P. O. C ബൈബിള്
ಹಳೆಯ ಒಡಂಬಡಿಕೆ
ಕೀರ್ತನೆಗಳು
8ನೇ ಅಧ್ಯಾಯ
1 : ಪ್ರಭು, ಓ ನಮ್ಮ ಪ್ರಭು, ಎನಿತು ಮಹಿಮಾನ್ವಿತ I ಹರಡಿವೆ ನಿನ್ನ ಸಿರಿನಾಮ ಜಗದಾದ್ಯಂತ I ಬೆಳಗಿದೆ ನಿನ್ನ ವೈಭವ ಗಗನಾದ್ಯಂತ II
2 : ವಿರೋಧಿಗಳ ಬಾಯನು ಮುಚ್ಚಿಸಿದೆ ಬಾಲ ಬಾಲೆಯರ ಬಾಯಿಂದಲೆ I ಹಗೆಗಳನು ದುರ್ಗದಂತೆ ತಡೆದೆ ಮೊಲೆಗೂಸುಗಳ ನಾಲಿಗೆಯಿಂದಲೆ II
3 : ಆಕಾಶಮಂಡಲ ನಿನ್ನ ಕೈಕೆಲಸವಯ್ಯಾ I ಚಂದ್ರ ನಕ್ಷತ್ರಗಳು ನಿನ್ನ ರಚನೆಗಳಯ್ಯಾ II
4 : ಇಂತಿರಲು, ಮನುಜನು ಎಷ್ಟರವನು ನೀನವನನು ಲಕ್ಷಿಸಲು? I ಏತರದವನು ನರಮಾನವನು ನೀನವನನು ಪರಾಮರಿಸಲು? II
5 : ಆದರೆ ದೇವದೂತರಿಗಿಂತ ಕಿಂಚಿತ್ತೆ ಕೀಳಾಗಿಸಿದೆ ಮನುಜನನು I ಮುಡಿಸಿದೆ ಮುಕುಟವಾಗವನಿಗೆ ಘನಮಾನವನು, ಸಿರಿಹಿರಿಮೆಯನು II
6 : ಒಡೆಯನಾಗಿಸಿದೆ ನಿನ್ನಯ ಕರಕೃತಿಗಳಿಗೆ I ಒಳಪಡಿಸಿದೆ ಸಕಲವನು ಅವನ ಪಾದದಡಿಗೆ II
7 : ಕುರಿಗಳನು, ಕರುಗಳನು, ಕಾಡುಮೃಗಗಳನು I ಗರಿಗಳನು, ಮೀನುಗಳನು, ಜಲಚರಗಳನು I ಕರಗತ ಮಾಡಿದೆ ನೀ ಅವನಿಗೆಲ್ಲವನು II
8 : ಕುರಿಗಳನು, ಕರುಗಳನು, ಕಾಡುಮೃಗಗಳನು I ಗರಿಗಳನು, ಮೀನುಗಳನು, ಜಲಚರಗಳನು I ಕರಗತ ಮಾಡಿದೆ ನೀ ಅವನಿಗೆಲ್ಲವನು II
9 : ಪ್ರಭು, ಓ ಎಮ್ಮ ಪ್ರಭು, ನಿನ್ನ ನಾಮಾಮೃತ I ಬೆಳಗಿದೆ ತನ್ನ ಮಹಿಮೆಯನು ಭುವನ ಪರ್ಯಂತ II