पवित्र बाइबिल
ಹಳೆಯ ಒಡಂಬಡಿಕೆ
ಕೀರ್ತನೆಗಳು
56ನೇ ಅಧ್ಯಾಯ
1 : ಕರುಣೆತೋರು ದೇವಾ, ಜನರೆನ್ನ ಬೆನ್ನಟ್ಟಿ ಬರುತಿಹರು I ದಿನವೆಲ್ಲ ಕದನ ಮಾಡಿ ಶತ್ರುಗಳೆನ್ನ ಬಾಧಿಸುತಿಹರು II
2 : ವಿರೋಧಿಗಳು ದಿನವಿಡೀ ಬೆನ್ನಟ್ಟಿ ಬರುತಿಹರು I ಸೊಕ್ಕಿನಿಂದ ನನಗೆದುರಾಗಿ ನಿಂತಿರುವರು ಹಲವರು II
3 : ಹೆದರಿಕೆ ಉಂಟಾದಾಗ I ನೀನೆ ನನಗೆ ಆಶ್ರಯ II
4 : ದೇವರಲ್ಲೇ ನಿರ್ಭೀತ ನಂಬಿಕೆ ನನಗೆ I ಹೆಮ್ಮೆ ಪಡುವೆನು ಆತನಿತ್ತ ವಾಗ್ದಾನಕೆ I ನರಮಾನವರು ಏನು ಮಾಡಿಯಾರೆನಗೆ? II
5 : ಸದಾ ಅಪಾರ್ಥ ಕಟ್ಟುವರೆನ್ನ ಮಾತಿಗೆ I ಅವರು ಬಗೆವುದೆಲ್ಲಾ ಕೇಡೇ ನನಗೆ II
6 : ಒಟ್ಟುಗೂಡಿ ಹೊಂಚುಹಾಕುತಿಹರು I ಹೆಜ್ಜೆಹಿಡಿದು ಕೊಲ್ಲ ಬರುತಿಹರು II
7 : ಇಂಥಾ ದ್ರೋಹಿಗಳು ತಪ್ಪಿಸಿಕೊಳ್ಳಬಾರದಯ್ಯಾ I ರೌದ್ರದಿಂದಾ ಜನರನು ನೀ ಕೆಡವಿಬಿಡು ದೇವಾ II
8 : ನನ್ನ ಅಲೆಮಾರಿತನದ ಲೆಕ್ಕವಿಟ್ಟಿರುವೆ ನಿನ್ನಲಿ I ನನ್ನ ಕಣ್ಣೀರನು ತುಂಬಿಡು ನಿನ್ನ ಬುದ್ದಲಿಯಲಿ I ಅದರ ಕತೆ ಬರೆದಿದೆಯಲ್ಲವೆ ನಿನ್ನ ಪುಸ್ತಕದಲಿ? II
9 : ನಾ ಮೊರೆಯಿಟ್ಟಾಗ ಶತ್ರುಗಳು ಪರಾರಿ ಹಿಂದಕೆ I ದೇವನಿರುವುದು ನನ್ನ ಕಡೆ, ಇದು ಗೊತ್ತಿದೆ ನನಗೆ II
10 : ನಾ ಹೆಮ್ಮೆಪಡುವುದು ದೇವನಲಿ, ಆತನ ವಾಗ್ದಾನದಲಿ I ನಾ ಹೆಮ್ಮೆಪಡುವುದು ಪ್ರಭುವಿನಲಿ, ಆತನ ವಾಗ್ದಾನದಲಿ II
11 : ದೇವರಲ್ಲೇ ನಿರ್ಭೀತ ನಂಬಿಕೆ ನನಗೆ I ನರಮಾನವರು ಏನು ಮಾಡಿಯಾರೆನಗೆ II
12 : ನಿನ್ನ ಮುಂದೆ ಜೀವನ್ ಜ್ಯೋತಿಯಲಿ ನಾ ನಡೆಯಮಾಡಿರುವೆ I ಮೃತ್ಯುವಿನಿಂದೆನ್ನ ಪ್ರಾಣವನು ನೀ ಮುಕ್ತಗೊಳಿಸಿರುವೆ I ಜಾರಿ ಬೀಳದಂತೆನ್ನ ಪಾದಗಳನು ಕಾದಿರಿಸಿರುವೆ II ಎಂದೇ ನಿನಗೆ ಹೊತ್ತ ಹರಕೆಗಳನು ಸಲ್ಲಿಸುವೆ I ಕೃತಜ್ಞತಾಬಲಿಗಳನು ದೇವಾ, ನಿನಗರ್ಪಿಸುವೆ II
13 : ನಿನ್ನ ಮುಂದೆ ಜೀವನ್ ಜ್ಯೋತಿಯಲಿ ನಾ ನಡೆಯಮಾಡಿರುವೆ I ಮೃತ್ಯುವಿನಿಂದೆನ್ನ ಪ್ರಾಣವನು ನೀ ಮುಕ್ತಗೊಳಿಸಿರುವೆ I ಜಾರಿ ಬೀಳದಂತೆನ್ನ ಪಾದಗಳನು ಕಾದಿರಿಸಿರುವೆ II ಎಂದೇ ನಿನಗೆ ಹೊತ್ತ ಹರಕೆಗಳನು ಸಲ್ಲಿಸುವೆ I ಕೃತಜ್ಞತಾಬಲಿಗಳನು ದೇವಾ, ನಿನಗರ್ಪಿಸುವೆ II