పరిశుద్ధ గ్రంథము
ಹಳೆಯ ಒಡಂಬಡಿಕೆ
ಕೀರ್ತನೆಗಳು
87ನೇ ಅಧ್ಯಾಯ
1 : ಪವಿತ್ರ ಪರ್ವತದಲಿ ಕರ್ತನು I ಸ್ಥಾಪಿಸಿಹನು ತನ್ನ ನಗರವನು II
2 : ಯಕೋಬ ವಂಶದ ಸಕಲ ನಿವಾಸಿಗಳಿಗಿಂತ I ಸಿಯೋನ್ ದ್ವಾರಗಳು ಆತನಿಗೆ ಸುಪ್ರೀತ II
3 : ದೈವ ಶ್ರೀನಗರವೇ, ಕೇಳು ಇವನ್ನು I ನಿನ್ನ ಕುರಿತ ಅತಿಶಯೋಕ್ತಿಗಳನು : II
4 : “ನನಗೆ ಮಣಿಯುವ ರಾಷ್ಟ್ರಗಳಲಿ I ಈಜಿಪ್ಟ್, ಬಾಬೆಲ್ ದೇಶಗಳನು ಲೆಕ್ಕಿಸುವೆ II ಜೆರುಸಲೇಮಿನ ನಿವಾಸಿಗಳಲಿ I ಪಿಲಿಷ್ಟಿಯ, ಟೈರ್, ಎಥಿಯೋಪಿಯ ಜನ ಸೇರಿವೆ II
5 : ಸಕಲ ಜನಾಂಗಗಳ ಜನನಿ ಸಿಯೋನ್ ನಗರವೇ I ಅದನು ಸ್ಥಾಪಿಸಿದವ ಪರಾತ್ಪರ ಪ್ರಭುವೇ” II
6 : ಪ್ರಭು ಪಟ್ಟಿಮಾಡುವಾಗ ಸಕಲ ಜಾತಿಜನಾಂಗಗಳನು I ನಿನ್ನ ಜನಾಂಗವೆಂದೇ ಪರಿಗಣಿಸುವನು ಪ್ರತಿಯೊಂದನು II
7 : ಗಾಯಕ ನರ್ತಕರೂ ಹಾಡುವರೀ ಹಾಡ I “ನಮ್ಮೆಲ್ಲರ ಜೀವದೊರೆತೆ ನೀನೇ ನೋಡ” II