வேதாகமம்
ಹಳೆಯ ಒಡಂಬಡಿಕೆ
ಕೀರ್ತನೆಗಳು
124ನೇ ಅಧ್ಯಾಯ
1 : ಪ್ರಭು ನಮ್ಮ ಪರ ಇಲ್ಲದಿದ್ದರೆ ಏನಾಗುತ್ತಿತ್ತು? I ಇಸ್ರಯೇಲರೇ ಹೇಳಲಿ ಆ ದುರ್ಗತಿಯನ್ನು ಕುರಿತು II
2 : ಪ್ರಭು ನಮ್ಮ ಪರ ಇಲ್ಲದಿದ್ದರೆ ಏನಾಗುತ್ತಿತ್ತು? I ಜನರೆಮಗೆ ವಿರುದ್ಧ ಎದ್ದಾಗ ಏನಾಗುತ್ತಿತ್ತು? II
3 : ಉರಿಗೊಳ್ಳುತಿದ್ದರು ಕಡುಗೋಪದಿಂದ ಖಂಡಿತ I ನುಂಗಿಬಿಡುತ್ತಿದ್ದರು ನಮ್ಮನ್ನು ಜೀವಸಹಿತ II
4 : ಕೊಚ್ಚಿಬಿಡುತ್ತಿತ್ತು ನಮ್ಮನ್ನು ಹುಚ್ಚು ಪ್ರವಾಹ I ಬಡಿದುಬಿಡುತ್ತಿತ್ತು ನಮ್ಮನ್ನು ರಭಸದಿಂದ ಪೂರ I ಮುಳುಗಿಸಿಬಿಡುತ್ತಿತ್ತು ನಮ್ಮನ್ನು ಮಹಾಪ್ರಳಯ II
5 : ಕೊಚ್ಚಿಬಿಡುತ್ತಿತ್ತು ನಮ್ಮನ್ನು ಹುಚ್ಚು ಪ್ರವಾಹ I ಬಡಿದುಬಿಡುತ್ತಿತ್ತು ನಮ್ಮನ್ನು ರಭಸದಿಂದ ಪೂರ I ಮುಳುಗಿಸಿಬಿಡುತ್ತಿತ್ತು ನಮ್ಮನ್ನು ಮಹಾಪ್ರಳಯ II
6 : ತುತ್ತಾಗಿಸಲಿಲ್ಲ ನಮ್ಮನ್ನು ಶತ್ರುಗಳ ಬಾಯಿಗೆ I ಕೃತಜ್ಞತಾಪೂರ್ವಕ ಸ್ತೋತ್ರ ಇಗೋ ಪ್ರಭುವಿಗೆ II
7 : ಬೇಟೆಬಲೆಯಿಂದ ಪಾರಾದ ಪಕ್ಷಿಯಂತಾದೆವು I ಹರಿದುಹೋಯಿತಿದೊ ಬಲೆಯು, ಹಾರಿಹೋದೆವು ನಾವು II
8 : ನಮಗುದ್ಧಾರ ಪ್ರಭುವಿನ ನಾಮದಲಿ I ಭೂಮ್ಯಾಕಾಶವನು ಸೃಜಿಸಿದಾತನಲಿ II