पवित्र बाइबिल
ಹಳೆಯ ಒಡಂಬಡಿಕೆ
ಕೀರ್ತನೆಗಳು
126ನೇ ಅಧ್ಯಾಯ
1 : ಸೆರೆಯಿಂದೆಮ್ಮನು ಪ್ರಭು ಸಿಯೋನಿಗೆ ಮರಳಿಸಿದಾಗ I ಅದೊಂದು ಕನಸು ಕಂಡಂತಿತ್ತು ನಮಗೆ ಆವಾಗ II
2 : ಉಕ್ಕಿತಾಗ ಮುಖತುಂಬ ನಗು, ಬಾಯ್ತುಂಬ ಹರ್ಷಗೀತೆ I “ಎಂಥ ಮಹತ್ಕಾರ್ಯವೆಸಗಿದನಾ ಪ್ರಭು ಇವರ ಪರತೆ” I ಇಂತೆಂದು ಆಡಿಕೊಂಡರು ತಂತಮ್ಮೊಳಗೆ ಅನ್ಯಜನತೆ II
3 : ಪ್ರಭು ನಮಗೆ ಮಹತ್ಕಾರ್ಯ ಮಾಡಿದುದು ಖಚಿತ I ಎಂತಲೆ ನಾವಾನಂದಭರಿತರಾಗುವುದು ಉಚಿತ II
4 : ಬತ್ತಿದ ನದಿಯಲಿ ನೀರು ಮರಳಿ ಉಕ್ಕಿ ಹರಿವಂತೆ I ನೀಡು ಸಿರಿ ಸೌಭಾಗ್ಯ, ಹೇ ಪ್ರಭೂ, ನಮಗೆ ಮತ್ತೆ II
5 : ಅಳುತಳುತ್ತಾ ಬಿತ್ತುವವರು I ನಲಿನಲಿಯುತ್ತಾ ಕೊಯ್ಯುವರು II
6 : ದುಃಖಿಸುತ್ತಾ ಬೀಜಬಿತ್ತಲು ಹೋದವನು I ಹರ್ಷಿಸುತ್ತಾ ಕೊಯ್ದು ತರುವನು ತೆನೆಗಳನು II