ಕನ್ನಡ ಸತ್ಯವೇದವು
ಹಳೆಯ ಒಡಂಬಡಿಕೆ
ಸಂಖ್ಯಾಕಾಂಡ
7ನೇ ಅಧ್ಯಾಯ
- Verse 1: ಮೋಶೆ ದೇವದರ್ಶನದ ಗುಡಾರವನ್ನು ಎತ್ತಿ ನಿಲ್ಲಿಸಿದ ಮೇಲೆ ಅದನ್ನೂ ಅದರ ಸಾಮಾನುಗಳನ್ನೂ ಹಾಗೂ ಬಲಿಪೀಠವನ್ನು ಅದರ ಉಪಕರಣಗಳನ್ನೂ ಅಭಿಷೇಕಿಸಿ ಪ್ರತಿಷ್ಠಿಸಿದನು.
- Verse 2: ಆಗ ಇಸ್ರಯೇಲರ ಮುಖ್ಯಸ್ಥರು, ಅಂದರೆ ಗೋತ್ರನಾಯಕರು ಹಾಗೂ ಕುಲಾಧಿಪತಿಗಳಾಗಿದ್ದು ಜನಗಣತಿಯ ನೇತೃತ್ವವನ್ನು ವಹಿಸಿಕೊಂಡಿದ್ದವರು, ಕಾಣಿಕೆಗಳನ್ನು ತಂದೊಪ್ಪಿಸಿದರು.
- Verse 3: ಇಬ್ಬರಿಬ್ಬರು ಒಂದು ಕಮಾನು ಬಂಡಿಯನ್ನೂ ಒಂದು ಜೊತೆ ಎತ್ತುಗಳನ್ನೂ ಅಂತು ಆರು ಬಂಡಿಗಳನ್ನೂ ಆರು ಜೊತೆ ಎತ್ತುಗಳನ್ನೂ ದೇವದರ್ಶನದ ಗುಡಾರದ ಮುಂದೆ ಸರ್ವೇಶ್ವರನ ಸನ್ನಿಧಿಗೆ ತಂದು ಅರ್ಪಿಸಿದರು.
- Verse 4: ಸರ್ವೇಶ್ವರ ಸ್ವಾಮಿ ಮೋಶೆಗೆ,
- Verse 5: “ಈ ಕಾಣಿಕೆಯ ವಸ್ತುಗಳನ್ನು ಇವರ ಕೈಯಿಂದ ತೆಗೆದುಕೋ; ಇವು ದೇವದರ್ಶನದ ಗುಡಾರದ ಸೇವೆಗೆ ಉಪಯೋಗವಾಗಲಿ. ಲೇವಿಯರಿಗೆ ಅವರವರ ಕೆಲಸಕ್ಕೆ ತಕ್ಕ ಹಾಗೆ ಅವುಗಳನ್ನು ಕೊಡು,” ಎಂದು ಆಜ್ಞಾಪಿಸಿದರು.
- Verse 6: ಅಂತೆಯೇ, ಮೋಶೆ ಆ ಬಂಡಿಗಳನ್ನು ಹಾಗೂ ಎತ್ತುಗಳನ್ನು ತೆಗೆದುಕೊಂಡು ಲೇವಿಯರಿಗೆ ಕೊಟ್ಟನು.
- Verse 7: ಎರಡು ಬಂಡಿಗಳನ್ನು ಹಾಗೂ ನಾಲ್ಕು ಎತ್ತುಗಳನ್ನು ಗೇರ್ಷೋನ್ಯರಿಗೆ
- Verse 8: ನಾಲ್ಕು ಬಂಡಿ ಹಾಗೂ ಎಂಟು ಎತ್ತುಗಳನ್ನು ಮೆರಾರೀಯರಿಗೆ ಅವರವರ ಸೇವೆಗೆ ತಕ್ಕ ಹಾಗೆ ಕೊಟ್ಟನು. ಇವರು ಮಹಾಯಾಜಕ ಆರೋನನ ಮಗ ಈತಾಮಾರನ ಕೈಕೆಳಗೆ ಸೇವೆ ಮಾಡಬೇಕಾಗಿತ್ತು.
