P. O. C ബൈബിള്
ಹಳೆಯ ಒಡಂಬಡಿಕೆ
ಕೀರ್ತನೆಗಳು
127ನೇ ಅಧ್ಯಾಯ
- Verse 1: ಪ್ರಭುವೇ ಮನೆಮಠವನು ಕಟ್ಟದ ಹೊರತು I ಅದನು ಕಟ್ಟುವವರ ಪ್ರಯಾಸ ವ್ಯರ್ಥ II ಪ್ರಭುವೇ ಪಟ್ಟಣವನು ಕಟ್ಟಿದ ಹೊರತು I ಕಾವಲುಗಾರನು ಅದನು ಕಾಯುವುದು ವ್ಯರ್ಥ II
- Verse 2: ಹೊಟ್ಟೆಪಾಡಿಗಾಗಿ ಕಷ್ಟಪಡಲೋಸುಗ I ಹೊತ್ತಿಗೆ ಮುಂಚೆ ಎದ್ದೇಳುವುದು ವ್ಯರ್ಥ II ಹೊತ್ತು ಮೀರಿ ಮಲಗಲು ಹೋಗುವುದೂ ವ್ಯರ್ಥ I ನಿದ್ರೆಯಲು ಪ್ರಭುವೇ ಭಕ್ತರ ಪೋಷಕ II
- Verse 3: ಪ್ರಭುವಿನಿಂದ ಬಂದ ಸೊತ್ತು - ಪುತ್ರಸಂತಾನ I ಕರುಳ ಕುಡಿಯು ಆತ ನೀಡುವ ಬಹುಮಾನ II
- Verse 4: ಯೌವನದಲಿ ಹುಟ್ಟಿದ ಮಕ್ಕಳು I ಯೋಧರ ಕೈಲಿರುವ ಬಾಣಗಳು II
- Verse 5: ಭಾಗ್ಯವಂತನು ಅಂಥ ಬಾಣಗಳಿಂದ ಬತ್ತಳಿಕೆ ತುಂಬಿದವನು I ಸೋತುಹೋಗದೆ ನ್ಯಾಯಲಾಯದೊಳೂ ವೈರಿಯೊಡನೆ ವಾದಿಸುವನು II