வேதாகமம்
ಹಳೆಯ ಒಡಂಬಡಿಕೆ
ಸಂಖ್ಯಾಕಾಂಡ
7ನೇ ಅಧ್ಯಾಯ
1 : ಮೋಶೆ ದೇವದರ್ಶನದ ಗುಡಾರವನ್ನು ಎತ್ತಿ ನಿಲ್ಲಿಸಿದ ಮೇಲೆ ಅದನ್ನೂ ಅದರ ಸಾಮಾನುಗಳನ್ನೂ ಹಾಗೂ ಬಲಿಪೀಠವನ್ನು ಅದರ ಉಪಕರಣಗಳನ್ನೂ ಅಭಿಷೇಕಿಸಿ ಪ್ರತಿಷ್ಠಿಸಿದನು.
2 : ಆಗ ಇಸ್ರಯೇಲರ ಮುಖ್ಯಸ್ಥರು, ಅಂದರೆ ಗೋತ್ರನಾಯಕರು ಹಾಗೂ ಕುಲಾಧಿಪತಿಗಳಾಗಿದ್ದು ಜನಗಣತಿಯ ನೇತೃತ್ವವನ್ನು ವಹಿಸಿಕೊಂಡಿದ್ದವರು, ಕಾಣಿಕೆಗಳನ್ನು ತಂದೊಪ್ಪಿಸಿದರು.
3 : ಇಬ್ಬರಿಬ್ಬರು ಒಂದು ಕಮಾನು ಬಂಡಿಯನ್ನೂ ಒಂದು ಜೊತೆ ಎತ್ತುಗಳನ್ನೂ ಅಂತು ಆರು ಬಂಡಿಗಳನ್ನೂ ಆರು ಜೊತೆ ಎತ್ತುಗಳನ್ನೂ ದೇವದರ್ಶನದ ಗುಡಾರದ ಮುಂದೆ ಸರ್ವೇಶ್ವರನ ಸನ್ನಿಧಿಗೆ ತಂದು ಅರ್ಪಿಸಿದರು.
5 : “ಈ ಕಾಣಿಕೆಯ ವಸ್ತುಗಳನ್ನು ಇವರ ಕೈಯಿಂದ ತೆಗೆದುಕೋ; ಇವು ದೇವದರ್ಶನದ ಗುಡಾರದ ಸೇವೆಗೆ ಉಪಯೋಗವಾಗಲಿ. ಲೇವಿಯರಿಗೆ ಅವರವರ ಕೆಲಸಕ್ಕೆ ತಕ್ಕ ಹಾಗೆ ಅವುಗಳನ್ನು ಕೊಡು,” ಎಂದು ಆಜ್ಞಾಪಿಸಿದರು.
6 : ಅಂತೆಯೇ, ಮೋಶೆ ಆ ಬಂಡಿಗಳನ್ನು ಹಾಗೂ ಎತ್ತುಗಳನ್ನು ತೆಗೆದುಕೊಂಡು ಲೇವಿಯರಿಗೆ ಕೊಟ್ಟನು.
7 : ಎರಡು ಬಂಡಿಗಳನ್ನು ಹಾಗೂ ನಾಲ್ಕು ಎತ್ತುಗಳನ್ನು ಗೇರ್ಷೋನ್ಯರಿಗೆ
8 : ನಾಲ್ಕು ಬಂಡಿ ಹಾಗೂ ಎಂಟು ಎತ್ತುಗಳನ್ನು ಮೆರಾರೀಯರಿಗೆ ಅವರವರ ಸೇವೆಗೆ ತಕ್ಕ ಹಾಗೆ ಕೊಟ್ಟನು. ಇವರು ಮಹಾಯಾಜಕ ಆರೋನನ ಮಗ ಈತಾಮಾರನ ಕೈಕೆಳಗೆ ಸೇವೆ ಮಾಡಬೇಕಾಗಿತ್ತು.
9 : ಕೆಹಾತ್ಯರಿಗೆ ಮಾತ್ರ ಏನನ್ನೂ ಕೊಡಲಿಲ್ಲ. ಏಕೆಂದರೆ ದೇವದರ್ಶನದ ಗುಡಾರದ ಸಾಮಾನುಗಳನ್ನು ಸಾಗಿಸುವುದೇ ಅವರಿಗೆ ನೇಮಕವಾದ ಕೆಲಸವಾಗಿತ್ತು. ಅವರು ಅವುಗಳನ್ನು ಹೆಗಲ ಮೇಲೆ ಹೊರಬೇಕಾಗಿತ್ತು.
