ಕನ್ನಡ ಸತ್ಯವೇದವು
ಹಳೆಯ ಒಡಂಬಡಿಕೆ
ಸಂಖ್ಯಾಕಾಂಡ
34ನೇ ಅಧ್ಯಾಯ
- Verse 1: ಸರ್ವೇಶ್ವರ ಸ್ವಾಮಿ ಮೋಶೆಗೆ ಹೇಳಿದ್ದು ಏನೆಂದರೆ:
- Verse 2: “ನೀನು ಇಸ್ರಯೇಲರಿಗೆ ಹೀಗೆಂದು ಆಜ್ಞಾಪಿಸು - ‘ಇಡೀ ಕಾನಾನ್ ನಾಡು ನಿಮಗೆ ಸ್ವಂತ ನಾಡಾಗಿ ದೊರಕುವುದು.
- Verse 3: ನೀವು ಅಲ್ಲಿ ಸೇರಿದಾಗ ಎದೋಮ್ಯರ ಸರಹದ್ದಿನ ಬಳಿಯಿರುವ ಚಿನ್ ಮರುಭೂಮಿಯೇ ನಿಮ್ಮ ದಕ್ಷಿಣ ಮೇರೆಯಾಗಿರಬೇಕು. ಆ ಮೇರೆ ಮೂಡಣ ದಿಕ್ಕಿನಲ್ಲಿ ಲವಣಸಮುದ್ರದ ಕೊನೆಯಿಂದ ತೊಡಗುವುದು.
- Verse 4: ಅದು ಅಲ್ಲಿಂದ ದಕ್ಷಿಣಕ್ಕೆ ತಿರುಗಿಕೊಂಡು ಅಕ್ರಬ್ಬೀಮ್ ಎಂಬ ಕಣಿವೆಯ ಮಾರ್ಗವಾಗಿ ಚಿನಿಗೆ ಬರುವುದು. ಅದರ ಮೂಲೆ ಕಾದೇಶ್ ಬರ್ನೆಯದ ದಕ್ಷಿಣ ಕಡೆಯಲ್ಲಿರುವುದು. ಅಲ್ಲಿಂದ ಹಚರದ್ದಾರ್, ಆಚ್ಮೋನ್ ಎಂಬ ಊರುಗಳ ಮೇಲೆ
- Verse 5: ಈಜಿಪ್ಟ್ ದೇಶದ ಮುಂದೆ ಇರುವ ಹಳ್ಳಕ್ಕೆ ಬಂದು ಸಮುದ್ರದ ದಡದಲ್ಲಿ ಮುಗಿಯುವುದು.
- Verse 6: ‘ಪಶ್ಚಿಮ ದಿಕ್ಕಿನಲ್ಲಿ ಮಹಾಸಮುದ್ರದ ದಡವೇ ನಿಮ್ಮ ನಾಡಿನ ಮೇರೆಯಾಗಿರುವುದು.
- Verse 7: ‘ಉತ್ತರ ದಿಕ್ಕಿನ ಮೇರೆಗಾಗಿ ನೀವು ಮಹಾಸಮುದ್ರದಿಂದ ಹೋರ್ ಎಂಬ ಪರ್ವತಕ್ಕೂ
- Verse 8: ಆ ಪರ್ವತದಿಂದ ಹಮಾತಿನ ದಾರಿಗೂ ಗುರುತು ಹಾಕಿಕೊಳ್ಳಬೇಕು. ಅದರ ಮೂಲೆ ಚೆದಾದಿನ ಹತ್ತಿರ ಇರುವುದು.
- Verse 9: ಆಮೇಲೆ ಅದು ಜಿಫ್ರೋನಿಗೆ ಹೋಗಿ ಹಚೆರೇನಾನಿನ ಬಳಿಯಲ್ಲಿ ಮುಗಿಯುವುದು.
- Verse 10: ‘ಪೂರ್ವದಿಕ್ಕಿನ ಮೇರೆಗಾಗಿ ಹಚೆರೇನಾನಿನಿ0ದ ಶೆಫಾಮಿಗೆ ಗುರುತು ಹಾಕಬೇಕು.
- Verse 11: ಅಲ್ಲಿ0ದ ಅದು ಅಯಿನಿನ ಮೂಡಲಲ್ಲಿರುವ ರಿಬ್ಲಕ್ಕೆ ಬರಬೇಕು.ತರುವಾಯ ಅದು ಗಟ್ಟಾ ಇಳಿದು ಕಿನ್ನೆರೆತ್ ಸಮುದ್ರದ ಮೂಡಲಲ್ಲಿರುವ ಬೆಟ್ಟಗಳಿಗೆ ಹೋಗಬೇಕು.
- Verse 12: ಅದೂ ಅಲ್ಲಿಂದ ಜೋರ್ಡನ್ ನದಿಗೆ ಇಳಿದು, ಅದನ್ನು ಅನುಸರಿಸುತ್ತಾ ಲವಣ ಸಮುದ್ರದ ಬಳಿಯಲ್ಲಿ ಮುಗಿಯಬೇಕು.’ ಇವೇ ನಿಮ್ಮ ನಾಡಿನ ಮೇರೆಗಳು,” ಎಂದರು.
