पवित्र बाइबिल
ಹಳೆಯ ಒಡಂಬಡಿಕೆ
ಸಂಖ್ಯಾಕಾಂಡ
2ನೇ ಅಧ್ಯಾಯ
- Verse 1: ಸರ್ವೇಶ್ವರ ಸ್ವಾಮಿ ಮೋಶೆ - ಆರೋನರಿಗೆ ಕೊಟ್ಟ ಆಜ್ಞೆ ಇದು:
- Verse 2: ಇಸ್ರಯೇಲರೆಲ್ಲರೂ ದೇವದರ್ಶನದ ಗುಡಾರದ ಸುತ್ತಲೂ ಸ್ವಲ್ಪ ದೂರವಾಗಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಪ್ರತಿಯೊಬ್ಬನೂ ತನ್ನ ತನ್ನ ಗೋತ್ರ ಧ್ವಜದ ಹತ್ತಿರ ತನ್ನ ತನ್ನ ದಂಡಿನಲ್ಲೇ ಇಳಿದುಕೊಳ್ಳಬೇಕು.
- Verse 3: “ಸೂರ್ಯೋದಯವಾಗುವ ದಿಕ್ಕಿನಲ್ಲಿ ಯೆಹೂದ ಕುಲದ ದಂಡಿಗೆ ಸೇರಿದವರು ಸೈನ್ಯ ಸೈನ್ಯವಾಗಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಆ ಕುಲದವರಿಗೆ ನಾಯಕ ಅಮ್ಮಿನಾದಾಬನ ಮಗ ನಹಶೋನ.
- Verse 4: ಅವರಲ್ಲಿ ಎಣಿಕೆಯಾದ ಸೈನಿಕರ ಸಂಖ್ಯೆ - 74,600:
- Verse 5: ಅವರ ಸಮೀಪದಲ್ಲೇ ಇಸ್ಸಾಕಾರ್ ಕುಲದವರೂ ಜೆಬುಲೂನ್ ಕುಲದವರೂ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಆ ಕುಲದವರಿಗೆ ನಾಯಕ ಚೂವಾರನ ಮಗ ನೆತನೇಲ್;
- Verse 6: ಅವರಲ್ಲಿ ಎಣಿಕೆಯಾದ ಸೈನಿಕರ ಸಂಖ್ಯೆ - 54,400:
- Verse 7: ಜೆಬುಲೂನ್ಯರಿಗೆ ನಾಯಕ ಹೇಲೋನನ ಮಗ ಎಲೀಯಾಬ್,
- Verse 8: ಅವರಲ್ಲಿ ಎಣಿಕೆಯಾದ ಸೈನಿಕರ ಸಂಖ್ಯೆ - 57,400:
- Verse 9: ಹೀಗೆ ಯೆಹೂದ ಕುಲದ ದಂಡಿಗೆ ಸೇರಿದವರೆಲ್ಲರ ಸಂಖ್ಯೆ - 1,86,400: ಇವರು ಮುಂಭಾಗದಲ್ಲಿ ಹೊರಡಬೇಕು.
- Verse 10: “ದಕ್ಷಿಣ ದಿಕ್ಕಿನಲ್ಲಿ ರೂಬೇನ್ ಕುಲದ ದಂಡಿಗೆ ಸೇರಿದವರು ಸೈನ್ಯ ಸೈನ್ಯವಾಗಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಈ ರೂಬೇನ್ ಕುಲದವರಿಗೆ ನಾಯಕ ಶೆದೇಯೂರನ ಮಗ ಎಲೀಚೂರ;
- Verse 11: ಅವರಲ್ಲಿ ಎಣಿಕೆಯಾದ ಸೈನಿಕರ ಸಂಖ್ಯೆ - 46,500:
- Verse 12: ಅವರ ಸಮೀಪದಲ್ಲೇ ಸಿಮೆಯೋನ್ ಕುಲದವರೂ ಗಾದ್ ಕುಲದವರೂ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಸಿಮೆಯೋನ್ ಕುಲದವರಿಗೆ ನಾಯಕ ಚೂರೀಷದ್ದೈಯನ ಮಗ ಶೆಲೂಮೀಯೇಲ;
- Verse 13: ಅವರಲ್ಲಿ ಎಣಿಕೆಯಾದ ಸೈನಿಕರ ಸಂಖ್ಯೆ - 59,300:
- Verse 14: ಗಾದ್ ಕುಲದವರಿಗೆ ನಾಯಕ ರೆಗೂವೇಲನ ಮಗ ಎಲ್ಯಾಸಾಫ;
- Verse 15: ಅವರಲ್ಲಿ ಎಣಿಕೆಯಾದ ಸೈನಿಕರ ಸಂಖ್ಯೆ - 45,650:
- Verse 16: ಹೀಗೆ ರೂಬೇನ್ ಕುಲದ ದಂಡಿಗೆ ಸೇರಿದ್ದವರೆಲ್ಲರ ಸಂಖ್ಯೆ - 1,51,450: ಇವರು ಎರಡನೆಯ ದಂಡಾಗಿ ಹೊರಡಬೇಕು.
- Verse 17: “ಅನಂತರ ಸೈನ್ಯಗಳ ನಟ್ಟನಡುವೆ ದೇವದರ್ಶನದ ಗುಡಾರ ಮತ್ತು ಲೇವಿಯರ ಪಾಳೆಯದವರು ಹೊರಡಬೇಕು. ಅವರು ಹೇಗೆ ಇಳಿದುಕೊಂಡಿದ್ದರೋ ಹಾಗೆಯೇ ತಮ್ಮ ತಮ್ಮ ಧ್ವಜಗಳನ್ನು ಹಿಡಿದುಕೊಂಡು ತಮ್ಮ ತಮ್ಮ ಗೊತ್ತಾದ ಸ್ಥಾನದಲ್ಲಿ ಹೊರಡಬೇಕು.