10 : ಬಲಿಪೀಠವನ್ನು ಅಭಿಷೇಕಿಸಿದ ದಿನದಂದು ಕುಲಾಧಿಪತಿಗಳು ಅದರ ಪ್ರತಿಷ್ಠೆಗಾಗಿ ಕಾಣಿಕೆಗಳನ್ನು ತಂದು ಅದರ ಮುಂದೆ ಇಟ್ಟರು.
11 : ಆಗ ಸರ್ವೇಶ್ವರ ಮೋಶೆಗೆ, “ಒಬ್ಬೊಬ್ಬ ಕುಲಾಧಿಪತಿ ಒಂದೊಂದು ದಿನ ಬಲಿಪೀಠದ ಪ್ರತಿಷ್ಠೆಗಾಗಿ ತನ್ನ ಕಾಣಿಕೆಯನ್ನು ಸಮರ್ಪಿಸಲಿ,” ಎಂದು ಆಜ್ಞಾಪಿಸಿದನು.
12 : ಮೊದಲನೆಯ ದಿನ ಕಾಣಿಕೆ ತಂದೊಪ್ಪಿಸಿದವನು ಯೆಹೂದ ಕುಲಾಧಿಪತಿ ಅಮ್ಮೀನಾದಾಬನ ಮಗ ನಹಶೋನ.
13 : ಅವನು ತಂದ ಕಾಣಿಕೆಗಳು: ದೇವಸ್ಥಾನದ ನಾಣ್ಯತೂಕದ ಮೇರೆಗೆ 130 ಶೆಕೆಲ್ ತೂಕದ ಬೆಳ್ಳಿಯ ಒಂದು ಹರಿವಾಣ; 70 ಶೆಕೆಲ್ ತೂಕದ ಬೆಳ್ಳಿಯ ಒಂದು ಬಟ್ಟಲು; ಈ ಎರಡರ ತುಂಬ ನೈವೇದ್ಯಕ್ಕಾಗಿ ಎಣ್ಣೆಬೆರೆಸಿದ ಗೋದಿಯ ಹಿಟ್ಟು
14 : ಧೂಪ ದ್ರವ್ಯ ತುಂಬಿದ್ದ 10 ಶೆಕೆಲ್ ತೂಕದ ಒಂದು ಚಿನ್ನದ ಧೂಪಾರತಿ.
15 : ದಹನಬಲಿಗಾಗಿ ಒಂದು ಹೋರಿ, ಒಂದು ಟಗರು, ಒಂದು ವರ್ಷದ ಕುರಿ;
16 : ಪಾಪಪರಿಹಾರಕ ಬಲಿಗಾಗಿ ಒಂದು ಹೋತ;
17 : ಸಮಾಧಾನ ಬಲಿಗಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ವರ್ಷದ ಐದು ಕುರಿಗಳು. ಅಮ್ಮೀನಾದಾಬನ ಮಗ ನಹಶೋನನು ಸಮರ್ಪಿಸಿದ ಕಾಣಿಕೆಗಳು ಇವೇ.
18 : ಎರಡನೆಯ ದಿನ ಇಸ್ಸಾಕಾರ್ ಕುಲಾಧಿಪತಿ ಚೂವಾರನ ಮಗ ನೆತನೇಲನು ತಂದ ಕಾಣಿಕೆಗಳು:
19 : ದೇವಸ್ಥಾನದ ನಾಣ್ಯತೂಕದ ಮೇರೆಗೆ 130 ಶೆಕೆಲ್ ತೂಕದ ಒಂದು ಹರಿವಾಣ; 70 ಶೆಕೆಲ್ ತೂಕದ ಒಂದು ಬೆಳ್ಳಿಯ ಬಟ್ಟಲು; ಈ ಎರಡರ ತುಂಬ ನೈವೇದ್ಯಕ್ಕಾಗಿ ಎಣ್ಣೆಬೆರೆಸಿದ ಗೋದಿಯ ಹಿಟ್ಟು
20 : ಧೂಪದ್ರವ್ಯ ತುಂಬಿದ್ದ 10 ಶೆಕೆಲ್ ತೂಕದ ಒಂದು ಚಿನ್ನದ ಧೂಪಾರತಿ
21 : ದಹನಬಲಿಗಾಗಿ ಒಂದು ಹೋರಿ, ಒಂದು ಟಗರು, ಒಂದು ವರ್ಷದ ಕುರಿ
22 : ಪಾಪಪರಿಹಾರಕ ಬಲಿಗಾಗಿ ಒಂದು ಹೋತ;
23 : ಸಮಾಧಾನ ಬಲಿಗಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ವರ್ಷದ ಐದು ಕುರಿಗಳು. ಇವೇ ಚೂವಾರನ ಮಗ ನೆತನೇಲನು ಕೊಟ್ಟ ಕಾಣಿಕೆಗಳು.
