P. O. C ബൈബിള്
ಹಳೆಯ ಒಡಂಬಡಿಕೆ
ಕೀರ್ತನೆಗಳು
150ನೇ ಅಧ್ಯಾಯ
1 : ಅಲ್ಲೆಲೂಯ! I ಸ್ತುತಿಸಿರಿ ದೇವರನು ಆತನ ಪರಿಶುದ್ಧ ಆಲಯದಲಿ I ಆತನ ಶಕ್ತಿಯನು ಸಾರುವಾ ಆಕಾಶಮಂಡಲದಲಿ II
2 : ಸ್ತುತಿಸಿರಿ ಆತನ ಮಹತ್ಕಾರ್ಯಗಳಿಗಾಗಿ I ಆತನ ಮಹಾಪ್ರಭಾವಕ್ಕೆ ಅನುಗುಣವಾಗಿ II
3 : ಆತನನ್ನು ಸ್ತುತಿಸಿರಿ ಕೊಂಬುಗಳನ್ನೂದುತಾ I ಸ್ವರಮಂಡಲಗಳನು, ಕಿನ್ನರಿಗಳನು ಬಾರಿಸುತಾ II
4 : ಆತನನ್ನು ಸ್ತುತಿಸಿರಿ ತಮಟೆ ಬಡಿಯುತಾ ಕುಣಿಯುತಾ I ಆತನನ್ನು ಸ್ತುತಿಸಿರಿ ತಂತಿವಾದ್ಯ ನುಡಿಸುತಾ ಕೊಳಲೂದುತಾ II
5 : ಆತನನ್ನು ಸ್ತುತಿಸಿರಿ ತಾಳದಿಂದ I ಆತನನ್ನು ಸ್ತುತಿಸಿರಿ ಝಲ್ಲರಿಯಿಂದ II
6 : ಪ್ರಭುವನು ಸ್ತುತಿಸಲಿ ಉಸಿರಿರುವುದೆಲ್ಲವೂ I ಪ್ರಭುವಿಗೆ ಸ್ತೋತ್ರವಾಗಲಿ ಅಲ್ಲೆಲೂಯ! II