- Verse 18: ಪಶ್ಚಿಮ ದಿಕ್ಕಿನಲ್ಲಿ ಎಫ್ರಾಯೀಮ್ ಕುಲದ ದಂಡಿಗೆ ಸೇರಿದವರು ಸೈನ್ಯ ಸೈನ್ಯವಾಗಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಅವರಿಗೆ ನಾಯಕ ಅಮ್ಮೀಹೂದನ ಮಗ ಎಲೀಷಾಮಾ;
- Verse 19: ಅವರಲ್ಲಿ ಎಣಿಕೆಯಾದ ಸೈನಿಕರ ಸಂಖ್ಯೆ - 40,500:
- Verse 20: ಅವರ ಸಮೀಪದಲ್ಲೇ ಮನಸ್ಸೆ ಕುಲದವರು ಬೆನ್ಯಾಮೀನ್ ಕುಲದವರೂ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಮನಸ್ಸೆ ಕುಲದವರಿಗೆ ನಾಯಕ ಪೆದಾಚೂರನ ಮಗ ಗಮ್ಲೀಯೆಲ್;
- Verse 21: ಅವರಲ್ಲಿ ಎಣಿಕೆಯಾದ ಸೈನಿಕರ ಸಂಖ್ಯೆ -32,200:
- Verse 22: ಬೆನ್ಯಾಮೀನ್ ಕುಲದವರಿಗೆ ನಾಯಕ ಗಿದ್ಯೋನಿಯ ಮಗ ಅಬೀದಾನ್.
- Verse 23: ಅವರಲ್ಲಿ ಎಣಿಕೆಯಾದ ಸೈನಿಕರ ಸಂಖ್ಯೆ -35,400:
- Verse 24: ಹೀಗೆ ಎಫ್ರಾಯೀಮರ ದಂಡಿಗೆ ಸೇರಿದವರೆಲ್ಲರ ಸಂಖ್ಯೆ - 1,08,100: ಇವರು ಮೂರನೆಯ ದಂಡಾಗಿ ಹೊರಡಬೇಕು.
- Verse 25: ಉತ್ತರ ದಿಕ್ಕಿನಲ್ಲಿ ದಾನ್ ಕುಲದ ದಂಡಿಗೆ ಸೇರಿದವರು ಸೈನ್ಯ ಸೈನ್ಯವಾಗಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಅವರಿಗೆ ನಾಯಕ ಅಮ್ಮೀಷದ್ದೈಯನ ಮಗ ಅಹೀಗೆಜೆರ್;
- Verse 26: ಅವರಲ್ಲಿ ಎಣಿಕೆಯಾದ ಸೈನಿಕರ ಸಂಖ್ಯೆ - 62,700:
- Verse 27: ಅವರ ಸಮೀಪದಲ್ಲೇ ಆಶೇರ್ ಕುಲದವರು ಮತ್ತು ನಫ್ತಾಲಿ ಕುಲದವರು ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಆಶೇರ್ ಕುಲದವರಿಗೆ ನಾಯಕ ಒಕ್ರಾನನ ಮಗ ಪಗೀಯೇಲ್;
- Verse 28: ಅವರಲ್ಲಿ ಎಣಿಕೆಯಾದ ಸೈನಿಕರ ಸಂಖ್ಯೆ - 41,500:
- Verse 29: ನಫ್ತಾಲಿ ಕುಲದವರಿಗೆ ನಾಯಕ ಏನಾನನ ಮಗ ಅಹೀರ;
- Verse 30: ಅವರಲ್ಲಿ ಎಣಿಕೆಯಾದ ಸೈನಿಕರ ಸಂಖ್ಯೆ - 53,400:
- Verse 31: ಹೀಗೆ ದಾನ್ ಕುಲದ ದಂಡಿಗೆ ಸೇರಿದವರೆಲ್ಲರ ಸಂಖ್ಯೆ - 1,57,600: ಇವರು ಕಡೆಯ ದಂಡಾಗಿ ಹೊರಡಬೇಕು.
- Verse 32: ಇವರೇ ಇಸ್ರಯೇಲರಲ್ಲಿ ಗೋತ್ರಗೋತ್ರಗಳ ಪ್ರಕಾರ ಎಣಿಕೆಯಾದವರು. ಆ ದಂಡುಗಳಲ್ಲಿ ಸೈನಿಕರಾಗಿ ಎಣಿಕೆಯಾದ ಸೈನಿಕರ ಸಂಖ್ಯೆ - 6,03,500:
- Verse 33: ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆ ಲೇವಿಯರು ಇತರ ಇಸ್ರಯೇಲರ ಸಂಗಡ ಎಣಿಕೆಯಾಗಲಿಲ್ಲ.
- Verse 34: ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಯೇಲರು ಮಾಡಿದರು. ಹಾಗೆಯೆ ದಂಡು ದಂಡಾಗಿ ಡೇರೆಗಳನ್ನು ಹಾಕಿಕೊಳ್ಳುತ್ತಿದ್ದರು. ಅಂತೆಯೇ ಗೋತ್ರ ಕುಟುಂಬಗಳ ಪ್ರಕಾರ ಹೊರಡುತ್ತಿದ್ದರು.