24 : ಮೂರನೆಯ ದಿನ ಜೆಬುಲೂನ್ ಕುಲಾಧಿಪತಿ ಹೇಲೋನನ ಮಗ ಎಲೀಯಾಬನು ತಂದ ಕಾಣಿಕೆಗಳು:
25 : ದೇವಸ್ಥಾನದ ನಾಣ್ಯತೂಕದ ಮೇರೆಗೆ 130 ಶೆಕೆಲ್ ತೂಕದ ಒಂದು ಹರಿವಾಣ, 70 ಶೆಕೆಲ್ ತೂಕದ ಒಂದು ಬೆಳ್ಳಿಯ ಬಟ್ಟಲು; ಈ ಎರಡರ ತುಂಬ ನೈವೇದ್ಯಕ್ಕಾಗಿ ಎಣ್ಣೆಬೆರೆಸಿದ ಗೋದಿಯ ಹಿಟ್ಟು
26 : ಧೂಪದ್ರವ್ಯ ತುಂಬಿದ್ದ 10 ಶೆಕೆಲ್ ತೂಕದ ಒಂದು ಚಿನ್ನದ ಧೂಪಾರತಿ
27 : ದಹನಬಲಿಗಾಗಿ ಒಂದು ಹೋರಿ, ಒಂದು ಟಗರು, ಒಂದು ವರ್ಷದಕುರಿ,
28 : ಪಾಪಪರಿಹಾರಕ ಬಲಿಗಾಗಿ ಒಂದು ಹೋತ;
29 : ಸಮಾಧಾನ ಬಲಿಗಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ವರ್ಷದ ಐದು ಕುರಿಗಳು. ಇವೇ ಹೇಲೋನನ ಮಗ ಎಲೀಯಾಬನು ಸಮರ್ಪಿಸಿದ ಕಾಣಿಕೆಗಳು.
30 : ನಾಲ್ಕನೆಯ ದಿನ ರೂಬೇನ್ ಕುಲಾಧಿಪತಿ ಶೆದೇಯೂರನ ಮಗ ಎಲೀಚೂರನು ತಂದ ಕಾಣಿಕೆಗಳು:
31 : ದೇವಸ್ಥಾನದ ನಾಣ್ಯತೂಕದ ಮೇರೆಗೆ 130 ಶೆಕೆಲ್ ತೂಕದ ಒಂದು ಹರಿವಾಣ, 70 ಶೆಕೆಲ್ ತೂಕದ ಒಂದು ಬೆಳ್ಳಿಯ ಬಟ್ಟಲು; ಈ ಎರಡರ ತುಂಬ ನೈವೇದ್ಯಕ್ಕಾಗಿ ಎಣ್ಣೆಬೆರೆಸಿದ ಗೋದಿಯ ಹಿಟ್ಟು
32 : ಧೂಪದ್ರವ್ಯ ತುಂಬಿದ್ದ ಹತ್ತು ಶೆಕೆಲ್ ತೂಕದ ಒಂದು ಚಿನ್ನದ ಧೂಪಾರತಿ
33 : ದಹನ ಬಲಿಗಾಗಿ ಒಂದು ಹೋರಿ, ಒಂದು ಟಗರು, ಒಂದು ವರ್ಷದ ಕುರಿ,
34 : ಪಾಪ ಪರಿಹಾರಕ ಬಲಿಗಾಗಿ ಒಂದು ಹೋತ,
35 : ಸಮಾಧಾನ ಬಲಿಗಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ವರ್ಷದ ಐದು ಕುರಿಗಳು, ಶೆದೇಯೂರನ ಮಗ ಎಲೀಚೂರನು ಸಮರ್ಪಿಸಿದ ಕಾಣಿಕೆಗಳು ಇವೇ.
