P. O. C ബൈബിള്
ಹಳೆಯ ಒಡಂಬಡಿಕೆ
ಸಂಖ್ಯಾಕಾಂಡ
29ನೇ ಅಧ್ಯಾಯ
- Verse 1: ‘ಏಳನೆಯ ತಿಂಗಳಿನ ಮೊದಲನೆಯ ದಿನ ನೀವು ಯಾವ ದುಡಿಮೆಯನ್ನೂ ಮಾಡದೆ ದೇವಾರಾಧನೆಗಾಗಿ ಸಭೆ ಸೇರಬೇಕು. ಅದು ನಿಮಗೆ ಕೊಂಬೂದುವ ದಿನ.
- Verse 2: ಅಂದು ನೀವು ಸರ್ವೇಶ್ವರನಿಗೇ ಸುಗಂಧಕರವಾದ ಒಂದು ಹೋರಿ ದಹನಬಲಿಗಾಗಿ ಕಳಂಕರಹಿತವಾದ ಒಂದು ಹೋರಿ, ಒಂದು ಟಗರು ಮತ್ತು ವರ್ಷದ ಏಳು ಕುರಿಗಳನ್ನು ಹಾಗು
- Verse 3: ಧಾನ್ಯನೈವೇದ್ಯಕ್ಕಾಗಿ ಆ ಒಂದು ಹೋರಿಗೆ ಒಂಬತ್ತು ಸೇರು
- Verse 4: ಟಗರಿಗೆ ಆರು ಸೇರು, ಒಂದೊಂದು ಕುರಿಗೆ ಮೂರು ಸೇರು ಹೀಗೆ ಎಣ್ಣೆಬೆರೆಸಿದ ಗೋದಿಹಿಟ್ಟನ್ನು ಮತ್ತು
- Verse 5: ಪಾಪಪರಿಹಾರಕ ಬಲಿಗಾಗಿ ಒಂದು ಹೋತವನ್ನು ಸಮರ್ಪಿಸಬೇಕು.
- Verse 6: ಅಮಾವಾಸ್ಯೆಯಲ್ಲೂ ಪ್ರತಿದಿನವೂ ಸಲ್ಲಿಸುವ ದಹನಬಲಿಗಳ ಹಾಗು ಅವುಗಳಿಗೆ ಸಂಬಂಧಿಸಿದ ಧಾನ್ಯ-ಪಾನ ನೈವೇದ್ಯಗಳ ಜೊತೆಗೆ ಮೇಲೆ ಹೇಳಿದ ಬಲಿಗಳನ್ನು ಕೂಡ ಸಮರ್ಪಿಸಬೇಕು. ಅವು ಸರ್ವೇಶ್ವರನಿಗೆ ಸುಗಂಧಕರವಾದ ದಹನಬಲಿಯಾಗಿರುವುವು.
- Verse 7: ‘ಉಪವಾಸ ಆಚರಣೆಯ ಏಳನೆಯ ತಿಂಗಳಿನ ಹತ್ತನೆಯ ದಿನ ನೀವು ಯಾವ ದುಡಿಮೆಯನ್ನು ಮಾಡದೆ ದೇವಾರಾಧನೆಗಾಗಿ ಸಭೆ ಕೂಡಬೇಕು.
- Verse 8: ಸರ್ವೇಶ್ವರನಿಗೆ ಸುಗಂಧಕರವಾದ ದಹನಬಲಿಗಾಗಿ ಕಳಂಕರಹಿತವಾದ ಒಂದು ಹೋರಿ, ಒಂದು ಟಗರು, ವರ್ಷದ ಏಳು ಕುರಿ ಇವುಗಳನ್ನು ಹಾಗು
- Verse 9: ಧಾನ್ಯನೈವೇದ್ಯಕ್ಕಾಗಿ ಹೋರಿಗೆ ಒಂಬತ್ತು ಸೇರು,
- Verse 10: ಟಗರಿಗೆ ಆರು ಸೇರು, ಕುರಿಯೊಂದಕ್ಕೆ ಮೂರು ಸೇರು ಈ ಮೇರೆಗೆ ಎಣ್ಣೆಬೆರೆಸಿದ ಗೋದಿಹಿಟ್ಟನ್ನು ಮತ್ತು
- Verse 11: ಪಾಪ ಪರಿಹಾರಕ ಬಲಿಗಾಗಿ ಒಂದು ಹೋತವನ್ನು ತಂದು ಸಮರ್ಪಿಸಬೇಕು. ಆ ದಿನಕ್ಕೆ ನೇಮಕವಾದ ಪಾಪ ಪರಿಹಾರಕ ಬಲಿ, ದೈನಿಕ ದಹನಬಲಿ ಇದರ ಧಾನ್ಯ-ಪಾನ ದ್ರವ್ಯ ನೈವೇದ್ಯ ಇವುಗಳ ಸಮೇತ ಮೇಲೆ ಹೇಳಿದ ಬಲಿಗಳನ್ನು ಕೂಡ ಸಮರ್ಪಿಸಬೇಕು.
