P. O. C ബൈബിള്
ಹಳೆಯ ಒಡಂಬಡಿಕೆ
ಕೀರ್ತನೆಗಳು
113ನೇ ಅಧ್ಯಾಯ
- Verse 1: ಅಲ್ಲೆಲೂಯ I ಪ್ರಭುವಿನ ದಾಸರೇ, ಸ್ತುತಿಮಾಡಿ I ಪ್ರಭುವಿನ ನಾಮಸ್ತುತಿಯನು ಮಾಡಿ II
- Verse 2: ಪ್ರಭುವಿನ ಸಿರಿನಾಮವು ಪೂಜ್ಯ I ಇಂದಿಗೂ ಎಂದೆಂದಿಗೂ ಪೂಜ್ಯ II
- Verse 3: ಪ್ರಭುವಿನಾ ಸಿರಿನಾಮವು ಸ್ತುತ್ಯ I ಪೂರ್ವ ಪಶ್ಚಿಮದವರೆಗೂ ಸ್ತುತ್ಯ II
- Verse 4: ಸಕಲ ಜಾತಿಜನಾಂಗಗಳಲಿ ಪ್ರಭು ಶ್ರೇಷ್ಠ I ಆತನ ಮಹಿಮೆ ಗಗನಕ್ಕಿಂತಲೂ ಉತ್ಕೃಷ್ಟ II
- Verse 5: ನಮ್ಮ ಪ್ರಭು ದೇವನಂತೆ ಯಾರು ಸಮರ್ಥ I ಉನ್ನತದಲಿ ಆಸನಾರೂಢನು ಆತ I ಇಹಪರಗಳನು ವೀಕ್ಷಿಸಲಾತ ಶಕ್ತ II
- Verse 6: ನಮ್ಮ ಪ್ರಭು ದೇವನಂತೆ ಯಾರು ಸಮರ್ಥ I ಉನ್ನತದಲಿ ಆಸನಾರೂಢನು ಆತ I ಇಹಪರಗಳನು ವೀಕ್ಷಿಸಲಾತ ಶಕ್ತ II
- Verse 7: ದೀನರನು ಎಬ್ಬಿಸುವನು ಧೂಳಿನಿಂದ I ಬಡವರನು ಎತ್ತುವನು ತಿಪ್ಪೆಯಿಂದ II
- Verse 8: ಕೂರಿಸುವನಾತ ಅವರನು ಅಧಿಪತಿಗಳ ನಡುವೆ I ತನ್ನ ಪ್ರಜೆಯನಾಳುವಾ ಅಧಿಪತಿಗಳ ನಡುವೆ II
- Verse 9: ಬಂಜೆಯಾದವಳನು ಮಕ್ಕಳ ತಾಯಾಗಿಸುವನು I ಆನಂದದಿಂದಾಕೆ ಬೆಳಗಿಸುವಳಾ ಮನೆಯನು II