పరిశుద్ధ గ్రంథము
ಹಳೆಯ ಒಡಂಬಡಿಕೆ
ಯಾಜಕಕಾಂಡ
3ನೇ ಅಧ್ಯಾಯ
- Verse 1: “ಯಾರಾದರು ಶಾಂತಿಸಮಾಧಾನಕ್ಕಾಗಿ ಬಲಿದಾನ ಮಾಡಬೇಕಾದರೆ ಅಂಥವನು ಸಮರ್ಪಿಸುವ ಪ್ರಾಣಿ ದನಕರುವಾಗಿದ್ದಲ್ಲಿ, ಅದು ಗಂಡಾಗಿರಲಿ ಅಥವಾ ಹೆಣ್ಣಾಗಿರಲಿ, ಕಳಂಕರಹಿತವಾಗಿರಬೇಕು.
- Verse 2: ಅವನು ಆ ಪ್ರಾಣಿಯನ್ನು ಸರ್ವೇಶ್ವರನ ಸನ್ನಿಧಿಗೆ ತಂದು ಅದರ ತಲೆಯ ಮೇಲೆ ಕೈಯಿಡಬೇಕು; ದೇವದರ್ಶನದ ಗುಡಾರದ ಬಾಗಿಲಲ್ಲಿ ವಧಿಸಬೇಕು. ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಬಲಿಪೀಠದ ಸುತ್ತಲೂ ಚಿಮುಕಿಸಬೇಕು.
- Verse 3: ಆ ಬಲಿಪ್ರಾಣಿಯ ಈ ಭಾಗಗಳನ್ನು, ಕರುಳ ಸುತ್ತಲಿನ ಕೊಬ್ಬನ್ನೂ, ಮೂತ್ರಪಿಂಡಗಳನ್ನೂ ಮತ್ತು ಅವುಗಳ ಮೇಲಿನ ಕೊಬ್ಬನ್ನೂ ಕಾಳಿಜದ ಉತ್ತಮ ಭಾಗವನ್ನೂ ತೆಗೆದು ಸರ್ವೇಶ್ವರನಿಗೆ ಹೋಮಮಾಡಬೇಕು.
- Verse 4: ಆ ಬಲಿಪ್ರಾಣಿಯ ಈ ಭಾಗಗಳನ್ನು, ಕರುಳ ಸುತ್ತಲಿನ ಕೊಬ್ಬನ್ನೂ, ಮೂತ್ರಪಿಂಡಗಳನ್ನೂ ಮತ್ತು ಅವುಗಳ ಮೇಲಿನ ಕೊಬ್ಬನ್ನೂ ಕಾಳಿಜದ ಉತ್ತಮ ಭಾಗವನ್ನೂ ತೆಗೆದು ಸರ್ವೇಶ್ವರನಿಗೆ ಹೋಮಮಾಡಬೇಕು.
- Verse 5: ಆರೋನನ ವಂಶಜರಾದ ಯಾಜಕರು ಅದನ್ನು ಬಲಿಪೀಠದಲ್ಲಿ ಉರಿಯುವ ಕಟ್ಟಿಗೆಯ ಮೇಲಿರುವ ದಹನಬಲಿಪದಾರ್ಥಗಳೊಡನೆ ಹೋಮಮಾಡಬೇಕು. ಅದು ಸರ್ವೇಶ್ವರನಿಗೆ ಪ್ರಿಯವಾದ ಸುಗಂಧ ಬಲಿಯಾಗಿರುವುದು.
- Verse 6: “ಶಾಂತಿಸಮಾಧಾನಕ್ಕಾಗಿ ಸರ್ವೇಶ್ವರನಿಗೆ ಸಮರ್ಪಿಸುವ ಬಲಿಪ್ರಾಣಿ ಕುರಿ ಅಥವಾ ಆಡು ಆಗಿದ್ದರೆ, ಅದು ಗಂಡಾಗಿರಲಿ ಅಥವಾ ಹೆಣ್ಣಾಗಿರಲಿ, ಕಳಂಕರಹಿತವಾಗಿರಬೇಕು.
- Verse 7: “ಅದು ಕುರಿಯಾಗಿದ್ದರೆ ತಂದವನು ಅದನ್ನು ಸರ್ವೇಶ್ವರನ ಸನ್ನಿಧಿಗೆ ತೆಗೆದುಕೊಂಡು ಬಂದು ಅದರ ತಲೆಯ ಮೇಲೆ ಕೈಯಿಟ್ಟು
- Verse 8: ದೇವದರ್ಶನದ ಗುಡಾರದ ಎದುರಿಗೆ ಅದನ್ನು ವಧಿಸಬೇಕು. ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಬಲಿಪೀಠದ ಸುತ್ತಲು ಚಿಮುಕಿಸಬೇಕು.
