पवित्र बाइबिल
ಹಳೆಯ ಒಡಂಬಡಿಕೆ
ಕೀರ್ತನೆಗಳು
130ನೇ ಅಧ್ಯಾಯ
1 : ಅಂತರಾಳದಿಂದ ಪ್ರಭು, ಮೊರೆಯಿಡುತ್ತಿರುವೆ ನಿನಗೆ I
2 : ಆಲಿಸು, ಕಿವಿಗೊಡು ಪ್ರಭೂ, ನನ್ನಾರ್ತ ವಿಜ್ಞಾಪನೆಗೆ II
3 : ಪಾಪಗಳ ನೀ ಪಟ್ಟಿಮಾಡಿದೆಯಾದರೆ ಪ್ರಭು I ನಿನ್ನ ಮುಂದೆ ಯಾರುತಾನೆ ನಿಲ್ಲಬಲ್ಲರು ವಿಭು? II
4 : ಪಾಪವನು ಕ್ಷಮಿಸುವವನು ನೀನು I ಎಂತಲೆ ಭಯಭಕ್ತಿಗೆ ಪಾತ್ರನು II
5 : ಪ್ರಭುವಿಗಾಗಿ ಎನ್ನ ಮನ ಕಾದಿದೆ I ಆತನ ವಾಕ್ಯದಲಿ ನಂಬಿಕೆ ನನಗಿದೆ II
6 : ಸೂರ್ಯೋದಯಕ್ಕಾಗಿ ಕಾವಲುಗಾರ ಕಾದಿರುವುದಕ್ಕಿಂತ I ಆತುರದಿಂದ ಬೆಳಗಾಗುವುದನು ಎದುರು ನೋಡುವುದಕ್ಕಿಂತ I ಅತಿಯಾಗಿ ಪ್ರಭುವನು ನಿರೀಕ್ಷಿಸುತಿದೆ ಎನ್ನ ಮನ ನಿರುತ II
7 : ಇಸ್ರಯೇಲೇ, ನಂಬಿಕೊಂಡಿರು ಪ್ರಭುವನೆ I ಆತನಲ್ಲಿದೆ ಕರುಣೆ, ಪೂರ್ಣವಿಮೋಚನೆ II