पवित्र बाइबिल
ಹಳೆಯ ಒಡಂಬಡಿಕೆ
ಕೀರ್ತನೆಗಳು
54ನೇ ಅಧ್ಯಾಯ
- Verse 1: ರಕ್ಷಿಸೆನ್ನನು ದೇವ, ನಿನ್ನ ನಾಮ ಶಕ್ತಿಯಿಂದ I ನ್ಯಾಯ ದೊರಕಿಸೆನಗೆ ನಿನ್ನ ಪರಾಕ್ರಮದಿಂದ II
- Verse 2: ನನ್ನ ಪ್ರಾರ್ಥನೆಯನು ಆಲಿಸಯ್ಯಾ I ನನ್ನ ಮಾತುಗಳಿಗೆ ಕಿವಿಗೊಡು ದೇವಾ II
- Verse 3: ಗರ್ವಿಗಳು ನಿಂತಿಹರು ನನಗೆದುರಾಗಿ I ಕ್ರೂರಿಗಳು ಕಾದಿಹರೆನ್ನ ಕೊಲೆಗಾಗಿ I ಅವರಲಿಲ್ಲ ಮಾನ್ಯತೆ ದೇವರಿಗಾಗಿ II
- Verse 4: ನನಗಿದೋ ದೇವನೆ ಸಹಾಯಕನು I ಆತನೆನಗೆ ಜೀವಪೋಷಕನು II
- Verse 5: ತಿರುಗುಬಾಣವಾಗಲಿ ಶತ್ರುಗಳೆನಗೆ ಬಯಸುವ ಕೇಡು I ಸತ್ಯಸ್ವರೂಪಿಯಾದ ನೀನು ಅವರನು ನಾಶಮಾಡು II
- Verse 6: ಸರ್ವಾಪತ್ತುಗಳಿಂದ ತಪ್ಪಿಸಿದೆ ಪ್ರಭು, ನನ್ನನು I ಕಂಡಿವೆ ನನ್ನ ಕಣ್ಗಳೇ ಶತ್ರುಗೊದಗಿದ ಸೋಲನು II
- Verse 7: ಎಂತಲೆ ಸ್ವಂತ ಇಚ್ಛೆಯಿಂದ ಬಲಿಯನರ್ಪಿಸುವೆ ನಿನಗೆ I ಧನ್ಯವಾದ ಪ್ರಭು, ನಿನ್ನ ಸರ್ವೋತ್ತಮ ನಾಮಕೆ II