36 : ಐದನೆಯ ದಿನ ಸಿಮೆಯೋನ್ ಕುಲಾಧಿಪತಿ ಚೂರಿಷದ್ದೈಯನ ಮಗ ಶೆಲುಮೀಯೇಲನು ತಂದ ಕಾಣಿಕೆಗಳು:
37 : ದೇವಸ್ಥಾನದ ನಾಣ್ಯತೂಕದ ಮೇರೆಗೆ 130 ಶೆಕೆಲ್ ತೂಕದ ಒಂದು ಹರಿವಾಣ, 70 ಶೆಕೆಲ್ ತೂಕದ ಒಂದು ಬೆಳ್ಳಿಯ ಬಟ್ಟಲು; ಈ ಎರಡರ ತುಂಬ ನೈವೇದ್ಯಕ್ಕಾಗಿ ಎಣ್ಣೆಬೆರೆಸಿದ ಗೋದಿಯ ಹಿಟ್ಟು.
38 : ಧೂಪದ್ರವ್ಯ ತುಂಬಿದ್ದ 10 ಶೆಕೆಲ್ ತೂಕದ ಒಂದು ಚಿನ್ನದ ಧೂಪಾರತಿ
39 : ದಹನಬಲಿಗಾಗಿ ಒಂದು ಹೋರಿ, ಒಂದು ಟಗರು, ಒಂದು ವರ್ಷದ ಕುರಿ,
40 : ಪಾಪ ಪರಿಹಾರಕ ಬಲಿಗಾಗಿ ಒಂದು ಹೋತ;
41 : ಸಮಾಧಾನ ಬಲಿಗಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ವರ್ಷದ ಐದು ಕುರಿಗಳು. ಇವೇ ಚೂರೀಷದ್ದೈಯನ ಮಗ ಶೆಲುಮೀಯೇಲನು ಸಮರ್ಪಿಸಿದ ಕಾಣಿಕೆಗಳು.
42 : ಆರನೆಯ ದಿನ ಗಾದ್ ಕುಲಾಧಿಪತಿ ದೆಗೂವೇಲನ ಮಗ ಎಲ್ಯಾಸಾಫನು ತಂದ ಕಾಣಿಕೆಗಳು:
43 : ದೇವಸ್ಥಾನದ ನಾಣ್ಯತೂಕದ ಮೇರೆಗೆ 130 ಶೆಕೆಲ್ ತೂಕದ ಒಂದು ಹರಿವಾಣ, 70 ಶೆಕೆಲ್ ತೂಕದ ಒಂದು ಬೆಳ್ಳಿಯ ಬಟ್ಟಲು; ಈ ಎರಡರ ತುಂಬ ನೈವೇದ್ಯಕ್ಕಾಗಿ ಎಣ್ಣೆಬೆರೆಸಿದ ಗೋದಿಯ ಹಿಟ್ಟು
44 : ಧೂಪದ್ರವ್ಯ ತುಂಬಿದ್ದ ಹತ್ತು ಶೆಕೆಲ್ ತೂಕದ ಒಂದು ಚಿನ್ನದ ಧೂಪಾರತಿ
45 : ದಹನಬಲಿಗಾಗಿ ಒಂದು ಹೋರಿ, ಒಂದು ಟಗರು, ಒಂದು ವರ್ಷದ ಕುರಿ,
46 : ಪಾಪ ಪರಿಕಾರಕ ಬಲಿಗಾಗಿ ಒಂದು ಹೋತ;
47 : ಸಮಾಧಾನ ಬಲಿಗಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ವರ್ಷದ ಐದು ಕುರಿಗಳು. ಇವೇ ದೆಗೂವೇಲನ ಮಗ ಎಲ್ಯಾಸಾಫನು ಸಮರ್ಪಿಸಿದ ಕಾಣಿಕೆಗಳು.