- Verse 9: ಕೆಹಾತ್ಯರಿಗೆ ಮಾತ್ರ ಏನನ್ನೂ ಕೊಡಲಿಲ್ಲ. ಏಕೆಂದರೆ ದೇವದರ್ಶನದ ಗುಡಾರದ ಸಾಮಾನುಗಳನ್ನು ಸಾಗಿಸುವುದೇ ಅವರಿಗೆ ನೇಮಕವಾದ ಕೆಲಸವಾಗಿತ್ತು. ಅವರು ಅವುಗಳನ್ನು ಹೆಗಲ ಮೇಲೆ ಹೊರಬೇಕಾಗಿತ್ತು.
- Verse 10: ಬಲಿಪೀಠವನ್ನು ಅಭಿಷೇಕಿಸಿದ ದಿನದಂದು ಕುಲಾಧಿಪತಿಗಳು ಅದರ ಪ್ರತಿಷ್ಠೆಗಾಗಿ ಕಾಣಿಕೆಗಳನ್ನು ತಂದು ಅದರ ಮುಂದೆ ಇಟ್ಟರು.
- Verse 11: ಆಗ ಸರ್ವೇಶ್ವರ ಮೋಶೆಗೆ, “ಒಬ್ಬೊಬ್ಬ ಕುಲಾಧಿಪತಿ ಒಂದೊಂದು ದಿನ ಬಲಿಪೀಠದ ಪ್ರತಿಷ್ಠೆಗಾಗಿ ತನ್ನ ಕಾಣಿಕೆಯನ್ನು ಸಮರ್ಪಿಸಲಿ,” ಎಂದು ಆಜ್ಞಾಪಿಸಿದನು.
- Verse 12: ಮೊದಲನೆಯ ದಿನ ಕಾಣಿಕೆ ತಂದೊಪ್ಪಿಸಿದವನು ಯೆಹೂದ ಕುಲಾಧಿಪತಿ ಅಮ್ಮೀನಾದಾಬನ ಮಗ ನಹಶೋನ.
- Verse 13: ಅವನು ತಂದ ಕಾಣಿಕೆಗಳು: ದೇವಸ್ಥಾನದ ನಾಣ್ಯತೂಕದ ಮೇರೆಗೆ 130 ಶೆಕೆಲ್ ತೂಕದ ಬೆಳ್ಳಿಯ ಒಂದು ಹರಿವಾಣ; 70 ಶೆಕೆಲ್ ತೂಕದ ಬೆಳ್ಳಿಯ ಒಂದು ಬಟ್ಟಲು; ಈ ಎರಡರ ತುಂಬ ನೈವೇದ್ಯಕ್ಕಾಗಿ ಎಣ್ಣೆಬೆರೆಸಿದ ಗೋದಿಯ ಹಿಟ್ಟು
- Verse 14: ಧೂಪ ದ್ರವ್ಯ ತುಂಬಿದ್ದ 10 ಶೆಕೆಲ್ ತೂಕದ ಒಂದು ಚಿನ್ನದ ಧೂಪಾರತಿ.
- Verse 15: ದಹನಬಲಿಗಾಗಿ ಒಂದು ಹೋರಿ, ಒಂದು ಟಗರು, ಒಂದು ವರ್ಷದ ಕುರಿ;
- Verse 16: ಪಾಪಪರಿಹಾರಕ ಬಲಿಗಾಗಿ ಒಂದು ಹೋತ;
- Verse 17: ಸಮಾಧಾನ ಬಲಿಗಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ವರ್ಷದ ಐದು ಕುರಿಗಳು. ಅಮ್ಮೀನಾದಾಬನ ಮಗ ನಹಶೋನನು ಸಮರ್ಪಿಸಿದ ಕಾಣಿಕೆಗಳು ಇವೇ.
