पवित्र बाइबिल
ಹಳೆಯ ಒಡಂಬಡಿಕೆ
ವಿಮೋಚನಕಾಂಡ
31ನೇ ಅಧ್ಯಾಯ
- Verse 1: ಸರ್ವೇಶ್ವರ ಸ್ವಾಮಿ ಮೋಶೆಗೆ ಹೀಗೆಂದರು:
- Verse 2: “ಯೆಹೂದ ಕುಲದವನಾದ ಹೂರನ ಮೊಮ್ಮಗನೂ ಊರಿಯ ಮಗನೂ ಆದ ಬೆಚಲೇಲನೆಂಬುವನನ್ನು ಗುರುತಿಸಿ ನಾನು ಆರಿಸಿಕೊಂಡಿದ್ದೇನೆ;
- Verse 3: ಮತ್ತು ಅವನಿಗೆ ದೈವಾತ್ಮಶಕ್ತಿಯನ್ನು ಕೊಟ್ಟು, ತಕ್ಕಜ್ಞಾನ, ವಿವೇಕ ವಿವಿಧ ಶಿಲ್ಪಶಾಸ್ತ್ರ ಕುಶಲತೆಯನ್ನು ಅನುಗ್ರಹಿಸಿದ್ದೇನೆ.
- Verse 4: ಅವನು ಸುಂದರವಾದ, ನಯನವಿರಾದ ಕೆಲಸಗಳನ್ನು ಕಲ್ಪಿಸುವನು; ಚಿನ್ನ, ಬೆಳ್ಳಿ, ತಾಮ್ರಗಳಿಂದ ಅವುಗಳನ್ನು ರೂಪಿಸುವನು;
- Verse 5: ರತ್ನಗಳನ್ನು ಕೆತ್ತಿ ಮರದಲ್ಲಿ ವಿಚಿತ್ರವಾದ ಕೆತ್ತನೆ ಕೆಲಸವನ್ನು ಮಾಡುವನು; ಇವೇ ಮೊದಲಾದ ಸಮಸ್ತ ಶೃಂಗಾರ ಕೆಲಸವನ್ನು ಮಾಡುವನು.
- Verse 6: ಅವನೊಂದಿಗೆ ದಾನ್ ಕುಲದವನಾದ ಅಹೀಸಾಮಾಕನ ಮಗ ಒಹೋಲೀಯಾಬನನ್ನು ನೇಮಿಸಿದ್ದೇನೆ. ಇದು ಮಾತ್ರವಲ್ಲದೆ ನಾನು ನಿನಗೆ ಆಜ್ಞಾಪಿಸಿದ್ದೆಲ್ಲವನ್ನು ಮಾಡಲು ಕಲಾನಿಪುಣರಿಗೆ ಬೇಕಾದ ಜ್ಞಾನವನ್ನು ಕೊಟ್ಟಿದ್ದೇನೆ.
- Verse 7: ದೇವದರ್ಶನದ ಗುಡಾರ, ಆಜ್ಞಾಶಾಸನಗಳಿರುವ ಮಂಜೂಷ, ಅದರ ಮೇಲಿರುವ ಕೃಪಾಸನ, ಗುಡಾರದ ಎಲ್ಲ ಉಪಕರಣಗಳು;
- Verse 8: ಮೇಜು, ಅದರ ಉಪಕರಣಗಳು, ಚೊಕ್ಕಬಂಗಾರದ ದೀಪವೃಕ್ಷ, ಅದರ ಉಪಕರಣಗಳು,
- Verse 9: ಧೂಪವೇದಿಕೆ, ಬಲಿಪೀಠ, ಅದರ ಉಪಕರಣಗಳು,
- Verse 10: ನೀರಿನ ತೊಟ್ಟಿ, ಅದರ ಪೀಠ, ಅಲಂಕಾರವಾದ ದೀಕ್ಷಾವಸ್ತ್ರಗಳು, ಅಂದರೆ ಮಹಾಯಾಜಕ ಆರೋನನಿಗೂ ಅವನ ಮಕ್ಕಳಿಗೂ ಬೇಕಾದ ಯಾಜಕ ವಸ್ತ್ರಗಳು,
- Verse 11: ಪಟ್ಟಾಭಿಷೇಕ ತೈಲ, ಪವಿತ್ರಸ್ಥಾನದ ಸೇವೆಗೆ ಬೇಕಾದ ಪರಿಮಳಧೂಪ ಇವುಗಳನ್ನೆಲ್ಲಾ ನಾನು ನಿನಗೆ ಆಜ್ಞಾಪಿಸಿದಂತೆಯೇ ಅವರು ಮಾಡುವರು.
