ಕನ್ನಡ ಸತ್ಯವೇದವು
ಹಳೆಯ ಒಡಂಬಡಿಕೆ
ಕೀರ್ತನೆಗಳು
114ನೇ ಅಧ್ಯಾಯ
1 : ಇಸ್ರಯೇಲ್ ಜನರು ಈಜಿಪ್ಟನು ಬಿಟ್ಟು ಹೊರಟಾಗ I ಯಕೋಬ್ಯರು ಪರ ನುಡಿಯಾಡುವರನು ಬಿಟ್ಟಗಲಿದಾಗ, II
2 : ಜುದೇಯ ಆಯಿತಾತನಿಗೆ ದೇವಾಲಯ I ಇಸ್ರಯೇಲ್ ಆಯಿತಾತನಿಗೆ ಸ್ವರಾಜ್ಯ II
3 : ಇದ ಕಂಡು ಓಡಿಹೋಯಿತು ಕಡಲು I ಮರಳಿ ಬಂದಿತು ಜೋರ್ಡಾನ್ ಹೊನಲು II
4 : ಕುಪ್ಪಳಿಸಿದವು ಪರ್ವತಗಳು ಟಗರುಗಳಂತೆ I ಕುಣಿದವು ಬೆಟ್ಟಗುಡ್ಡಗಳು ಕುರಿಮರಿಗಳಂತೆ II
5 : ಕಡಲೇ, ಓಡುತ್ತಿರುವೆ ಏಕೆ? I ಜೋರ್ಡನ್, ಮರಳುತಿರುವೆ ಏಕೆ? II
6 : ಪರ್ವತಗಳೇ, ಕುಪ್ಪಳಿಸಿದಿರೇಕೆ ಟಗರುಗಳಂತೆ? I ಬೆಟ್ಟಗುಡ್ಡಗಳೇ, ಕುಣಿದಿರೇಕೆ ಕುರಿಮರಿಗಳಂತೆ? II
7 : ನಡುಗು ಭೂಲೋಕವೇ, ಪ್ರಭುವಿನ ಮುಂದೆ I ನಡುನಡುಗು ಯಕೋಬ ದೇವರ ಮುಂದೆ II
8 : ಮಾರ್ಪಡಿಸಿಹನು ಗೋರ್ಕಲ್ಲನು ಕೊಳವಾಗಿ I ಕಲ್ಲು ಬಂಡೆಯನು ನೀರಿನ ಬುಗ್ಗೆಯಾಗಿ II