- Verse 12: ‘ಏಳನೆಯ ತಿಂಗಳಿನ ಹದಿನಾಲ್ಕನೆಯ ದಿನ ದೇವಾರಾಧನೆಗಾಗಿ ಸಭೆ ಕೂಡಬೇಕು. ನೀವು ಆ ದಿನದಂದು ಯಾವ ದುಡಿಮೆಯನ್ನೂ ಮಾಡಕೂಡದು. ಆ ದಿನ ಮೊದಲುಗೊಂಡು ಏಳು ದಿನಗಳವರೆಗೆ ಸರ್ವೇಶ್ವರನಿಗೆ ಹಬ್ಬವನ್ನು ಆಚರಿಸಬೇಕು.
- Verse 13: ಆ ದಿನದಲ್ಲಿ ದೈನಿಕ ದಹನಬಲಿಯನ್ನೂ ಅದಕ್ಕೆ ಸಂಬಂಧಿಸಿದ ಧಾನ್ಯ-ಪಾನ ನೈವೇದ್ಯಗಳನ್ನೂ ಅರ್ಪಿಸಬೇಕು. ಅವುಗಳ ಸುಗಂಧಕರವಾದ ದಹನಬಲಿಗಾಗಿ ಕಳಂಕರಹಿತ ಆದ ಹದಿಮೂರು ಹೋರಿಗಳನ್ನು, ಎರಡು ಟಗರುಗಳನ್ನು, ವರ್ಷದ ಹದಿನಾಲ್ಕು ಕುರಿಗಳನ್ನು ಸಮರ್ಪಿಸಬೇಕು.
- Verse 14: ಧಾನ್ಯನೈವೇದ್ಯಕ್ಕಾಗಿ ಪ್ರತಿ ಒಂದು ಹೋರಿಗೆ ಒಂಬತ್ತು ಸೇರು,
- Verse 15: ಟಗರಿಗೆ ಆರು ಸೇರು, ಹಾಗು ಕುರಿಗೆ ಮೂರು ಸೇರು ಹೀಗೆ ಎಣ್ಣೆಬೆರೆಸಿದ ಗೋದಿಹಿಟ್ಟನ್ನು ಒಪ್ಪಿಸಬೇಕು;
- Verse 16: ಅಂತೆಯೇ ಪಾಪ ಪರಿಹಾರಕ ಬಲಿಗಾಗಿ ಒಂದು ಹೋತವನ್ನು ತಂದು ಸಮರ್ಪಿಸಬೇಕು.
- Verse 17: ಆ ಹಬ್ಬದ ಎರಡನೆಯ ದಿನದಲ್ಲಿ ದೈನಿಕ ದಹನಬಲಿಯನ್ನೂ ಅದಕ್ಕೆ ಸಂಬಂಧಿಸಿದ ಧಾನ್ಯ ಹಾಗು ಪಾನಾರ್ಪಣೆಗಳ ಜೊತೆಗೆ ಕಳಂಕರಹಿತವಾದ ಹನ್ನೆರಡು ಹೋರಿ, ಎರಡು ಟಗರು, ವರ್ಷದ ಹದಿನಾಲ್ಕು ಕುರಿಗಳು ಇವುಗಳನ್ನು ಸಮರ್ಪಿಸಬೇಕು.
- Verse 18: ಆ ಪ್ರಾಣಿಗಳಲ್ಲಿ ಪ್ರತಿಯೊಂದಕ್ಕೆ ಸಂಬಂಧಿಸಿದ ಪ್ರಕಾರ ಧಾನ್ಯ ಹಾಗು ಪಾನಗಳನ್ನು ಒಪ್ಪಿಸಬೇಕು.
- Verse 19: ಪಾಪ ಪರಿಹಾರಕಬಲಿಗಾಗಿ ಒಂದು ಹೋತವನ್ನು ಕೂಡ ಅರ್ಪಿಸಬೇಕು.
- Verse 20: ‘ಮೂರನೆಯ ದಿನ, ದೈನಿಕ ದಹನಬಲಿಯನ್ನು, ಅದಕ್ಕೆ ಸಂಬಂಧಿಸಿದ ಧಾನ್ಯ-ಪಾನದ್ರವ್ಯಗಳ ಜೊತೆಗೆ ಕಳಂಕರಹಿತವಾದ ಹನ್ನೊಂದು ಹೋರಿ, ಎರಡು ಟಗರು ಹಾಗು ವರ್ಷದ ಹದಿನಾಲ್ಕು ಕುರಿ ಇವುಗಳನ್ನು ಸಮರ್ಪಿಸಬೇಕು.