48 : ಏಳನೆಯ ದಿನ ಎಫ್ರಾಯಿಮ್ ಕುಲಾಧಿಪತಿ ಅಮ್ಮೂಹೂದನ ಮಗ ಎಲೀಷಾವನು ತಂದ ಕಾಣಿಕೆಗಳು:
49 : ದೇವಸ್ಥಾನದ ನಾಣ್ಯತೂಕದ ಮೇರೆಗೆ 130 ಶೆಕೆಲ್ ತೂಕದ ಒಂದು ಹರಿವಾಣ, 70 ಶೆಕೆಲ್ ತೂಕದ ಒಂದು ಬೆಳ್ಳಿಯ ಬಟ್ಟಲು; ಈ ಎರಡರ ತುಂಬ ನೈವೇದ್ಯಕ್ಕಾಗಿ ಎಣ್ಣೆಬೆರೆಸಿದ ಗೋದಿಯ ಹಿಟ್ಟು
50 : ಧೂಪದ್ರವ್ಯ ತುಂಬಿದ್ದ ಹತ್ತು ಶೆಕೆಲ್ ತೂಕದ ಒಂದು ಚಿನ್ನದ ಧೂಪಾರತಿ
51 : ದಹನಬಲಿಗಾಗಿ ಒಂದು ಹೋರಿ, ಒಂದು ಟಗರು, ಒಂದು ವರ್ಷದ ಕುರಿ,
52 : ಪಾಪ ಪರಿಕಾರಕ ಬಲಿಗಾಗಿ ಒಂದು ಹೋತ;
53 : ಸಮಾಧಾನ ಬಲಿಗಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ವರ್ಷದ ಐದು ಕುರಿಗಳು. ಅಮ್ಮೀಹೂದನ ಮಗ ಎಲೀಷಾವನು ಸಮರ್ಪಿಸಿದ ಕಾಣಿಕೆಗಳು ಇವೇ.
54 : ಎಂಟನೆಯ ದಿನ ಮನಸ್ಸೆ ಕುಲಾಧಿಪತಿ ಪೆದಾಚೂರನ ಮಗ ಗಮ್ಲೀಯೇಲನು ತಂದ ಕಾಣಿಕೆಗಳು:
55 : ದೇವಸ್ಥಾನದ ನಾಣ್ಯತೂಕದ ಮೇರೆಗೆ 130 ಶೆಕೆಲ್ ತೂಕದ ಒಂದು ಹರಿವಾಣ, 70 ಶೆಕೆಲ್ ತೂಕದ ಒಂದು ಬೆಳ್ಳಿಯ ಬಟ್ಟಲು; ಈ ಎರಡರ ತುಂಬ ನೈವೇದ್ಯಕ್ಕಾಗಿ ಎಣ್ಣೆಬೆರೆಸಿದ ಗೋದಿಯ ಹಿಟ್ಟು
56 : ಧೂಪದ್ರವ್ಯ ತುಂಬಿದ್ದ ಹತ್ತು ಶೆಕೆಲ್ ತೂಕದ ಒಂದು ಚಿನ್ನದ ಧೂಪಾರತಿ
57 : ಸರ್ವಾಂಗ ಹೋಮಕ್ಕಾಗಿ ಒಂದು ಹೋರಿ, ಒಂದು ಟಗರು, ಒಂದು ವರ್ಷದ ಕುರಿ,
58 : ಪಾಪ ಪರಿಕಾರಕ ಬಲಿಗಾಗಿ ಒಂದು ಹೋತ;
59 : ಸಮಾಧಾನ ಬಲಿಗಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ವರ್ಷದ ಐದು ಕುರಿಗಳು. ಪೆದಾಚೂರನ ಮಗ ಗಮ್ಲೀಯೇಲನು ಸಮರ್ಪಿಸಿದ ಕಾಣಿಕೆಗಳು ಇವೇ.
60 : ಒಂಬತ್ತನೆಯ ದಿನ ಬೆನ್ಯಾಮಿನ್ ಕುಲಾಧಿಪತಿ ಗಿದ್ಯೋನಿಯ ಮಗ ಅಬೀದಾನನು ತಂದ ಕಾಣಿಕೆಗಳು:
61 : ದೇವಸ್ಥಾನದ ನಾಣ್ಯತೂಕದ ಮೇರೆಗೆ 130 ಶೆಕೆಲ್ ತೂಕದ ಒಂದು ಹರಿವಾಣ, 70 ಶೆಕೆಲ್ ತೂಕದ ಒಂದು ಬೆಳ್ಳಿಯ ಬಟ್ಟಲು; ಈ ಎರಡರ ತುಂಬ ನೈವೇದ್ಯಕ್ಕಾಗಿ ಎಣ್ಣೆಬೆರೆಸಿದ ಗೋದಿಯ ಹಿಟ್ಟು
62 : ಧೂಪದ್ರವ್ಯ ತುಂಬಿದ್ದ 10 ಶೆಕೆಲ್ ತೂಕದ ಒಂದು ಚಿನ್ನದ ಧೂಪಾರತಿ
63 : ದಹನಬಲಿಗಾಗಿ ಒಂದು ಹೋರಿ, ಒಂದು ಟಗರು, ಒಂದು ವರ್ಷದ ಕುರಿ,
64 : ಪಾಪ ಪರಿಕಾರಕ ಬಲಿಗಾಗಿ ಒಂದು ಹೋತ;
65 : ಸಮಾಧಾನ ಬಲಿಗಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ವರ್ಷದ ಐದು ಕುರಿಗಳು. ಇವೇ ಗಿದ್ಯೋನಿಯ ಮಗ ಅಬೀದಾನನು ಸಮರ್ಪಿಸಿದ ಕಾಣಿಕೆಗಳು.