- Verse 18: ಎರಡನೆಯ ದಿನ ಇಸ್ಸಾಕಾರ್ ಕುಲಾಧಿಪತಿ ಚೂವಾರನ ಮಗ ನೆತನೇಲನು ತಂದ ಕಾಣಿಕೆಗಳು:
- Verse 19: ದೇವಸ್ಥಾನದ ನಾಣ್ಯತೂಕದ ಮೇರೆಗೆ 130 ಶೆಕೆಲ್ ತೂಕದ ಒಂದು ಹರಿವಾಣ; 70 ಶೆಕೆಲ್ ತೂಕದ ಒಂದು ಬೆಳ್ಳಿಯ ಬಟ್ಟಲು; ಈ ಎರಡರ ತುಂಬ ನೈವೇದ್ಯಕ್ಕಾಗಿ ಎಣ್ಣೆಬೆರೆಸಿದ ಗೋದಿಯ ಹಿಟ್ಟು
- Verse 20: ಧೂಪದ್ರವ್ಯ ತುಂಬಿದ್ದ 10 ಶೆಕೆಲ್ ತೂಕದ ಒಂದು ಚಿನ್ನದ ಧೂಪಾರತಿ
- Verse 21: ದಹನಬಲಿಗಾಗಿ ಒಂದು ಹೋರಿ, ಒಂದು ಟಗರು, ಒಂದು ವರ್ಷದ ಕುರಿ
- Verse 22: ಪಾಪಪರಿಹಾರಕ ಬಲಿಗಾಗಿ ಒಂದು ಹೋತ;
- Verse 23: ಸಮಾಧಾನ ಬಲಿಗಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ವರ್ಷದ ಐದು ಕುರಿಗಳು. ಇವೇ ಚೂವಾರನ ಮಗ ನೆತನೇಲನು ಕೊಟ್ಟ ಕಾಣಿಕೆಗಳು.
- Verse 24: ಮೂರನೆಯ ದಿನ ಜೆಬುಲೂನ್ ಕುಲಾಧಿಪತಿ ಹೇಲೋನನ ಮಗ ಎಲೀಯಾಬನು ತಂದ ಕಾಣಿಕೆಗಳು:
- Verse 25: ದೇವಸ್ಥಾನದ ನಾಣ್ಯತೂಕದ ಮೇರೆಗೆ 130 ಶೆಕೆಲ್ ತೂಕದ ಒಂದು ಹರಿವಾಣ, 70 ಶೆಕೆಲ್ ತೂಕದ ಒಂದು ಬೆಳ್ಳಿಯ ಬಟ್ಟಲು; ಈ ಎರಡರ ತುಂಬ ನೈವೇದ್ಯಕ್ಕಾಗಿ ಎಣ್ಣೆಬೆರೆಸಿದ ಗೋದಿಯ ಹಿಟ್ಟು
- Verse 26: ಧೂಪದ್ರವ್ಯ ತುಂಬಿದ್ದ 10 ಶೆಕೆಲ್ ತೂಕದ ಒಂದು ಚಿನ್ನದ ಧೂಪಾರತಿ
- Verse 27: ದಹನಬಲಿಗಾಗಿ ಒಂದು ಹೋರಿ, ಒಂದು ಟಗರು, ಒಂದು ವರ್ಷದಕುರಿ,
- Verse 28: ಪಾಪಪರಿಹಾರಕ ಬಲಿಗಾಗಿ ಒಂದು ಹೋತ;
- Verse 29: ಸಮಾಧಾನ ಬಲಿಗಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ವರ್ಷದ ಐದು ಕುರಿಗಳು. ಇವೇ ಹೇಲೋನನ ಮಗ ಎಲೀಯಾಬನು ಸಮರ್ಪಿಸಿದ ಕಾಣಿಕೆಗಳು.
- Verse 30: ನಾಲ್ಕನೆಯ ದಿನ ರೂಬೇನ್ ಕುಲಾಧಿಪತಿ ಶೆದೇಯೂರನ ಮಗ ಎಲೀಚೂರನು ತಂದ ಕಾಣಿಕೆಗಳು:
- Verse 31: ದೇವಸ್ಥಾನದ ನಾಣ್ಯತೂಕದ ಮೇರೆಗೆ 130 ಶೆಕೆಲ್ ತೂಕದ ಒಂದು ಹರಿವಾಣ, 70 ಶೆಕೆಲ್ ತೂಕದ ಒಂದು ಬೆಳ್ಳಿಯ ಬಟ್ಟಲು; ಈ ಎರಡರ ತುಂಬ ನೈವೇದ್ಯಕ್ಕಾಗಿ ಎಣ್ಣೆಬೆರೆಸಿದ ಗೋದಿಯ ಹಿಟ್ಟು
- Verse 32: ಧೂಪದ್ರವ್ಯ ತುಂಬಿದ್ದ ಹತ್ತು ಶೆಕೆಲ್ ತೂಕದ ಒಂದು ಚಿನ್ನದ ಧೂಪಾರತಿ
- Verse 33: ದಹನ ಬಲಿಗಾಗಿ ಒಂದು ಹೋರಿ, ಒಂದು ಟಗರು, ಒಂದು ವರ್ಷದ ಕುರಿ,
- Verse 34: ಪಾಪ ಪರಿಹಾರಕ ಬಲಿಗಾಗಿ ಒಂದು ಹೋತ,
- Verse 35: ಸಮಾಧಾನ ಬಲಿಗಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ವರ್ಷದ ಐದು ಕುರಿಗಳು, ಶೆದೇಯೂರನ ಮಗ ಎಲೀಚೂರನು ಸಮರ್ಪಿಸಿದ ಕಾಣಿಕೆಗಳು ಇವೇ.
