வேதாகமம்
ಹಳೆಯ ಒಡಂಬಡಿಕೆ
ಕೀರ್ತನೆಗಳು
138ನೇ ಅಧ್ಯಾಯ
1 : ಹೃದಯಪೂರ್ವಕ ವಂದನೆ ಪ್ರಭು ನಿನಗೆ I ದೇವರುಗಳೆದುರಿಗೆ ನನ್ನ ಕೀರ್ತನೆ ನಿನಗೆ II
2 : ಪೊಗಳುವೆ ನಿನ್ನ ನಾಮವನು ತಲೆಬಾಗಿ ನಿನ್ನ ಪವಿತ್ರಾಲಯದತ್ತ I ನಿನ್ನ ಪ್ರೀತಿಸತ್ಯತೆಗಳ, ನಾಮ ನುಡಿಗಳ ಮಹತ್ವದ ಪ್ರಯುಕ್ತ II
3 : ಮೊರೆಯಿಟ್ಟಾಗ ದಯಪಾಲಿಸಿದೆ ಸದುತ್ತರವನು I ಅಧಿಕಮಾಡಿದೆ ನೀನು ನನ್ನಾತ್ಮ ಶಕ್ತಿಯನು II
4 : ನಿನ್ನ ಗುಣಗಾನ ಮಾಳ್ಪರು ಪ್ರಭು, ಭೂರಾಜರೆಲ್ಲರು I ಏಕೆನೆ, ನೀ ಉಸುರಿದ ನುಡಿಗಳನು ಕೇಳ್ವರವರೆಲ್ಲರು II
5 : ಪ್ರಭುವಿನ ಮಹಿಮೆಯು ಮಹೋನ್ನತ ಎನ್ನುವರು I ಆತನ ಮಾರ್ಗಗಳನು ಹಾಡಿ ಹರಸುವರು II
6 : ಉನ್ನತನಾದರೂ ಗಮನಿಸುವನು ಪ್ರಭು ದೀನರನು I ದೂರದಿಂದಲೇ ಗುರುತಿಸುವನಾತನು ಗರ್ವಿಷ್ಠರನು II
7 : ಇಕ್ಕಟ್ಟಿನಲಿ ನಡೆವಾಗಲೂ ನೀ ರಕ್ಷಿಸುವೆ ಪ್ರಭು, ಪ್ರಾಣವನು I ಶತ್ರುಕೋಪಕೆ ವಿರುದ್ಧವಾಗಿ ತೋರುವೆ ನೀ ಮುಷ್ಟಿಯನು II
8 : ಸಿದ್ಧಿಗೆ ತರುವೆ ನೀ ಪ್ರಭು, ನನ್ನ ಕಾರ್ಯವನು I ಶಾಶ್ವತವಾಗಿಸು ನಿನ್ನ ಅಚಲ ಪ್ರಿತಿಯನು I ಮರೆತುಬಿಡಬೇಡ ನಿನ್ನಯ ಕೈ ಕೃತಿಯನು II