పరిశుద్ధ గ్రంథము
ಹಳೆಯ ಒಡಂಬಡಿಕೆ
ಕೀರ್ತನೆಗಳು
126ನೇ ಅಧ್ಯಾಯ
- Verse 1: ಸೆರೆಯಿಂದೆಮ್ಮನು ಪ್ರಭು ಸಿಯೋನಿಗೆ ಮರಳಿಸಿದಾಗ I ಅದೊಂದು ಕನಸು ಕಂಡಂತಿತ್ತು ನಮಗೆ ಆವಾಗ II
- Verse 2: ಉಕ್ಕಿತಾಗ ಮುಖತುಂಬ ನಗು, ಬಾಯ್ತುಂಬ ಹರ್ಷಗೀತೆ I “ಎಂಥ ಮಹತ್ಕಾರ್ಯವೆಸಗಿದನಾ ಪ್ರಭು ಇವರ ಪರತೆ” I ಇಂತೆಂದು ಆಡಿಕೊಂಡರು ತಂತಮ್ಮೊಳಗೆ ಅನ್ಯಜನತೆ II
- Verse 3: ಪ್ರಭು ನಮಗೆ ಮಹತ್ಕಾರ್ಯ ಮಾಡಿದುದು ಖಚಿತ I ಎಂತಲೆ ನಾವಾನಂದಭರಿತರಾಗುವುದು ಉಚಿತ II
- Verse 4: ಬತ್ತಿದ ನದಿಯಲಿ ನೀರು ಮರಳಿ ಉಕ್ಕಿ ಹರಿವಂತೆ I ನೀಡು ಸಿರಿ ಸೌಭಾಗ್ಯ, ಹೇ ಪ್ರಭೂ, ನಮಗೆ ಮತ್ತೆ II
- Verse 5: ಅಳುತಳುತ್ತಾ ಬಿತ್ತುವವರು I ನಲಿನಲಿಯುತ್ತಾ ಕೊಯ್ಯುವರು II
- Verse 6: ದುಃಖಿಸುತ್ತಾ ಬೀಜಬಿತ್ತಲು ಹೋದವನು I ಹರ್ಷಿಸುತ್ತಾ ಕೊಯ್ದು ತರುವನು ತೆನೆಗಳನು II