ಕನ್ನಡ ಸತ್ಯವೇದವು
ಹಳೆಯ ಒಡಂಬಡಿಕೆ
ಕೀರ್ತನೆಗಳು
15ನೇ ಅಧ್ಯಾಯ
- Verse 1: ಯೋಗ್ಯನಾರು ಪ್ರಭು ನಿನ್ನ ಗುಡಾರದಲಿ ಬಿಡಾರಮಾಡಲು? I ಅರ್ಹನಾರು ನಿನ್ನ ಪವಿತ್ರ ಶಿಖರದಲಿ ವಾಸವಾಗಿರಲು? II
- Verse 2: ಅಂಥವನಿರಬೇಕು ನಿರ್ದೋಷಿ, ಸನ್ಮಾರ್ಗಿ I ಸತ್ಯವ ನುಡಿಯಬೇಕು ಹೃತ್ಪೂರ್ವಕವಾಗಿ II
- Verse 3: ಚಾಡಿಯನು ಹೇಳನು, ಕೇಡನು ಮಾಡನನ್ಯರಿಗೆ I ಗುರಿಮಾಡನವನು ನೆರೆಹೊರೆಯವರನು ನಿಂದೆಗೆ II
- Verse 4: ಭ್ರಷ್ಟರನು ಧಿಕ್ಕರಿಸುವನು, ಭಕ್ತರನು ಗೌರವಿಸುವನು I ನಷ್ಟವಾದರೂ ಕೊಟ್ಟ ಮಾತನು ತಪ್ಪನವನು II
- Verse 5: ಕೊಡುವನು ಕಡವನು, ಬಯಸನು ಬಡ್ಡಿಯನು I ಎಡವರ ಕೇಡಿಗೆ ಪಡೆಯನು ಲಂಚವನು I ಕದಲನೆಂದಿಗೂ ಈಪರಿ ನಡೆವವನು II