66 : ಹತ್ತನೆಯ ದಿನ ದಾನ್ ಕುಲಾಧಿಪತಿ ಅಮ್ಮೀಷದ್ದೈಯನ ಮಗ ಅಹೀಗೆಜೆರನು ತಂದ ಕಾಣಿಕೆಗಳು:
67 : ದೇವಸ್ಥಾನದ ನಾಣ್ಯತೂಕದ ಮೇರೆಗೆ 130 ಶೆಕೆಲ್ ತೂಕದ ಒಂದು ಹರಿವಾಣ, 70 ಶೆಕೆಲ್ ತೂಕದ ಒಂದು ಬೆಳ್ಳಿಯ ಬಟ್ಟಲು; ಈ ಎರಡರ ತುಂಬ ನೈವೇದ್ಯಕ್ಕಾಗಿ ಎಣ್ಣೆಬೆರೆಸಿದ ಗೋದಿಯ ಹಿಟ್ಟು
68 : ಧೂಪದ್ರವ್ಯ ತುಂಬಿದ್ದ 10 ಶೆಕೆಲ್ ತೂಕದ ಒಂದು ಚಿನ್ನದ ಧೂಪಾರತಿ
69 : ದಹನಬಲಿಗಾಗಿ ಒಂದು ಹೋರಿ, ಒಂದು ಟಗರು, ಒಂದು ವರ್ಷದ ಕುರಿ,
70 : ಪಾಪ ಪರಿಕಾರಕ ಬಲಿಗಾಗಿ ಒಂದು ಹೋತ;
71 : ಸಮಾಧಾನ ಬಲಿಗಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ವರ್ಷದ ಐದು ಕುರಿಗಳು. ಅಮ್ಮೀಷದ್ದೈಯನ ಮಗ ಅಹೀಗೆಜೆರನು ಸಮರ್ಪಿಸಿದ ಕಾಣಿಕೆಗಳು ಇವೇ.
72 : ಹನ್ನೊಂದನೆಯ ದಿನ ಆಶೇರ್ ಕುಲಾಧಿಪತಿ ಒಕ್ರಾನನ ಮಗ ಪಗೀಯೇಲನು ತಂದ ಕಾಣಿಕೆಗಳು:
73 : ದೇವಸ್ಥಾನದ ನಾಣ್ಯತೂಕದ ಮೇರೆಗೆ 130 ಶೆಕೆಲ್ ತೂಕದ ಒಂದು ಹರಿವಾಣ, 70 ಶೆಕೆಲ್ ತೂಕದ ಒಂದು ಬೆಳ್ಳಿಯ ಬಟ್ಟಲು; ಈ ಎರಡರ ತುಂಬ ನೈವೇದ್ಯಕ್ಕಾಗಿ ಎಣ್ಣೆಬೆರೆಸಿದ ಗೋದಿಯ ಹಿಟ್ಟು
74 : ಧೂಪದ್ರವ್ಯ ತುಂಬಿದ್ದ 10 ಶೆಕೆಲ್ ತೂಕದ ಒಂದು ಚಿನ್ನದ ಧೂಪಾರತಿ
75 : ದಹನಬಲಿಗಾಗಿ ಒಂದು ಹೋರಿ, ಒಂದು ಟಗರು, ಒಂದು ವರ್ಷದ ಕುರಿ,
76 : ಪಾಪ ಪರಿಕಾರಕ ಬಲಿಗಾಗಿ ಒಂದು ಹೋತ;
77 : ಸಮಾಧಾನ ಬಲಿಗಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ವರ್ಷದ ಐದು ಕುರಿಗಳು. ಇವೇ ಒಕ್ರಾನನ ಮಗ ಪಗೀಯೇಲನು ಸಮರ್ಪಿಸಿದ ಕಾಣಿಕೆಗಳು.
