ಪರಮಪಾವನ.”