पवित्र बाइबिल
ಹಳೆಯ ಒಡಂಬಡಿಕೆ
ನೆಹೆಮೀಯ
7ನೇ ಅಧ್ಯಾಯ
1 : ಗೋಡೆಯನ್ನು ಕಟ್ಟಿ ಮುಗಿಸಿದನಂತರ ನಾನು ಕದಗಳನ್ನು ಹಚ್ಚಿಸಿದೆ; ದ್ವಾರಪಾಲಕರನ್ನೂ ಗಾಯಕರನ್ನೂ ಲೇವಿಯರನ್ನೂ ನೇಮಿಸಲಾಯಿತು.
2 : ಆಮೇಲೆ ನನ್ನ ತಮ್ಮ ಹನಾನಿಗೆ ಹಾಗು ಬಹಳ ನಂಬಿಗಸ್ತನೂ ದೇವರಲ್ಲಿ ವಿಶೇಷ ಭಯಭಕ್ತಿಯುಳ್ಳವನೂ ದುರ್ಗಾ ಅಧಿಕಾರಿಯೂ ಆಗಿದ್ದ ಹನನ್ಯನಿಗೆ ಜೆರುಸಲೇಮಿನ ಮೇಲ್ವಿಚಾರಣೆಯನ್ನು ಒಪ್ಪಿಸಿದೆ.
3 : ಅವರಿಗೆ, “ಬಿಸಿಲೇರುವುದಕ್ಕಿಂತ ಮೊದಲೇ ಜೆರುಸಲೇಮಿನ ಬಾಗಿಲುಗಳನ್ನು ತೆರೆಯಬಾರದು; ಕಾವಲುಗಾರರು ಇನ್ನೂ ಇರುವಲ್ಲೇ ಕದಗಳನ್ನು ಮುಚ್ಚಿ ಭದ್ರಪಡಿಸಬೇಕು. ಇದಲ್ಲದೆ, ಜೆರುಸಲೇಮಿನ ನಿವಾಸಿಗಳಲ್ಲೇ ಕಾವಲುಗಾರರನ್ನು ಗೊತ್ತುಮಾಡಿರಿ. ಪ್ರತಿಯೊಬ್ಬನನ್ನು ಅವನವನ ಮನೆಯ ಎದುರಿನಲ್ಲೇ ಕಾವಲಿರುವಂತೆ ನೇಮಿಸಿರಿ,” ಎಂದು ಆಜ್ಞಾಪಿಸಿದೆ.
4 : ಪಟ್ಟಣವೇನೊ ಸವಿಸ್ತಾರವಾಗಿತ್ತು. ಆದರೆ ಅದರೊಳಗಿದ್ದ ಜನ ಬಹಳ ಸ್ವಲ್ಪಮಂದಿ. ಮನೆಗಳನ್ನು ಇನ್ನೂ ಕಟ್ಟಿರಲಿಲ್ಲ.
