ಕನ್ನಡ ಸತ್ಯವೇದವು
ಹಳೆಯ ಒಡಂಬಡಿಕೆ
ಕೀರ್ತನೆಗಳು
82ನೇ ಅಧ್ಯಾಯ
1 : ಸ್ವರ್ಗಸಭೆಯಲಿ ದೇವ ಅಗ್ರಸ್ಥಾನ ವಹಿಸಿಹನು I ದೇವರುಗಳ ಸಮೂಹದಲಿ ನ್ಯಾಯವಿಚಾರಿಸುತಿಹನು II
2 : “ಎಲ್ಲಿಯತನಕ ನೀಡುವಿರಿ ಅನ್ಯಾಯವಾದ ತೀರ್ಪನು? I ಎಲ್ಲಿಯವರೆಗೆ ತೋರುವಿರಿ ದುಷ್ಟರಿಗೆ ಪಕ್ಷಪಾತವನು? II
3 : ಅಬಲರಿಗೆ, ಅನಾಥರಿಗೆ ದೊರಕಿಸಿರಿ ನ್ಯಾಯವನು I ಕಾದಿರಿಸಿರಿ ದೀನದಲಿತರ ಹಕ್ಕು ಬಾಧ್ಯತೆಯನು II
4 : ಬಿಡುಗಡೆಮಾಡಿರಿ ದೀನ ಬಡಬಗ್ಗರನು I ದುರುಳರ ಕೈಯಿಂದ ರಕ್ಷಿಸಿರಿ ಅವರನು II
5 : ಬುದ್ಧಿಹೀನರು, ಮಂದಮತಿಗಳು, ಕತ್ತಲಲಿ ನಡೆವವರು ನೀವು I ಇದರಿಂದಲೆ ಕದಲುತ್ತಿರುವುವು ಧರೆಯ ಅಸ್ತಿವಾರಗಳು II
6 : ‘ನೀವು ದೇವರುಗಳು’, ‘ನೀವೆಲ್ಲರು ಪರಾತ್ಪರನ ಮಕ್ಕಳು’ ನಾನೆಂದೆ I ಆದರೂ ಅಳಿಯುವಿರಿ ಅರಸರಂತೆ, ಸಾಯುವಿರಿ ಬರಿ ಮಾನವರಂತೆ” II
7 : ‘ನೀವು ದೇವರುಗಳು’, ‘ನೀವೆಲ್ಲರು ಪರಾತ್ಪರನ ಮಕ್ಕಳು’ ನಾನೆಂದೆ I ಆದರೂ ಅಳಿಯುವಿರಿ ಅರಸರಂತೆ, ಸಾಯುವಿರಿ ಬರಿ ಮಾನವರಂತೆ” II
8 : ಎದ್ದೇಳು ದೇವ, ಸ್ಥಾಪಿಸು ನ್ಯಾಯವನು ಧರೆಯೊಳು I ನಿನ್ನ ಸೊತ್ತಾಗಿವೆಯಲ್ಲವೆ ಸಮಸ್ತ ರಾಷ್ಟ್ರಗಳು II