P. O. C ബൈബിള്
ಹಳೆಯ ಒಡಂಬಡಿಕೆ
ಕೀರ್ತನೆಗಳು
122ನೇ ಅಧ್ಯಾಯ
- Verse 1: ಪ್ರಭುವಿನಾಲಯಕೆ ಹೋಗೋಣ ಬಾ ಎಂದಾಗ I ಆಯಿತೆನಗೆ ಆನಂದ, ಜನರೆನ್ನ ಕರೆದಾಗ II
- Verse 2: ನನ್ನ ಕಾಲುಗಳು ಓ ಜೆರುಸಲೇಮೇ I ತಲುಪಿವೆ ನಿನ್ನ ಪುರದ್ವಾರಗಳನೇ II
- Verse 3: ನೋಡು, ಜೆರುಸಲೇಮ್ ಪಟ್ಟಣವಿದು I ಗಟ್ಟಿಯಾಗಿಯೆ ಕಟ್ಟಲ್ಪಟ್ಟಿಹುದು II
- Verse 4: ಕುಲಗಳು ಯಾತ್ರೆಯಾಗಿ ಬರುವುವು ಇಲ್ಲಿಗೆ I ಮಾಡುವರಿಲ್ಲಿಯೆ ಪ್ರಭುವಿನ ನಾಮ ಕೀರ್ತನೆ I ಪಾಲಿಪರಿಂತು ಇಸ್ರೇಲರಿಗೆ ವಿಧಿಸಿದಾಜ್ಞೆ II
- Verse 5: ಸ್ಥಾಪಿತವಾಗಿವೆಯಿಲ್ಲಿ ನ್ಯಾಯಪೀಠಗಳು I ದಾವೀದನ ಮನೆತನದವರ ಸಿಂಹಾಸನಗಳು II
- Verse 6: ಜೆರುಸಲೇಮಿನ ಶುಭಕ್ಕಾಗಿ ಮಾಡಿರಿ ಪ್ರಾರ್ಥನೆ I “ಜೆರುಸಲೇಮ್, ನಿನ್ನಭಿಮಾನಿಗಳಿಗೆ ಪ್ರವರ್ಧನೆ II
- Verse 7: ಶುಭವಿರಲೀ ನಿನ್ನೀ - ಪೌಳಿಗೋಡೆಗಳೊಳಗೆ” II ಸಂರಕ್ಷಣೆ ಇರಲಿ ನಿನ್ನ ಅರಮನೆಗಳೊಳಗೆ” II
- Verse 8: ನನ್ನ ಬಂಧುಬಳಗದವರ ನಿಮಿತ್ತ I “ನಿನಗೆ ಶುಭವಿರಲಿ” ಎಂಬುದು ನನ್ನ ಮತ II
- Verse 9: ನಮ್ಮ ಸ್ವಾಮಿದೇವರ ಮಂದಿರದ ನಿಮಿತ್ತ I ಹರಸುವೆ ನಿನ್ನ ಸುಕ್ಷೇಮವನು ಹಾರೈಸುತ II