78 : ಹನ್ನೆರಡನೆಯ ದಿನ ನಫ್ತಾಲಿ ಕುಲಾಧಿಪತಿ ಏನಾನನ ಮಗ ಅಹೀರನು ತಂದ ಕಾಣಿಕೆಗಳು:
79 : ದೇವಸ್ಥಾನದ ನಾಣ್ಯತೂಕದ ಮೇರೆಗೆ 130 ಶೆಕೆಲ್ ತೂಕದ ಒಂದು ಹರಿವಾಣ, 70 ಶೆಕೆಲ್ ತೂಕದ ಒಂದು ಬೆಳ್ಳಿಯ ಬಟ್ಟಲು; ಈ ಎರಡರ ತುಂಬ ನೈವೇದ್ಯಕ್ಕಾಗಿ ಎಣ್ಣೆಬೆರೆಸಿದ ಗೋದಿಯ ಹಿಟ್ಟು
80 : ಧೂಪದ್ರವ್ಯ ತುಂಬಿದ್ದ ಹತ್ತು ಶೆಕೆಲ್ ತೂಕದ ಒಂದು ಚಿನ್ನದ ಧೂಪಾರತಿ
81 : ದಹನಬಲಿಗಾಗಿ ಒಂದು ಹೋರಿ, ಒಂದು ಟಗರು, ಒಂದು ವರ್ಷದ ಕುರಿ,
82 : ಪಾಪ ಪರಿಕಾರಕ ಬಲಿಗಾಗಿ ಒಂದು ಹೋತ;
83 : ಸಮಾಧಾನ ಬಲಿಗಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ವರ್ಷದ ಐದು ಕುರಿಗಳು. ಇವೇ ಏನಾನನ ಮಗ ಅಹೀರನು ಸಮರ್ಪಿಸಿದ ಕಾಣಿಕೆಗಳು.
84 : ಬಲಿಪೀಠವನ್ನು ಅಭಿಷೇಕಿಸಲಾದ ದಿನದಂದು ಇಸ್ರಯೇಲರ ಕುಲಾಧಿಪತಿಗಳು ಅದರ ಪ್ರತಿಷ್ಠೆಗಾಗಿ ಸಮರ್ಪಿಸಿದ ಕಾಣಿಕೆಗಳು ಒಟ್ಟು: 12 ಬೆಳ್ಳಿಯ ಹರಿವಾಣಗಳು; 12 ಬೆಳ್ಳಿಯ ಬಟ್ಟಲುಗಳು; 12 ಚಿನ್ನದ ಧೂಪಾರತಿಗಳು;
85 : ಒಂದೊಂದು ಬೆಳ್ಳಿಯ ಹರಿವಾಣ 130 ಶೆಕೆಲ್ ತೂಕವುಳ್ಳದ್ದಾಗಿತ್ತು; ಒಂದೊಂದು ಬೆಳ್ಳಿಯ ಬಟ್ಟಲು 70 ಶೆಕೆಲ್ ತೂಕವುಳ್ಳದ್ದಾಗಿತ್ತು; ಆ ಬೆಳ್ಳಿಯ ಪಾತ್ರೆಗಳ ಒಟ್ಟು ತೂಕ ದೇವಸ್ಥಾನದ ನಾಣ್ಯದ ತೂಕದ ಮೇರೆಗೆ 2400 ಶೆಕೆಲ್ ತೂಕ.
86 : ಧೂಫದ್ರವ್ಯ ತುಂಬಿದ್ದ ಚಿನ್ನದ ಧೂಪಾರತಿಗಳು ಹನ್ನೆರಡು; ದೇವಸ್ಥಾನದ ನಾಣ್ಯದ ಪ್ರಕಾರ ಒಂದೊಂದರ ತೂಕ 10 ಶೆಕೆಲ್. ಹೀಗೆ ಸರ್ವೇಶ್ವರ ಸ್ವಾಮಿ ಆತನೊಡನೆ ಮಾತಾಡಿದರು.