- Verse 13: ಅದಕ್ಕನುಸಾರವಾಗಿ ಮೋಶೆ ಇಸ್ರಯೇಲರಿಗೆ, “ನೀವು ಚೀಟುಹಾಕಿ ಹಂಚಿಕೊಳ್ಳಬೇಕೆಂದು ಸರ್ವೇಶ್ವರ ಆಜ್ಞಾಪಿಸಿದ ನಾಡು ಇದೇ. ಒಂಬತ್ತುವರೆ ಕುಲದವರಿಗೆ ಇದನ್ನು ಹಂಚಿಕೊಡಬೇಕು.
- Verse 14: ಬೇರೆ ಎರಡುವರೆ ಕುಲಗಳವರು, ಅಂದರೆ ರೂಬೇನ್ಯರ ಕುಟುಂಬಗಳು, ಗಾದ್ಯರ ಕುಟುಂಬಗಳು ಹಾಗು ಮನಸ್ಸೆಕುಲದವರಲ್ಲಿ ಅರ್ಧಜನರು ಜೋರ್ಡನ್ ನದಿಯ ಈಚೆ ಜೆರಿಕೊ ಪಟ್ಟಣಕ್ಕೆ ಪೂರ್ವದಿಕ್ಕಿನಲ್ಲಿ ಸೊತ್ತನ್ನು ಹೊಂದಿದ್ದಾರೆ,” ಎಂದು ಅಪ್ಪಣೆಕೊಟ್ಟನು.
- Verse 15: ಬೇರೆ ಎರಡುವರೆ ಕುಲಗಳವರು, ಅಂದರೆ ರೂಬೇನ್ಯರ ಕುಟುಂಬಗಳು, ಗಾದ್ಯರ ಕುಟುಂಬಗಳು ಹಾಗು ಮನಸ್ಸೆಕುಲದವರಲ್ಲಿ ಅರ್ಧಜನರು ಜೋರ್ಡನ್ ನದಿಯ ಈಚೆ ಜೆರಿಕೊ ಪಟ್ಟಣಕ್ಕೆ ಪೂರ್ವದಿಕ್ಕಿನಲ್ಲಿ ಸೊತ್ತನ್ನು ಹೊಂದಿದ್ದಾರೆ,” ಎಂದು ಅಪ್ಪಣೆಕೊಟ್ಟನು.
- Verse 16: ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದ್ದು ಏನೆಂದರೆ:
- Verse 17: “ಮಹಾಯಾಜಕ ಎಲ್ಲಾಜಾರನು, ನೂನನ ಮಗ ಯೆಹೋಶುವನು
- Verse 18: ಹಾಗು ಒಂದೊಂದು ಕುಲದಿಂದ ನೇಮಿಸಲ್ಪಟ್ಟ ಒಬ್ಬ ಕುಲನಾಯಕನು ಇವರೇ ಕಾನಾನ್ ನಾಡಿನಲ್ಲಿ ನಿಮ್ಮ ನಿಮ್ಮ ಸೊತ್ತುಗಳನ್ನು ಹಂಚಿಕೊಡಬೇಕಾದವರು.
- Verse 19: ಆಯಾ ಕುಲದಿಂದ ನೀವು ನೇಮಿಸಬೇಕಾದವರು ಇವರು: ಯೆಹೂದ ಕುಲದಿಂದ ಯೆಫುನ್ನೆಯ ಮಗ ಕಾಲೇಬ್,
- Verse 20: ಸಿಮೆಯೋನ್ ಕುಲದಿಂದ ಅಮ್ಮೀಹೂದನ ಮಗ ಶೆಮೂವೇಲ್,
- Verse 21: ಬೆನ್ಯಾಮೀನ್ ಕುಲದಿಂದ ಕಿಸ್ಲೋನನ ಮಗ ಎಲೀದಾದ್,
- Verse 22: ದಾನ್ ಕುಲದಿಂದ ಯೊಗ್ಲೀಯ ಮಗ ಬುಕ್ಕೀ ನಾಯಕ,
- Verse 23: ಜೋಸೆಫನ ವಂಶದವರಲ್ಲಿ ಮನಸ್ಸೆ ಕುಲದಿಂದ ಏಫೋದನ ಮಗ ಹನ್ನೀಯೇಲ್ ನಾಯಕ,
- Verse 24: ಎಫ್ರಯಿಮ್ ಕುಲದಿಂದ ಶಿಫ್ಟಾನನ ಮಗ ಕೆಮೂವೇಲ್ ನಾಯಕ,
- Verse 25: ಜೆಬುಲೂನ್ ಕುಲದಿಂದ ಪರ್ನಾಕನ ಮಗ ಎಲೀಚಾಫನ್ ನಾಯಕ,
- Verse 26: ಇಸ್ಸಾಕಾರ್ ಕುಲದಿಂದ ಅಜ್ಜಾನನ ಮಗ ಪಲ್ಟಿಯೇಲ್ ನಾಯಕ,
- Verse 27: ಆಶೇರ್ ಕುಲದಿಂದ ಶೆಲೋಮಿಯ ಮಗ ಅಹೀಹೂದ್ ನಾಯಕ,
- Verse 28: ನಫ್ತಾಲಿ ಕುಲದಿಂದ ಅಮ್ಮೀಹೂದನ ಮಗ ಪೆದಹೇಲ್ ನಾಯಕ.”
- Verse 29: ಕಾನಾನ್ ನಾಡಿನಲ್ಲಿ ಇಸ್ರಯೇಲರಿಗೆ ಸೊತ್ತನ್ನು ಹಂಚಿಕೊಡುವುದಕ್ಕೆ ಸರ್ವೇಶ್ವರ ಇವರೆಲ್ಲರನ್ನು ನೇಮಿಸಿದರು.