வேதாகமம்
ಹಳೆಯ ಒಡಂಬಡಿಕೆ
ಕೀರ್ತನೆಗಳು
56ನೇ ಅಧ್ಯಾಯ
- Verse 1: ಕರುಣೆತೋರು ದೇವಾ, ಜನರೆನ್ನ ಬೆನ್ನಟ್ಟಿ ಬರುತಿಹರು I ದಿನವೆಲ್ಲ ಕದನ ಮಾಡಿ ಶತ್ರುಗಳೆನ್ನ ಬಾಧಿಸುತಿಹರು II
- Verse 2: ವಿರೋಧಿಗಳು ದಿನವಿಡೀ ಬೆನ್ನಟ್ಟಿ ಬರುತಿಹರು I ಸೊಕ್ಕಿನಿಂದ ನನಗೆದುರಾಗಿ ನಿಂತಿರುವರು ಹಲವರು II
- Verse 3: ಹೆದರಿಕೆ ಉಂಟಾದಾಗ I ನೀನೆ ನನಗೆ ಆಶ್ರಯ II
- Verse 4: ದೇವರಲ್ಲೇ ನಿರ್ಭೀತ ನಂಬಿಕೆ ನನಗೆ I ಹೆಮ್ಮೆ ಪಡುವೆನು ಆತನಿತ್ತ ವಾಗ್ದಾನಕೆ I ನರಮಾನವರು ಏನು ಮಾಡಿಯಾರೆನಗೆ? II
- Verse 5: ಸದಾ ಅಪಾರ್ಥ ಕಟ್ಟುವರೆನ್ನ ಮಾತಿಗೆ I ಅವರು ಬಗೆವುದೆಲ್ಲಾ ಕೇಡೇ ನನಗೆ II
- Verse 6: ಒಟ್ಟುಗೂಡಿ ಹೊಂಚುಹಾಕುತಿಹರು I ಹೆಜ್ಜೆಹಿಡಿದು ಕೊಲ್ಲ ಬರುತಿಹರು II
- Verse 7: ಇಂಥಾ ದ್ರೋಹಿಗಳು ತಪ್ಪಿಸಿಕೊಳ್ಳಬಾರದಯ್ಯಾ I ರೌದ್ರದಿಂದಾ ಜನರನು ನೀ ಕೆಡವಿಬಿಡು ದೇವಾ II
- Verse 8: ನನ್ನ ಅಲೆಮಾರಿತನದ ಲೆಕ್ಕವಿಟ್ಟಿರುವೆ ನಿನ್ನಲಿ I ನನ್ನ ಕಣ್ಣೀರನು ತುಂಬಿಡು ನಿನ್ನ ಬುದ್ದಲಿಯಲಿ I ಅದರ ಕತೆ ಬರೆದಿದೆಯಲ್ಲವೆ ನಿನ್ನ ಪುಸ್ತಕದಲಿ? II
- Verse 9: ನಾ ಮೊರೆಯಿಟ್ಟಾಗ ಶತ್ರುಗಳು ಪರಾರಿ ಹಿಂದಕೆ I ದೇವನಿರುವುದು ನನ್ನ ಕಡೆ, ಇದು ಗೊತ್ತಿದೆ ನನಗೆ II
- Verse 10: ನಾ ಹೆಮ್ಮೆಪಡುವುದು ದೇವನಲಿ, ಆತನ ವಾಗ್ದಾನದಲಿ I ನಾ ಹೆಮ್ಮೆಪಡುವುದು ಪ್ರಭುವಿನಲಿ, ಆತನ ವಾಗ್ದಾನದಲಿ II
- Verse 11: ದೇವರಲ್ಲೇ ನಿರ್ಭೀತ ನಂಬಿಕೆ ನನಗೆ I ನರಮಾನವರು ಏನು ಮಾಡಿಯಾರೆನಗೆ II
- Verse 12: ನಿನ್ನ ಮುಂದೆ ಜೀವನ್ ಜ್ಯೋತಿಯಲಿ ನಾ ನಡೆಯಮಾಡಿರುವೆ I ಮೃತ್ಯುವಿನಿಂದೆನ್ನ ಪ್ರಾಣವನು ನೀ ಮುಕ್ತಗೊಳಿಸಿರುವೆ I ಜಾರಿ ಬೀಳದಂತೆನ್ನ ಪಾದಗಳನು ಕಾದಿರಿಸಿರುವೆ II ಎಂದೇ ನಿನಗೆ ಹೊತ್ತ ಹರಕೆಗಳನು ಸಲ್ಲಿಸುವೆ I ಕೃತಜ್ಞತಾಬಲಿಗಳನು ದೇವಾ, ನಿನಗರ್ಪಿಸುವೆ II
- Verse 13: ನಿನ್ನ ಮುಂದೆ ಜೀವನ್ ಜ್ಯೋತಿಯಲಿ ನಾ ನಡೆಯಮಾಡಿರುವೆ I ಮೃತ್ಯುವಿನಿಂದೆನ್ನ ಪ್ರಾಣವನು ನೀ ಮುಕ್ತಗೊಳಿಸಿರುವೆ I ಜಾರಿ ಬೀಳದಂತೆನ್ನ ಪಾದಗಳನು ಕಾದಿರಿಸಿರುವೆ II ಎಂದೇ ನಿನಗೆ ಹೊತ್ತ ಹರಕೆಗಳನು ಸಲ್ಲಿಸುವೆ I ಕೃತಜ್ಞತಾಬಲಿಗಳನು ದೇವಾ, ನಿನಗರ್ಪಿಸುವೆ II