5 : ಹೀಗಿರಲು, ನಾನು ನನ್ನ ದೇವರ ಪ್ರೇರಣೆಯಿಂದ ಶ್ರೀಮಂತರನ್ನು, ಅಧಿಕಾರಿಗಳನ್ನು ಹಾಗು ಜನಸಾಮಾನ್ಯರನ್ನು ಜನಗಣತಿಗಾಗಿ ಸಭೆಸೇರಿಸಿದೆ. ಆಗ ಜೆರುಸಲೇಮಿಗೆ ಮೊದಲು ಹಿಂದಿರುಗಿ ಬಂದವರ ಹೆಸರುಗಳ ಪಟ್ಟಿ ನನಗೆ ಸಿಕ್ಕಿತು. ಅದರಲ್ಲಿ ಹೀಗೆ ಬರೆದಿತ್ತು:
6 : ಸೆರೆಯಿಂದ ಹಿಂತಿರುಗಿ ಬಂದ ಯೆಹೂದ ಜನಾಂಗದವರ ಪಟ್ಟಿ: ಬಾಬಿಲೋನಿನ ಅರಸ ನೆಬೂಕದ್ನೆಚ್ಚರನಿಂದ ಸೆರೆಗೆ ಒಯ್ಯಲ್ಪಟ್ಟವರಲ್ಲಿ ಜೆರುಸಲೇಮಿಗೂ ಜುದೇಯ ಪ್ರಾಂತ್ಯದ ಸ್ವಂತ ಪಟ್ಟಣಗಳಿಗೂ ಹಿಂದಿರುಗಿದವರು ಇವರು: ಅ ಇವರ ನಾಯಕರಲ್ಲಿ
7 : ಜೆರುಬ್ಬಾಬೆಲ್, ಯೇಷೂವ, ನೆಹೆಮೀಯ, ಅಜರ್ಯ, ರಗಮ್ಯ, ನಹಮಾನೀ, ಮೊರ್ದೆಕೈ, ಬಿಲ್ಷಾನ್, ಮಿಸ್ಪೆರತ್, ಬಿಗ್ವೈ, ನೆಹೂಮ್ ಹಾಗು ಬಾಣ ಎಂಬವರು: ಆ ಅವರ ಜನಸಾಮಾನ್ಯರಲ್ಲಿ:
11 : ಪಹತ್ಮೋವಾಬಿನವರಾದ ಯೇಷೂವ ಮತ್ತು ಯೋವಾಬ್ ಸಂತಾನದವರು - 2818
21 : ಅಟೇರಿನವರಾದ ಹಿಜ್ಕೀಯನ ಸಂತಾನದವರು - 98
26 : ಬೆತ್ಲೆಹೇಮ್ ನೆಟೋಫ ಊರುಗಳವರು - 188
29 : ಕಿರ್ಯತ್ಯಾರೀಮ್ ಕೆಫೀರಾ ಬೇರೋತ್ ಊರುಗಳವರು - 743
32 : ಬೇತೇಲ್, ಆಯಿ ಎಂಬ ಊರುಗಳವರು - 123
37 : ಲೋದ್, ಹಾದೀದ್, ಓನೋ ಎಂಬ ಊರುಗಳವರು - 721
39 : ಯಾಜಕರಲ್ಲಿ - ಯೆದಾಯನವರಾದ ಯೇಷೂವನ ಮನೆಯವರು - 973
43 : ಲೇವಿಯರಲ್ಲಿ - ಹೋದವ್ಯನವರಾದ ಯೇಷೂವ, ಕದ್ಮೀಯೇಲ್ ಇವರ ಸಂತಾನದವರು - 74 ಉ
44 : ಗಾಯಕರಲ್ಲಿ - ಆಸಾಫ್ಯರು - 148 ಊ
45 : ದ್ವಾರಪಾಲಕರಲ್ಲಿ - ಶಲ್ಲೂಮ್, ಆಟೇರ್, ಟಲ್ಮೋನ್, ಅಕ್ಕೂಬ್, ಹಟೀಟಾ, ಶೋಬೈ ಇವರ ಸಂತಾನದವರು ಒಟ್ಟು - 138 ಎ
46 : ದೇವಸ್ಥಾನ ಪರಿಚಾರಕರಲ್ಲಿ - ಜೀಹ, ಹಸೂಫ, ಟಬ್ಬಾವೋತ್, ಕೇರೋಸ್, ಸೀಯ,
