ಕನ್ನಡ ಸತ್ಯವೇದವು
ಹಳೆಯ ಒಡಂಬಡಿಕೆ
ಕೀರ್ತನೆಗಳು
72ನೇ ಅಧ್ಯಾಯ
- Verse 1: ತಿಳಿಸು ನಿನ್ನ ನ್ಯಾಯವನು ದೇವಾ, ರಾಜನಿಗೆ I ಕಲಿಸು ನಿನ್ನ ನೀತಿಯನು ರಾಜಕುವರನಿಗೆ II
- Verse 2: ಆತನಾಳಲಿ ನಿನ್ನ ಪ್ರಜೆಯನು ನೀತಿಯಿಂದ I ಪರಿಪಾಲಿಸಲಿ ದೀನದಲಿತರನು ನ್ಯಾಯದಿಂದ II
- Verse 3: ಬೆಟ್ಟಗುಡ್ಡಗಳಿಂದ ಬರಲಿ ಸಮೃದ್ಧಿ I ನಿನ್ನ ಪ್ರಜೆಗೆ ಫಲಿಸಲಿ ನ್ಯಾಯನೀತಿ II
- Verse 4: ದೀನದಲಿತರನಾತ ಉದ್ಧರಿಸಲಿ I ಬಡಬಗ್ಗರಿಗೆ ನ್ಯಾಯ ದೊರಕಿಸಲಿ I ಪ್ರಜಾಹಿಂಸಕರನು ಸದೆಬಡಿಯಲಿ II
- Verse 5: ಆತನು ಬಾಳಲಿ ಆಚಂದ್ರಾರ್ಕನಾಗಿ I ತಲತಲಾಂತರಕು ಭಯಭಕುತಿಯಿಂದಿರಲಿ II
- Verse 6: ಹುಲ್ಲುಕೊಯ್ದ ಹೊಲದ ಮೇಲೆ ಸುರಿವ ವೃಷ್ಟಿಯಂತೆ I ಬರಲಿ ಆತ ಒಣನೆಲವ ತೋಯ್ವ ಹದಮಳೆಯಂತೆ II
- Verse 7: ಬೆಳೆಯಲಿ ಆತನ ಪಾಲನೆಯಲಿ ನ್ಯಾಯನೀತಿ I ಬೆಳಗಲಿ ಚಂದ್ರನಂತೆ ಸದಾ ಸಂಪೂರ್ಣ ಶಾಂತಿ II
- Verse 8: ಸಾಗರದಿಂದ ಸಾಗರದವರೆಗಿರಲಿ ಆತನ ಆಧಿಪತ್ಯ I ಮಹಾ ನದಿಯಿಂದ ಬುವಿ ಎಲ್ಲೆಯವರೆಗಿರಲಿ ಆತನ ಪ್ರಭುತ್ವ II
- Verse 9: ಅರಣ್ಯವಾಸಿಗಳು ಅರಸನಿಗೆ ಅಡ್ಡಬೀಳಲಿ I ಆತನ ಕಡುವೈರಿಗಳು ನೆಲದ ಮಣ್ಣು ಮುಕ್ಕಲಿ II
- Verse 10: ಕಪ್ಪಗಳನರ್ಪಿಸಲಿ ತಾರ್ಷಿಷ್ ಹಾಗೂ ದ್ವೀಪದ್ವೀಪದ ರಾಜರುಗಳು I ಕಾಣಿಕೆಗಳ ತಂದೊಪ್ಪಿಸಲಿ ಶೆಬಾ ಹಾಗೂ ಸೆಬಾದ ರಾಜರುಗಳು II
- Verse 11: ರಾಜರುಗಳು ಸಾಷ್ಟಾಂಗವೆರಗಲಿ ಆತನಿಗೆ I ರಾಷ್ಟ್ರ, ಘನರಾಷ್ಟ್ರಗಳು ಸೇವೆಸಲ್ಲಿಸಲಿ ಆತನಿಗೆ II