- Verse 9: ಶಾಂತಿಸಮಾಧಾನಕ್ಕಾಗಿ ಅರ್ಪಿಸುವ ಆ ಬಲಿ ಪ್ರಾಣಿಯ ಕೊಬ್ಬನ್ನು ಸರ್ವೇಶ್ವರನಿಗೆ ಹೋಮವಾಗಿ ಸಮರ್ಪಿಸಬೇಕು.
- Verse 10: ಹೇಗೆಂದರೆ, ಬಾಲದ ಕೊಬ್ಬನ್ನೆಲ್ಲಾ ಬೆನ್ನೆಲುಬಿನ ಬಳಿಯಿಂದ ತೆಗೆದುಬಿಟ್ಟು ಅದನ್ನೂ ಕರುಳ ಸುತ್ತಲಿನ ಕೊಬ್ಬನ್ನೂ, ಮೂತ್ರಪಿಂಡಗಳನ್ನೂ ಅವುಗಳ ಮೇಲಿನ ಕೊಬ್ಬನ್ನೂ ಮತ್ತು ಕಾಳಿಜದ ಉತ್ತಮ ಭಾಗವನ್ನೂ
- Verse 11: ಯಾಜಕನು ಬಲಿಪೀಠದ ಮೇಲೆ ಹೋಮಮಾಡಬೇಕು. ಅದು ಸರ್ವೇಶ್ವರನಿಗೆ ದಹನಬಲಿಯ ಆಹಾರವಾಗುವುದು.
- Verse 12: ಸಮರ್ಪಿಸುವಂಥದ್ದು ಆಡಾಗಿದ್ದರೆ ಅರ್ಪಿಸುವವನು ಅದನ್ನು ಸರ್ವೇಶ್ವರನ ಸನ್ನಿಧಿಗೆ ತೆಗೆದುಕೊಂಡು ಬರಬೇಕು.
- Verse 13: ಅದರ ತಲೆಯ ಮೇಲೆ ಕೈಯಿಟ್ಟು ದೇವದರ್ಶನದ ಗುಡಾರದ ಎದುರಿಗೆ ವಧಿಸಬೇಕು. ಆರೋನನ ವಂಶಜರಾದ ಯಾಜಕರು ಅದರ ರಕ್ತವನ್ನು ಬಲಿಪೀಠದ ಸುತ್ತಲು ಚಿಮುಕಿಸಬೇಕು.
- Verse 14: ಅದರ ಕರುಳ ಸುತ್ತಲಿನ ಕೊಬ್ಬನ್ನೂ, ಮೂತ್ರಪಿಂಡಗಳನ್ನೂ
- Verse 15: ಮತ್ತು ಅವುಗಳ ಮೇಲಿನ ಕೊಬ್ಬನ್ನೂ ಕಾಳಿಜದ ಉತ್ತಮ ಭಾಗವನ್ನೂ ಸರ್ವೇಶ್ವರನಿಗೆ ಅಗ್ನಿಯ ಮೂಲಕ ಸಮರ್ಪಿಸಬೇಕು.
- Verse 16: ಯಾಜಕನು ಅದನ್ನು ಬಲಿಪೀಠದ ಮೇಲೆ ಹೋಮಮಾಡಬೇಕು. ಅದು ಸುಗಂಧಹೋಮ ರೂಪವಾಗಿ ಸರ್ವೇಶ್ವರನಿಗೆ ಆಹಾರವಾಗಿರುವುದು. ಬಲಿಪ್ರಾಣಿಗಳ ಕೊಬ್ಬೆಲ್ಲವು ಸರ್ವೇಶ್ವರನದು.
- Verse 17: ಕೊಬ್ಬನ್ನಾಗಲಿ, ರಕ್ತವನ್ನಾಗಲಿ ತಿನ್ನಕೂಡದೆಂಬುದು ನಿಮಗೂ ನಿಮ್ಮ ಸಂತತಿಯವರಿಗೂ ನೀವು ವಾಸಿಸುವ ಎಲ್ಲ ಸ್ಥಳಗಳಲ್ಲಿಯೂ ಶಾಶ್ವತ ನಿಯಮವಾಗಿದೆ.”