48 : ಸಲ್ಮೈ, ಹಾನಾನ್, ಗಿದ್ದೇಲ್, ಗಹರ್, ರೆವಾಯ, ರೆಚೀನ್,
49 : ಸಲ್ಮೈ, ಹಾನಾನ್, ಗಿದ್ದೇಲ್, ಗಹರ್, ರೆವಾಯ, ರೆಚೀನ್,
50 : ನೆಕೋದ, ಗಜ್ಜಾಮ್, ಉಜ್ಜ, ಪಾಸೇಹ,
51 : ನೆಕೋದ, ಗಜ್ಜಾಮ್, ಉಜ್ಜ, ಪಾಸೇಹ,
52 : ಬೇಸೈ, ಮೆಯನೀಮ್, ನೆಫೀಷೆಸೀಮ್,
53 : ಬಕ್ಬೂಕ್, ಹಕ್ಕೂಫ, ಹರ್ಹೂರ್, ಬಚ್ಲೂತ್, ಮೆಹೀದ,
54 : ಹರ್ಷ, ಬರ್ಕೋಸ್, ಸೀಸೆರ, ತೆಮಹ,
55 : ಹರ್ಷ, ಬರ್ಕೋಸ್, ಸೀಸೆರ, ತೆಮಹ,
56 : ನೆಚೀಹ, ಹಟೀಫ ಇವರ ಸಂತಾನದವರು. ಏ
57 : ಸೊಲೊಮೋನನ ದಾಸರಲ್ಲಿ - ಸೋಟೈ, ಸೋಫೆರೆತ್, ಪೆರೀದ, ಯಾಲ,
58 : ದರ್ಕೋನ್, ಗಿದೇಲ್, ಶೆಫಟ್ಯ, ಹಟ್ಟೀಲ್,
59 : ಪೋಕೆರೆತ್ ಹಚ್ಚೆಬಾಯೀಮ್, ಆಮೋನ್ ಇವರ ಸಂತಾನದವರು.
60 : ಎಲ್ಲಾ ದೇವಸ್ಥಾನ ಪರಿಚಾರಕರು ಹಾಗು ಸೊಲೊಮೋನನ ಸೇವಕರು ಒಟ್ಟು -392 ಮಂದಿ.
61 : ತೇಲ್ಮೆಲಹ, ತೇಲ್ಹರ್ಷ, ಕೆರೂಬದ್ದೋನ್, ಇಮ್ಮೇರ್ ಎಂಬ ಊರುಗಳಿಂದ ಬಂದವರಾಗಿ ತಮ್ಮ ಗೋತ್ರವಂಶಾವಳಿಗಳನ್ನು ತೋರಿಸಿ ತಾವು ಇಸ್ರಯೇಲರೆಂಬುದನ್ನು ಸ್ಥಾಪಿಸಲಾರದವರಾದ
62 : ದೆಲಾಯ, ಟೋಬೀಯ, ನೆಕೋದ ಇವರ ಸಂತಾನದವರು 642 ಮಂದಿ.
63 : ಯಾಜಕರಲ್ಲಿ ಹೋಬಾಯ, ಹಕ್ಕೋಚ್, ಬರ್ಜಿಲ್ಲೈ ಇವರ ಸಂತಾನದವರು ತಮ್ಮ ವಂಶಾವಳಿಯನ್ನು ತೋರಿಸಲಾರದೆ ಹೋದರು. (ಈ ಬರ್ಜಿಲ್ಲೈ ಎಂಬುವನು ಗಿಲ್ಯಾದ್ಯನಾದ ಬರ್ಜಿಲ್ಲೈಯ ಹೆಣ್ಣುಮಕ್ಕಳಲ್ಲಿ ಒಬ್ಬಳನ್ನು ಮದುವೆ ಮಾಡಿಕೊಂಡು ಅವನ ಹೆಸರನ್ನು ಇಟ್ಟುಕೊಂಡಿದ್ದನು.)
64 : ಇವರು ತಮ್ಮ ವಂಶಾವಳಿ ಪತ್ರಗಳನ್ನು ಹುಡುಕಿದರೂ ಅವು ಸಿಕ್ಕದ ಕಾರಣ ಅಶುದ್ಧರೆಂದು ಯಾಜಕಾ ಸೇವೆಯಿಂದ ಬಹಿಷ್ಕೃತರಾದರು.
