ಕನ್ನಡ ಸತ್ಯವೇದವು
ಹಳೆಯ ಒಡಂಬಡಿಕೆ
ಕೀರ್ತನೆಗಳು
87ನೇ ಅಧ್ಯಾಯ
- Verse 1: ಪವಿತ್ರ ಪರ್ವತದಲಿ ಕರ್ತನು I ಸ್ಥಾಪಿಸಿಹನು ತನ್ನ ನಗರವನು II
- Verse 2: ಯಕೋಬ ವಂಶದ ಸಕಲ ನಿವಾಸಿಗಳಿಗಿಂತ I ಸಿಯೋನ್ ದ್ವಾರಗಳು ಆತನಿಗೆ ಸುಪ್ರೀತ II
- Verse 3: ದೈವ ಶ್ರೀನಗರವೇ, ಕೇಳು ಇವನ್ನು I ನಿನ್ನ ಕುರಿತ ಅತಿಶಯೋಕ್ತಿಗಳನು : II
- Verse 4: “ನನಗೆ ಮಣಿಯುವ ರಾಷ್ಟ್ರಗಳಲಿ I ಈಜಿಪ್ಟ್, ಬಾಬೆಲ್ ದೇಶಗಳನು ಲೆಕ್ಕಿಸುವೆ II ಜೆರುಸಲೇಮಿನ ನಿವಾಸಿಗಳಲಿ I ಪಿಲಿಷ್ಟಿಯ, ಟೈರ್, ಎಥಿಯೋಪಿಯ ಜನ ಸೇರಿವೆ II
- Verse 5: ಸಕಲ ಜನಾಂಗಗಳ ಜನನಿ ಸಿಯೋನ್ ನಗರವೇ I ಅದನು ಸ್ಥಾಪಿಸಿದವ ಪರಾತ್ಪರ ಪ್ರಭುವೇ” II
- Verse 6: ಪ್ರಭು ಪಟ್ಟಿಮಾಡುವಾಗ ಸಕಲ ಜಾತಿಜನಾಂಗಗಳನು I ನಿನ್ನ ಜನಾಂಗವೆಂದೇ ಪರಿಗಣಿಸುವನು ಪ್ರತಿಯೊಂದನು II
- Verse 7: ಗಾಯಕ ನರ್ತಕರೂ ಹಾಡುವರೀ ಹಾಡ I “ನಮ್ಮೆಲ್ಲರ ಜೀವದೊರೆತೆ ನೀನೇ ನೋಡ” II