- Verse 21: ನೈವೇದ್ಯಕ್ಕಾಗಿ ಆ ಪ್ರಾಣಿಗಳಲ್ಲಿ ಪ್ರತಿಯೊಂದಕ್ಕೆ ಸಂಬಂಧಿಸಿದ ಧಾನ್ಯಪಾನಗಳನ್ನು ಒಪ್ಪಿಸಬೇಕು;-
- Verse 22: ಅಂತೆಯೇ ಪಾಪ ಪರಿಹಾರಕ ಬಲಿಗಾಗಿ ಒಂದು ಹೋತವನ್ನೂ ಅರ್ಪಿಸಬೇಕು.
- Verse 23: ‘ನಾಲ್ಕನೆಯ ದಿನ, ದೈನಿಕ ದಹನಬಲಿಯನ್ನೂ ಅದಕ್ಕೆ ಸಂಬಂಧವಾದ ಧಾನ್ಯ ಹಾಗು ಪಾನಾರ್ಪಣೆಗಳ ಜೊತೆ ಕಳಂಕರಹಿತವಾದ ಹತ್ತು ಹೋರಿ, ಎರಡು ಟಗರು, ವರ್ಷದ ಹದಿನಾಲ್ಕು ಕುರಿಗಳು, ಇವುಗಳನ್ನು ಸಮರ್ಪಿಸಬೇಕು.
- Verse 24: ನೈವೇದ್ಯಕ್ಕಾಗಿ ಪ್ರಾಣಿಗಳಲ್ಲಿ ಪ್ರತಿಯೊಂದಕ್ಕೆ ಸಂಬಂಧವಾದ ಧಾನ್ಯ ಹಾಗು ಪಾನದ್ರವ್ಯಗಳನ್ನು ಒಪ್ಪಿಸಬೇಕು;
- Verse 25: ಪಾಪಪರಿಹಾರಕ ಬಲಿಗಾಗಿ ಒಂದು ಹೋತವನ್ನೂ ಅರ್ಪಿಸಬೇಕು.
- Verse 26: ‘ಐದನೆಯ ದಿನ, ದೈನಿಕ ದಹನಬಲಿಯನ್ನು, ಅದಕ್ಕೆ ಸಂಬಂಧಿಸಿದ ಧಾನ್ಯ ಹಾಗು ಪಾನಾರ್ಪಣೆಗಳ ಜೊತೆಗೆ ಕಳಂಕರಹಿತವಾದ ಒಂಬತ್ತು ಹೋರಿ, ಎರಡು ಟಗರು, ವರ್ಷದ ಹದಿನಾಲ್ಕು ಕುರಿಗಳನ್ನು ಅರ್ಪಿಸಬೇಕು;
- Verse 27: ನೈವೇದ್ಯಕ್ಕಾಗಿ ಈ ಪ್ರಾಣಿಗಳಲ್ಲಿ ಪ್ರತಿಯೊಂದಕ್ಕೆ ಸಂಬಂಧವಾದ ಧಾನ್ಯ ಹಾಗು ಪಾನದ್ರವ್ಯಗಳನ್ನು ಒಪ್ಪಿಸಬೇಕು.
- Verse 28: ಪಾಪಪರಿಹಾರಕ ಬಲಿಗಾಗಿ ಒಂದು ಹೋತವನ್ನು ಸಮರ್ಪಿಸಬೇಕು.
- Verse 29: ‘ಆರನೆಯ ದಿನ, ದೈನಿಕ ದಹನಬಲಿಯನ್ನೂ ಅದಕ್ಕೆ ಸಂಬಂಧಿಸಿದ ಧಾನ್ಯ ಹಾಗು ಪಾನರ್ಪಣೆಗಳ ಜೊತೆಗೆ ಕಳಂಕರಹಿತವಾದ ಎಂಟು ಹೋರಿ, ಎರಡು ಟಗರು, ವರ್ಷದ ಹದಿನಾಲ್ಕು ಕುರಿಗಳನ್ನೂ ಸಮರ್ಪಿಸಬೇಕು.
- Verse 30: ನೈವೇದ್ಯಕ್ಕಾಗಿ ಆ ಪ್ರಾಣಿಗಳಲ್ಲಿ ಪ್ರತಿಯೊಂದಕ್ಕೆ ನೇಮಕವಾದ ಪ್ರಕಾರ ಧಾನ್ಯ ಹಾಗು ಪಾನಾರ್ಪಣೆಗಳನ್ನು ಒಪ್ಪಿಸಬೇಕು.