- Verse 36: ಐದನೆಯ ದಿನ ಸಿಮೆಯೋನ್ ಕುಲಾಧಿಪತಿ ಚೂರಿಷದ್ದೈಯನ ಮಗ ಶೆಲುಮೀಯೇಲನು ತಂದ ಕಾಣಿಕೆಗಳು:
- Verse 37: ದೇವಸ್ಥಾನದ ನಾಣ್ಯತೂಕದ ಮೇರೆಗೆ 130 ಶೆಕೆಲ್ ತೂಕದ ಒಂದು ಹರಿವಾಣ, 70 ಶೆಕೆಲ್ ತೂಕದ ಒಂದು ಬೆಳ್ಳಿಯ ಬಟ್ಟಲು; ಈ ಎರಡರ ತುಂಬ ನೈವೇದ್ಯಕ್ಕಾಗಿ ಎಣ್ಣೆಬೆರೆಸಿದ ಗೋದಿಯ ಹಿಟ್ಟು.
- Verse 38: ಧೂಪದ್ರವ್ಯ ತುಂಬಿದ್ದ 10 ಶೆಕೆಲ್ ತೂಕದ ಒಂದು ಚಿನ್ನದ ಧೂಪಾರತಿ
- Verse 39: ದಹನಬಲಿಗಾಗಿ ಒಂದು ಹೋರಿ, ಒಂದು ಟಗರು, ಒಂದು ವರ್ಷದ ಕುರಿ,
- Verse 40: ಪಾಪ ಪರಿಹಾರಕ ಬಲಿಗಾಗಿ ಒಂದು ಹೋತ;
- Verse 41: ಸಮಾಧಾನ ಬಲಿಗಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ವರ್ಷದ ಐದು ಕುರಿಗಳು. ಇವೇ ಚೂರೀಷದ್ದೈಯನ ಮಗ ಶೆಲುಮೀಯೇಲನು ಸಮರ್ಪಿಸಿದ ಕಾಣಿಕೆಗಳು.
- Verse 42: ಆರನೆಯ ದಿನ ಗಾದ್ ಕುಲಾಧಿಪತಿ ದೆಗೂವೇಲನ ಮಗ ಎಲ್ಯಾಸಾಫನು ತಂದ ಕಾಣಿಕೆಗಳು:
- Verse 43: ದೇವಸ್ಥಾನದ ನಾಣ್ಯತೂಕದ ಮೇರೆಗೆ 130 ಶೆಕೆಲ್ ತೂಕದ ಒಂದು ಹರಿವಾಣ, 70 ಶೆಕೆಲ್ ತೂಕದ ಒಂದು ಬೆಳ್ಳಿಯ ಬಟ್ಟಲು; ಈ ಎರಡರ ತುಂಬ ನೈವೇದ್ಯಕ್ಕಾಗಿ ಎಣ್ಣೆಬೆರೆಸಿದ ಗೋದಿಯ ಹಿಟ್ಟು
- Verse 44: ಧೂಪದ್ರವ್ಯ ತುಂಬಿದ್ದ ಹತ್ತು ಶೆಕೆಲ್ ತೂಕದ ಒಂದು ಚಿನ್ನದ ಧೂಪಾರತಿ
- Verse 45: ದಹನಬಲಿಗಾಗಿ ಒಂದು ಹೋರಿ, ಒಂದು ಟಗರು, ಒಂದು ವರ್ಷದ ಕುರಿ,
- Verse 46: ಪಾಪ ಪರಿಕಾರಕ ಬಲಿಗಾಗಿ ಒಂದು ಹೋತ;
- Verse 47: ಸಮಾಧಾನ ಬಲಿಗಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ವರ್ಷದ ಐದು ಕುರಿಗಳು. ಇವೇ ದೆಗೂವೇಲನ ಮಗ ಎಲ್ಯಾಸಾಫನು ಸಮರ್ಪಿಸಿದ ಕಾಣಿಕೆಗಳು.
