ಕನ್ನಡ ಸತ್ಯವೇದವು
ಹಳೆಯ ಒಡಂಬಡಿಕೆ
ಕೀರ್ತನೆಗಳು
110ನೇ ಅಧ್ಯಾಯ
1 : ನುಡಿದಿಹನು ಇಂತೆಂದು ಪ್ರಭು ನನ್ನೊಡೆಯನಿಗೆ I “ಆಸೀನನಾಗಿರು ನೀನು ನನ್ನ ಬಲಗಡೆಗೆ I ಹಗೆಗಳನು ನಿನಗೆ ಕಾಲ್ಮಣೆಯಾಗಿಸುವವರೆಗೆ” II
2 : ಸಿಯೋನಿನ ಹೊರಗು ವಿಸ್ತರಿಸುವನು ಪ್ರಭು ನಿನ್ನ ರಾಜ್ಯದಾಳಿಕೆಯನು I ನಿನ್ನ ವೈರಿ ವಿರೋಧಿಗಳ ನಟ್ಟನಡುವೆಯೆ ದೊರೆತನ ಮಾಡುವೆ ನೀನು II
3 : ಸೇನೆಯನು ನೀ ಅಣಿಗೊಳಿಸುವ ದಿನದೊಳು I ಸೇರಿಕೊಳ್ವರು ತಾವಾಗಿಯೇ ಪ್ರಜೆಗಳು I ಶುಭ್ರ ವಸ್ತ್ರಧರಿಸಿ ನಿನ್ನ ಯುವಕ ಯೋಧರು I ಉದಯಕಾಲದಿಬ್ಬನಿಯಂತೆ ಇಳಿದು ಬರುವರು II
4 : “ಮೆಲ್ಕಿಸೆದೆಕ್ ಪರಂಪರೆಯ ಯಾಜಕ ನೀ ನಿರುತ” I ಬದಲಿಸನು ಪ್ರಭು ತಾನಿತ್ತ ಪ್ರಮಾಣದೀ ಮಾತ II
5 : ಬೆಂಬಲವಾಗಿ ನಿಂತಿಹನು ಪ್ರಭು ನಿನ್ನ ಹತ್ತಿರದಲೆ I ಸದೆಬಡಿವನು ಅರಸರನು ತನ್ನ ಪ್ರಕೋಪ ದಿನದಲೆ II
6 : ನ್ಯಾಯತೀರಿಸುವನು ಪ್ರಭು ಸಕಲ ಜನಾಂಗಗಳಲಿ I ಛೇಧಿಸುವನು ಶತ್ರುಗಳ ಶಿರಸನು ರಣರಂಗದಲಿ I ತುಂಬಿಸುವನು ಹೆಣಗಳನು ಎಲ್ಲೆಡೆಗಳಲಿ II
7 : ತೊರೆಯ ನೀರನು ಕುಡಿವನಾ ಒಡೆಯ I ತಲೆಯೆತ್ತಿ ನಡೆವನು ಗಳಿಸಿ ವಿಜಯ II