- Verse 31: ಪಾಪಪರಿಹಾರಕ ಬಲಿಗಾಗಿ ಒಂದು ಹೋತವನ್ನು ಅರ್ಪಿಸಬೇಕು.
- Verse 32: ‘ಏಳನೆಯ ದಿನ, ದೈನಿಕ ದಹನಬಲಿಯನ್ನೂ ಅದಕ್ಕೆ ಸಂಬಂಧಿಸಿದ ಧಾನ್ಯ ಹಾಗು ಪಾನಾರ್ಪಣೆಗಳ ಜೊತೆಗೆ ಕಳಂಕರಹಿತವಾದ ಏಳು ಹೋರಿ, ಎರಡು ಟಗರು, ವರ್ಷದ ಹದಿನಾಲ್ಕು ಕುರಿಗಳನ್ನು ಸಮರ್ಪಿಸಬೇಕು.
- Verse 33: ನೈವೇದ್ಯಕ್ಕಾಗಿ ಈ ಪ್ರಾಣಿಗಳಲ್ಲಿ ಪ್ರತಿಯೊಂದಕ್ಕೆ ನೇಮಕವಾದ ಪ್ರಕಾರ ಧಾನ್ಯ ಹಾಗು ಪಾನಾರ್ಪಣೆಗಳನ್ನು ಒಪ್ಪಿಸಬೇಕು.
- Verse 34: ಪಾಪಪರಿಹಾರಕ ಬಲಿಗಾಗಿ ಒಂದು ಹೋತವನ್ನೂ ಅರ್ಪಿಸಬೇಕು.
- Verse 35: ‘ಎಂಟನೆಯ ದಿನ, ದೇವಾರಾಧನೆಗೆ ಸಭೆಕೂಡಬೇಕು. ಅಂದು ಯಾವ ದುಡಿಮೆಯನ್ನೂ ಮಾಡಕೂಡದು.
- Verse 36: ದೈನಿಕ ದಹನಬಲಿಯನ್ನೂ ಅದಕ್ಕೆ ಸಂಬಂಧಿಸಿದ ಧಾನ್ಯ ಹಾಗು ಪಾನಾರ್ಪಣೆಗಳನ್ನೂ ಅರ್ಪಿಸಬೇಕು. ಅವುಗಳ ಜೊತೆಗೆ ಸರ್ವೇಶ್ವರನಿಗೆ ಸುಗಂಧಕರ ದಹನಬಲಿಗಾಗಿ ಕಳಂಕರಹಿತವಾದ ಒಂದು ಹೋರಿ, ಒಂದು ಟಗರು, ವರ್ಷದ ಏಳು ಕುರಿಗಳನ್ನು ಸಮರ್ಪಿಸಬೇಕು.
- Verse 37: ನೈವೇದ್ಯಕ್ಕಾಗಿ ಈ ಪ್ರಾಣಿಗಳಲ್ಲಿ ಪ್ರತಿ ಒಂದಕ್ಕೆ ನೇಮಕವಾದ ಪ್ರಕಾರ ಧಾನ್ಯ ಹಾಗು ಪಾನಾರ್ಪಣೆಗಳನ್ನು ಒಪ್ಪಿಸಬೇಕು.
- Verse 38: ಪಾಪಪರಿಹಾರಕ ಬಲಿಗಾಗಿ ಒಂದು ಹೋತವನ್ನೂ ಸಮರ್ಪಿಸಬೇಕು.
- Verse 39: ‘ನೀವು ಕಾಣಿಕೆಯಾಗಿ ಆಗಲಿ, ಹರಕೆಯನ್ನು ತೀರಿಸುವುದಕ್ಕಾಗಿ ಆಗಲಿ ಮಾಡುವ ದಹನಬಲಿ, ಧಾನ್ಯನೈವೇದ್ಯ, ಪಾನಾರ್ಪಣೆ, ಸಮಾಧಾನಬಲಿ ಇವುಗಳನ್ನು ಮಾತ್ರವಲ್ಲದೆ ಹಬ್ಬದ ದಿನಗಳಲ್ಲಿ ಮೇಲೆ ಸೂಚಿಸಿರುವ ಬಲಿಗಳನ್ನು ಹೆಚ್ಚಾಗಿ ಮಾಡಬೇಕು’.”
- Verse 40: ಸರ್ವೇಶ್ವರಸ್ವಾಮಿ ಕೊಟ್ಟ ಈ ಎಲ್ಲ ಆಜ್ಞೆಗಳನ್ನು ಮೋಶೆ ಇಸ್ರಯೇಲರಿಗೆ ತಿಳಿಸಿದನು.