வேதாகமம்
ಹಳೆಯ ಒಡಂಬಡಿಕೆ
ಕೀರ್ತನೆಗಳು
129ನೇ ಅಧ್ಯಾಯ
1 : ಯೌವನಾರಭ್ಯ ಶತ್ರುಕಾಡಿದ್ದು ಎಂತೆಂದು I ಇಸ್ರಯೇಲ್ ಜನಾಂಗ ವರದಿ ಮಾಡಲಿ ನಮಗಿಂದು II
2 : ಯೌವನಾರಭ್ಯ ನನ್ನನು ಎನಿತೋ ಬಾಧಿಸಿಹರು I ನನ್ನ ಮೇಲಾದರೋ ಜಯಗಳಿಸಲಿಲ್ಲ ಅವರು II
3 : ಉಳುವವರು ಎನ್ನ ಬೆನ್ನನೆ ಉತ್ತಿರುವರು I ಆಳವಾದ ಗಾಯಗೆರೆಗಳನ್ನು ಮಾಡಿಹರು II
4 : ನಮ್ಮ ಪ್ರಭುವಾದರೋ ಸತ್ಯಸ್ವರೂಪನು I ಕಡಿದಿಹನು ದುರುಳರು ಹಾಕಿದ ಕಟ್ಟುಗಳನು II
5 : ಸಿಯೋನನ್ನು ದ್ವೇಷಿಸುವ ಜನ I ಹಿಂದಿರುಗಲಿ ಪಡೆದು ಅಪಮಾನ II
6 : ಅವರಾಗಲಿ ಮಾಳಿಗೆ ಮೇಲಿನ ಹುಲ್ಲಿನಂತೆ I ಒಣಗಿಹೋಗುವುದದು ಹೂ ಬಿಡುವುದಕ್ಕೆ ಮುಂಚೆ II
7 : ತುಂಬುವುದಿಲ್ಲಾ ಕೊಯ್ಯುವವನ ಹಿಡಿಯು I ಅದರ ಸಿವುಡು ಕಟ್ಟುವವನಾ ಮಡಿಲು II
8 : ‘ಪ್ರಭು ನಿನ್ನನು ಆಶೀರ್ವದಿಸಲಿ’ ಎಂಬ ಮಾತನ್ನಾಗಲಿ I ‘ಪ್ರಭು ನಾಮದಲಿ ನಿನಗೆ ಶುಭ’ ಎಂದಾಗಲಿ I ಹಾದುಹೋಗುವ ಜನಜಂಗುಳಿ ಅವರಿಗೆ ಹೇಳದಿರಲಿ” II