ಕನ್ನಡ ಸತ್ಯವೇದವು
ಹಳೆಯ ಒಡಂಬಡಿಕೆ
ಕೀರ್ತನೆಗಳು
43ನೇ ಅಧ್ಯಾಯ
1 : ನಿರ್ಣಯಿಸು ನನ್ನ ನ್ಯಾಯವನು ಓ ದೇವಾ I ವಾದಿಸು ಆ ಭಕ್ತಿಹೀನ ಜನತೆಯ ವಿರುದ್ಧ I ಬಿಡಿಸೆನ್ನನು ವಂಚಕರಿಂದ, ಅಧರ್ಮಿಗಳಿಂದ II
2 : ನನಗೆ ಕೋಟೆ ನೀನಲ್ಲವೇ? ನನ್ನ ಕೈ ಬಿಟ್ಟಿರುವೆ ಏಕೆ? I ಶತ್ರು ಬಾಧೆಯಿಂದ ಭಿಕಾರಿಯಂತೆ ನಾನಲೆಯಬೇಕೆ? II
3 : ಕಳುಹಿಸು ನಿನ್ನ ಜ್ಯೋತಿಯನು, ನಿನ್ನ ಸತ್ಯವನ್ನು ನನ್ನ ನಡೆಸಲಿಕ್ಕೆ I ಸೇರಿಸಲೆನ್ನನು ನಿನ್ನ ಪವಿತ್ರ ಪರ್ವತಕೆ, ನಿನ್ನಯ ನಿವಾಸಕೆ II
4 : ಬರುವೆನಾಗ ನಿನ್ನ ಬಲಿಪೀಠದ ಬಳಿಗೆ I ನನ್ನಾನಂದ ನಿಧಿಯಾದ ನಿನ್ನ ಸನ್ನಿಧಿಗೆ I ವೀಣೆ ನುಡಿಸಿ ದೇವಾ, ನಿನ್ನ ಸ್ತುತಿಸಲಿಕೆ II
5 : ಎನ್ನ ಮನವೆ, ಚಿಂತಿಸುವೆಯೇಕೆ? ವ್ಯಥೆಪಡುವುದೇಕೆ? ದೇವನಲ್ಲಿಡು ನಂಬಿಕೆ I ಮತ್ತೆ ಸ್ತುತಿಸುವೆ ನಾನಾತನನು, ಮುಕ್ತಿದಾತ ಪರಮಾತ್ಮ ಆತನೆನಗೆ II