ಕನ್ನಡ ಸತ್ಯವೇದವು
ಹಳೆಯ ಒಡಂಬಡಿಕೆ
ಕೀರ್ತನೆಗಳು
1ನೇ ಅಧ್ಯಾಯ
- Verse 1: ದುರ್ಜನರ ಆಲೋಚನೆಯಂತೆ ನಡೆಯದೆ I ಪಾಪಾತ್ಮರ ಪಥದಲಿ ಕಾಲೂರದೆ I ಧರ್ಮನಿಂದಕರ ಕೂಟದಲಿ ಕೂರದೆ II
- Verse 2: ಪ್ರಭುವಿನ ಧರ್ಮಶಾಸ್ತ್ರದಲಿ ಹರ್ಷಗೊಳ್ಳುವವನಾರೋ - ಅವನೇ ಧನ್ಯನು I ಹಗಲಿರುಳೆನ್ನದೆ ಅದನೆ ಧ್ಯಾನಿಸುತಿರುವವನಾರೋ ಅವನೇ ಧನ್ಯನು II
- Verse 3: ನದಿಯ ಬದಿಯಲೇ ಬೆಳೆದಿಹ ಮರದಂತೆ I ಸಕಾಲಕೆ ಫಲವೀವ ವೃಕ್ಷದಂತೆ I ಎಲೆಬಾಡದೆ ಪಸಿರಿರುವ ತರುವಂತೆ I ಸಿಗುವುದು ಅವನ ಕಾರ್ಯಗಳಿಗೆ ಸಫಲತೆ II
- Verse 4: ದುರುಳರಾದರೊ ತೂರಿ ಹೋಗುವರು I ಬಿರುಗಾಳಿಗೆ ತರಗೆಲೆಯಾಗುವರು II
- Verse 5: ಎಂದೇ ನಿಲ್ಲಲಾರರು ದುರುಳರು ನ್ಯಾಯಸ್ಥಾನದಲಿ I ಸದಸ್ಯರಾಗರು ಪಾಪಿಗಳು ಸಜ್ಜನರ ಸಂಘದಲಿ II
- Verse 6: ಸಜ್ಜನರ ಮಾರ್ಗಕ್ಕಿದೆ ಪ್ರಭುವಿನ ಪಾಲನ I ದುರ್ಜನರ ಮಾರ್ಗಕ್ಕಿದೆ ಸಂಪೂರ್ಣ ವಿನಾಶನ II