- Verse 12: ಏಕೆನೆ ಕಾಪಾಡುವನಾತ ಮೊರೆಯಿಡುವ ಬಡವರನು I ಉದ್ಧರಿಸುವನಾತ ದಿಕ್ಕಿಲ್ಲದ ದೀನದಲಿತರನು II
- Verse 13: ದೀನದರಿದ್ರರಿಗೆ ದಯೆಯ ತೋರುವನು I ದಲಿತರ ಪ್ರಾಣವನು ಕಾಪಾಡುವನು II
- Verse 14: ಅವರ ಜೀವ ಆತನ ದೃಷ್ಟಿಯಲಿ ಅಮೂಲ್ಯ I ಜುಲುಮೆ ಶೋಷಣೆಗಳ ನೀಗಿಪುದು ಆತನ ಕಾರ್ಯ II
- Verse 15: ಅರಸ ಬಾಳಲಿ ಚಿರಕಾಲ; ದೊರಕಲಿ ಆತನಿಗೆ ಶೆಬಾದ ಬಂಗಾರ I ಜರುಗಲಿ ಪ್ರಾರ್ಥನೆ ಸದಾಕಾಲ; ಆಶೀರ್ವಾದ ಸಿಗಲಿ ಅನವರತ II
- Verse 16: ಸಮೃದ್ಧಿಯಾಗಲಿ ನಾಡಿನ ದವಸಧಾನ್ಯ ನೆಲಮಲೆಗಳ ಮೇಲೆ I ಸೊಂಪಾಗಲಿ ಅದರ ಹಣ್ಣುಹಂಪಲು ಲೆಬನೋನಿನ ಮರಗಳಂತೆ I ಹುಲುಸಾಗಲಿ ನಗರ ನಿವಾಸಿಗಳ ಸಂಖ್ಯೆ ಬಯಲಿನ ಹುಲ್ಲಿನಂತೆ II
- Verse 17: ಶಾಶ್ವತವಾಗಲಿ ಶ್ರೀನಾಮ ಆತನಿಗೆ I ಬೆಳಗಲಿ ಆತನ ಕೀರ್ತಿ ಸೂರ್ಯನಿರುವವರೆಗೆ I ಆತನಾಶೀರ್ವಾದ ಕೋರಲಿ ಸರ್ವರು ತಮಗೆ I ಶುಭವೆನ್ನಲಿ ಸಕಲ ರಾಷ್ಟ್ರಗಳು ಆತನಿಗೆ II
- Verse 18: ಸುತ್ಯರ್ಹನು ಸ್ವಾಮಿದೇವನು, ಇಸ್ರಯೇಲರ ದೇವನು I ಆತನೋರ್ವನೇ ಮಹತ್ಕಾರ್ಯಗಳನು ಎಸಗುವಂತವನು II
- Verse 19: ಮಹಿಮಾಯುಕ್ತ ಆತನ ನಾಮಕೆ ಸದಾಕಾಲವು ಸ್ತುತಿ I ಆಮೆನ್ ಆಮೆನ್ ಭೂಮಂಡಲವೆಲ್ಲಾ ಆತನ ಪ್ರಭಾವ ಪೂರ್ತಿ I ಇತಿ, ಜೆಸ್ಸೆಯನ ಕುವರ ದಾವೀದನ ಪ್ರಾರ್ಥನೆಗಳ ಸಮಾಪ್ತಿ II
- Verse 20: ಮಹಿಮಾಯುಕ್ತ ಆತನ ನಾಮಕೆ ಸದಾಕಾಲವು ಸ್ತುತಿ I ಆಮೆನ್ ಆಮೆನ್ ಭೂಮಂಡಲವೆಲ್ಲಾ ಆತನ ಪ್ರಭಾವ ಪೂರ್ತಿ I ಇತಿ, ಜೆಸ್ಸೆಯನ ಕುವರ ದಾವೀದನ ಪ್ರಾರ್ಥನೆಗಳ ಸಮಾಪ್ತಿ II