வேதாகமம்
ಹಳೆಯ ಒಡಂಬಡಿಕೆ
ಕೀರ್ತನೆಗಳು
116ನೇ ಅಧ್ಯಾಯ
1 : ನನಗಿದೆ ಪ್ರಭುವಿನಲ್ಲಿ ಪ್ರೀತಿ I ಆಲಿಸಿಹನಾತ ನನ್ನ ವಿನಂತಿ II
2 : ಆತನೆನ್ನ ಮೊರೆಗೆ ಕಿವಿಗೊಟ್ಟ ನಿಮಿತ್ತ I ವಿಜ್ಞಾಪಿಸುವೆ ಜೀವಮಾನ ಪರಿಯಂತ II
3 : ಸುತ್ತುಕೊಂಡಿದ್ದವೆನ್ನನು ಮೃತ್ಯುಪಾಶಗಳು I ಬಿಗಿಹಿಡಿದಿದ್ದವು ಪಾತಾಳ ವೇದನೆಗಳು I ಬಂದೊದಗಿದ್ದವೆನಗೆ ಕಷ್ಟಸಂಕಟಗಳು II
4 : ಕೂಗಿ ಕರೆದೆನಾಗ ಪ್ರಭುವಿನ ಸಿರಿ ನಾಮವನು I “ಪ್ರಭು, ಉಳಿಸೆನ್ನ ಪ್ರಾಣವನು” ಎಂದು ಬೇಡಿದೆನು II
5 : ಪ್ರಭು ಕೃಪಾಳು, ನ್ಯಾಯಪ್ರಿಯನು I ಕರುಣಾಮಯನು, ನಮ್ಮ ದೇವನು II
6 : ಕಾಪಾಡುವನು ಪ್ರಭು ಸರಳ ಜೀವಿಗಳನು I ರಕ್ಷಿಸಿದನು ಕುಗ್ಗಿದವನಾಗಿದ್ದ ಎನ್ನನು II
7 : ಹಿಂತಿರುಗು ನನ್ನ ಮನವೆ, ವಿಶ್ರಾಂತಿ ನೆಲೆಗೆ II ಮಹೋಪಕಾರಗಳನ್ನು ಎಸಗಿಹನು ಪ್ರಭು ನಿನಗೆ II
8 : ತಪ್ಪಿಸಿಹನು ಮರಣಕೆ ನಾನೀಡಾಗದಂತೆ I ಸಂತೈಸಿಹನು ಕಂಬನಿಯ ನಾ ಸುರಿಸದಂತೆ I ಕಾಪಾಡಿಹನು ಕಾಲೆಡವಿ ನಾ ಬೀಳದಂತೆ II
9 : ಎಂದೇ ನಡೆವೆನು ನಾನು ಪ್ರಭುವಿನ ಕಣ್ಮುಂದೆ I ಅಂತೆಯೇ ಬಾಳುವೆ ಜೀವಲೋಕದೊಳಿದ್ದೇ II
10 : ನಾ ನುಡಿದೆನಾದರೂ ‘ಬಹಳ ಸಂಕಟದಲ್ಲಿರುವೆ’ನೆಂದು I ನಾನುಸುರಿದೆನಾದರೂ ‘ಯಾರನು ನಂಬಲಾಗ’ದೆಂದು I ನನ್ನಲ್ಲಿ ಅಳಿಯದೆ ಉಳಿಯಿತಾ ವಿಶ್ವಾಸವು ಎಂದೆಂದು II
11 : ನಾ ನುಡಿದೆನಾದರೂ ‘ಬಹಳ ಸಂಕಟದಲ್ಲಿರುವೆ’ನೆಂದು I ನಾನುಸುರಿದೆನಾದರೂ ‘ಯಾರನು ನಂಬಲಾಗ’ದೆಂದು I ನನ್ನಲ್ಲಿ ಅಳಿಯದೆ ಉಳಿಯಿತಾ ವಿಶ್ವಾಸವು ಎಂದೆಂದು II
12 : ಪ್ರಭು ಎನಗೆ ಮಾಡಿದ ಮಹೋಪಕಾರಗಳಿಗಾಗಿ I ನನ್ನಿಂದೇನು ಮಾಡಲು ಸಾಧ್ಯ ಪ್ರತಿಯಾಗಿ? II
13 : ಎತ್ತಿ ಹಿಡಿವೆನು ರಕ್ಷಣೆಯ ಪಾನಪಾತ್ರೆಯನು I ಪ್ರಖ್ಯಾತಪಡಿಸುವೆನು ಪ್ರಭುವಿನ ನಾಮವನು II
14 : ಆತನಿಗೆ ನಾ ಹೊತ್ತ ಹರಕೆಗಳನು I ಆತನ ಸಭೆಮುಂದೆಯೆ ತೀರಿಸುವೆನು II
15 : ಪ್ರಭು ಅಲ್ಪವೆಂದೆಣಿಸನು I ತನ್ನ ಭಕ್ತರ ಮರಣವನು II
16 : ಹೇ ಪ್ರಭು, ಕರುಣಿಸು, ನಾ ನಿನ್ನ ಕಿಂಕರನು I ನಿನ್ನ ದಾಸಿಯ ಮಗನು, ನಿನ್ನ ಸೇವಕನು I ಬಿಡಿಸಿರುವೆ ನೀನು ನನ್ನ ಬಂಧನಗಳನು II
17 : ಅರ್ಪಿಸುವೆ ನಾ ನಿನಗೆ ಕೃತಜ್ಞತಾ ಬಲಿಗಳನು I ಪ್ರಖ್ಯಾತಪಡಿಸುವೆನು ಪ್ರಭುವಿನ ನಾಮವನು II
18 : ಹೇ ಜೆರುಸಲೇಮೇ, ನಿನ್ನ ಮಧ್ಯದೊಳು I ಆತನಿರುವ ಮಂದಿರದ ಅಂಗಳದೊಳು I ತೀರಿಸುವೆನು ಆತನ ಸಭೆಯ ಸಮ್ಮುಖದೊಳು I ಅರ್ಪಿಸುವೆನು ನಾ ಹೊತ್ತ ಆ ಹರಕೆಗಳನು II
19 : ಹೇ ಜೆರುಸಲೇಮೇ, ನಿನ್ನ ಮಧ್ಯದೊಳು I ಆತನಿರುವ ಮಂದಿರದ ಅಂಗಳದೊಳು I ತೀರಿಸುವೆನು ಆತನ ಸಭೆಯ ಸಮ್ಮುಖದೊಳು I ಅರ್ಪಿಸುವೆನು ನಾ ಹೊತ್ತ ಆ ಹರಕೆಗಳನು II