ಕನ್ನಡ ಸತ್ಯವೇದವು
ಹಳೆಯ ಒಡಂಬಡಿಕೆ
ಕೀರ್ತನೆಗಳು
113ನೇ ಅಧ್ಯಾಯ
1 : ಅಲ್ಲೆಲೂಯ I ಪ್ರಭುವಿನ ದಾಸರೇ, ಸ್ತುತಿಮಾಡಿ I ಪ್ರಭುವಿನ ನಾಮಸ್ತುತಿಯನು ಮಾಡಿ II
2 : ಪ್ರಭುವಿನ ಸಿರಿನಾಮವು ಪೂಜ್ಯ I ಇಂದಿಗೂ ಎಂದೆಂದಿಗೂ ಪೂಜ್ಯ II
3 : ಪ್ರಭುವಿನಾ ಸಿರಿನಾಮವು ಸ್ತುತ್ಯ I ಪೂರ್ವ ಪಶ್ಚಿಮದವರೆಗೂ ಸ್ತುತ್ಯ II
4 : ಸಕಲ ಜಾತಿಜನಾಂಗಗಳಲಿ ಪ್ರಭು ಶ್ರೇಷ್ಠ I ಆತನ ಮಹಿಮೆ ಗಗನಕ್ಕಿಂತಲೂ ಉತ್ಕೃಷ್ಟ II
5 : ನಮ್ಮ ಪ್ರಭು ದೇವನಂತೆ ಯಾರು ಸಮರ್ಥ I ಉನ್ನತದಲಿ ಆಸನಾರೂಢನು ಆತ I ಇಹಪರಗಳನು ವೀಕ್ಷಿಸಲಾತ ಶಕ್ತ II
6 : ನಮ್ಮ ಪ್ರಭು ದೇವನಂತೆ ಯಾರು ಸಮರ್ಥ I ಉನ್ನತದಲಿ ಆಸನಾರೂಢನು ಆತ I ಇಹಪರಗಳನು ವೀಕ್ಷಿಸಲಾತ ಶಕ್ತ II
7 : ದೀನರನು ಎಬ್ಬಿಸುವನು ಧೂಳಿನಿಂದ I ಬಡವರನು ಎತ್ತುವನು ತಿಪ್ಪೆಯಿಂದ II
8 : ಕೂರಿಸುವನಾತ ಅವರನು ಅಧಿಪತಿಗಳ ನಡುವೆ I ತನ್ನ ಪ್ರಜೆಯನಾಳುವಾ ಅಧಿಪತಿಗಳ ನಡುವೆ II
9 : ಬಂಜೆಯಾದವಳನು ಮಕ್ಕಳ ತಾಯಾಗಿಸುವನು I ಆನಂದದಿಂದಾಕೆ ಬೆಳಗಿಸುವಳಾ ಮನೆಯನು II