- Verse 12: ಮೋಶೆ ಮುಖಾಂತರ ಸರ್ವೇಶ್ವರ ಇಸ್ರಯೇಲರಿಗೆ ಇತ್ತ ಆಜ್ಞೆ: “ನಾನು ನೇಮಿಸಿರುವ ಸಬ್ಬತ್ ದಿನಗಳನ್ನು ನೀವು ತಪ್ಪದೆ ಆಚರಿಸಬೇಕು. ನಿಮ್ಮನ್ನು ದೇವಜನರನ್ನಾಗಿ ಮಾಡಿರುವ ಸರ್ವೇಶ್ವರನು ನಾನೇ ಎಂದು ನೀವು ತಿಳಿದುಕೊಳ್ಳುವಂತೆ ಇದೇ ನನಗೂ ನಿಮಗೂ ನಿಮ್ಮ ಸಂತತಿಯವರಿಗೂ ಇರುವ ಗುರುತು.
- Verse 13: ಮೋಶೆ ಮುಖಾಂತರ ಸರ್ವೇಶ್ವರ ಇಸ್ರಯೇಲರಿಗೆ ಇತ್ತ ಆಜ್ಞೆ: “ನಾನು ನೇಮಿಸಿರುವ ಸಬ್ಬತ್ ದಿನಗಳನ್ನು ನೀವು ತಪ್ಪದೆ ಆಚರಿಸಬೇಕು. ನಿಮ್ಮನ್ನು ದೇವಜನರನ್ನಾಗಿ ಮಾಡಿರುವ ಸರ್ವೇಶ್ವರನು ನಾನೇ ಎಂದು ನೀವು ತಿಳಿದುಕೊಳ್ಳುವಂತೆ ಇದೇ ನನಗೂ ನಿಮಗೂ ನಿಮ್ಮ ಸಂತತಿಯವರಿಗೂ ಇರುವ ಗುರುತು.
- Verse 14: ಆದಕಾರಣ ನೀವು ಸಬ್ಬತ್ ದಿನವನ್ನು ದೇವರ ದಿನವೆಂದು ಭಾವಿಸಿ ಆಚರಿಸಬೇಕು. ಅದನ್ನು ಅಪವಿತ್ರವೆಂದು ವರ್ತಿಸುವವನಿಗೆ ಮರಣಶಿಕ್ಷೆಯಾಗಬೇಕು. ಆ ದಿನದಲ್ಲಿ ದುಡಿಯುವವನನ್ನು ತನ್ನ ಕುಲದಿಂದ ತೆಗೆದುಹಾಕಬೇಕು.
- Verse 15: ಆರು ದಿನಗಳು ಕೆಲಸ ಮಾಡಬಹುದು. ಏಳನೆಯ ದಿನ ವಿಶ್ರಾಂತಿದಿನವಾದ ಸಬ್ಬತ್, ಸರ್ವೇಶ್ವರನಾದ ನನಗೆ ಪರಿಶುದ್ಧ ದಿನ. ಇಂಥ ಸಬ್ಬತ್ ದಿನದಲ್ಲಿ ದುಡಿಯುವವನಿಗೆ ಮರಣ ಶಿಕ್ಷೆಯಾಗಬೇಕು.
- Verse 16: ಆದುದರಿಂದ ಇಸ್ರಯೇಲರು ಸಬ್ಬತ್ ದಿನವನ್ನು ಆಚರಿಸಬೇಕು. ಈ ಆಚರಣೆ ಅವರಿಗೂ ಅವರ ಪೀಳಿಗೆಗೂ ಶಾಶ್ವತವಾದ ಒಂದು ನಿಬಂಧನೆ.
- Verse 17: ನನಗೂ ಇಸ್ರಯೇಲರಿಗೂ ನಡುವೆ ಇದೊಂದು ಸದಾಕಾಲದ ಗುರುತು. ಆರು ದಿನಗಳಲ್ಲಿ ಸರ್ವೇಶ್ವರನಾದ ನಾನು ಭೂಮ್ಯಾಕಾಶಗಳನ್ನು ಸೃಷ್ಟಿಮಾಡಿ ಏಳನೆಯ ದಿನದಲ್ಲಿ ದುಡಿಯದೆ ವಿಶ್ರಮಿಸಿಕೊಂಡೆನಲ್ಲವೆ?”
- Verse 18: ಸರ್ವೇಶ್ವರ ಸೀನಾಯಿ ಬೆಟ್ಟದಲ್ಲಿ ಮೋಶೆಯ ಸಂಗಡ ಮಾತಾಡುವುದನ್ನು ಮುಗಿಸಿದ ಮೇಲೆ ಅವನಿಗೆ ತಮ್ಮ ಕೈಯಿಂದ ಕೆತ್ತಲ್ಪಟ್ಟ ಶಿಲಾಶಾಸನಗಳಾದ ಎರಡು ಆಜ್ಞಾಶಾಸನಗಳನ್ನು ಕೊಟ್ಟರು.