65 : ಊರಿಮ್ತುಮ್ಮೀಮುಗಳ ಮೂಲಕ ದೈವನಿರ್ಣಯವನ್ನು ತಿಳಿಸಬಲ್ಲವನಾದ ಯಾಜಕನು ಬರುವ ತನಕ ಇವರು ಮಹಾಪರಿಶುದ್ಧ ಪದಾರ್ಥಗಳನ್ನು ಭೋಜನ ಮಾಡಬಾರದೆಂಬುದಾಗಿ ರಾಜ್ಯಪಾಲ ತೀರ್ಪುಮಾಡಿದನು.
66 : ಸರ್ವಸಮೂಹದವರ ಒಟ್ಟು ಸಂಖ್ಯೆ - ನಾಲ್ವತ್ತೆರಡು ಸಾವಿರದ ಮುನ್ನೂರರುವತ್ತು.
67 : ಈ ಸಂಖ್ಯೆಯಲ್ಲಿ ಎಣಿಕೆಯಾಗದ ಅವರ ದಾಸದಾಸಿಯರು ಏಳು ಸಾವಿರದ ಮುನ್ನೂರ ಮೂವತ್ತೇಳು ಮಂದಿ. ಅವರ ಗಾಯಕರೂ ಗಾಯಕಿಯರೂ ಇನ್ನೂರ ನಾಲ್ವತ್ತೈದು ಮಂದಿ.
68 : ಅವರಿಗೆ ಏಳುನೂರ ಮೂವತ್ತಾರು ಕುದುರೆಗಳೂ ಇನ್ನೂರ ನಾಲ್ವತ್ತೈದು ಹೇಸರಕತ್ತೆಗಳೂ
69 : ನಾನೂರ ಮೂವತ್ತೈದು ಒಂಟೆಗಳೂ ಆರುಸಾವಿರದ ಏಳುನೂರಿಪ್ಪತ್ತು ಕತ್ತೆಗಳೂ ಇದ್ದವು.
70 : ಗೋತ್ರಪ್ರಧಾನರಲ್ಲಿ ಕೆಲವರು ಕೆಲಸಕ್ಕೆಬೇಕಾದ ದ್ರವ್ಯಸಹಾಯ ನೀಡಿದರು. ತಿರ್ಷಾತಾ ಎನಿಸಿಕೊಳ್ಳುವ ರಾಜ್ಯಪಾಲ ಭಂಡಾರಕ್ಕೆ ಕೊಟ್ಟದ್ದು - ಎಂಟು ಕಿಲೋಗ್ರಾಂ ಬಂಗಾರ. ಐವತ್ತು ಬೋಗುಣಿಗಳು, ಐನೂರಮೂವತ್ತು ಯಾಜಕವಸ್ತ್ರಗಳು.
71 : ಬೇರೆ ಕೆಲವು ಮಂದಿ ಗೋತ್ರಪ್ರಧಾನರು ಕಟ್ಟಡದ ಭಂಡಾರಕ್ಕೆ ಕೊಟ್ಟದ್ದು ನೂರಾರವತ್ತೆಂಟು ಕಿಲೋಗ್ರಾಂ ಬಂಗಾರ; ಸಾವಿರದ ಇನ್ನೂರ ಐವತ್ತು ಕಿಲೋಗ್ರಾಂ ಬೆಳ್ಳಿ
72 : ಉಳಿದ ಜನರು ಕೊಟ್ಟದ್ದು - ನೂರ ಅರವತ್ತೆಂಟು ಕಿಲೋಗ್ರಾಂ ಬಂಗಾರ; ನೂರ ನಲವತ್ತು ಕಿಲೋಗ್ರಾಂ ಬೆಳ್ಳಿ, ಅರುವತ್ತೇಳು ಯಾಜಕವಸ್ತ್ರಗಳು.
73 : ಯಾಜಕರು, ಲೇವಿಯರು, ದ್ವಾರಪಾಲಕರು, ಗಾಯಕರು, ಜನಸಾಮಾನ್ಯರು, ದೇವಸ್ಥಾನದ ಪರಿಚಾರಕರು ಅಂತೂ ಇಸ್ರಯೇಲರೆಲ್ಲರು ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸಿಸುತ್ತಿದ್ದರು.