- Verse 48: ಏಳನೆಯ ದಿನ ಎಫ್ರಾಯಿಮ್ ಕುಲಾಧಿಪತಿ ಅಮ್ಮೂಹೂದನ ಮಗ ಎಲೀಷಾವನು ತಂದ ಕಾಣಿಕೆಗಳು:
- Verse 49: ದೇವಸ್ಥಾನದ ನಾಣ್ಯತೂಕದ ಮೇರೆಗೆ 130 ಶೆಕೆಲ್ ತೂಕದ ಒಂದು ಹರಿವಾಣ, 70 ಶೆಕೆಲ್ ತೂಕದ ಒಂದು ಬೆಳ್ಳಿಯ ಬಟ್ಟಲು; ಈ ಎರಡರ ತುಂಬ ನೈವೇದ್ಯಕ್ಕಾಗಿ ಎಣ್ಣೆಬೆರೆಸಿದ ಗೋದಿಯ ಹಿಟ್ಟು
- Verse 50: ಧೂಪದ್ರವ್ಯ ತುಂಬಿದ್ದ ಹತ್ತು ಶೆಕೆಲ್ ತೂಕದ ಒಂದು ಚಿನ್ನದ ಧೂಪಾರತಿ
- Verse 51: ದಹನಬಲಿಗಾಗಿ ಒಂದು ಹೋರಿ, ಒಂದು ಟಗರು, ಒಂದು ವರ್ಷದ ಕುರಿ,
- Verse 52: ಪಾಪ ಪರಿಕಾರಕ ಬಲಿಗಾಗಿ ಒಂದು ಹೋತ;
- Verse 53: ಸಮಾಧಾನ ಬಲಿಗಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ವರ್ಷದ ಐದು ಕುರಿಗಳು. ಅಮ್ಮೀಹೂದನ ಮಗ ಎಲೀಷಾವನು ಸಮರ್ಪಿಸಿದ ಕಾಣಿಕೆಗಳು ಇವೇ.
- Verse 54: ಎಂಟನೆಯ ದಿನ ಮನಸ್ಸೆ ಕುಲಾಧಿಪತಿ ಪೆದಾಚೂರನ ಮಗ ಗಮ್ಲೀಯೇಲನು ತಂದ ಕಾಣಿಕೆಗಳು:
- Verse 55: ದೇವಸ್ಥಾನದ ನಾಣ್ಯತೂಕದ ಮೇರೆಗೆ 130 ಶೆಕೆಲ್ ತೂಕದ ಒಂದು ಹರಿವಾಣ, 70 ಶೆಕೆಲ್ ತೂಕದ ಒಂದು ಬೆಳ್ಳಿಯ ಬಟ್ಟಲು; ಈ ಎರಡರ ತುಂಬ ನೈವೇದ್ಯಕ್ಕಾಗಿ ಎಣ್ಣೆಬೆರೆಸಿದ ಗೋದಿಯ ಹಿಟ್ಟು
- Verse 56: ಧೂಪದ್ರವ್ಯ ತುಂಬಿದ್ದ ಹತ್ತು ಶೆಕೆಲ್ ತೂಕದ ಒಂದು ಚಿನ್ನದ ಧೂಪಾರತಿ
- Verse 57: ಸರ್ವಾಂಗ ಹೋಮಕ್ಕಾಗಿ ಒಂದು ಹೋರಿ, ಒಂದು ಟಗರು, ಒಂದು ವರ್ಷದ ಕುರಿ,
- Verse 58: ಪಾಪ ಪರಿಕಾರಕ ಬಲಿಗಾಗಿ ಒಂದು ಹೋತ;
- Verse 59: ಸಮಾಧಾನ ಬಲಿಗಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ವರ್ಷದ ಐದು ಕುರಿಗಳು. ಪೆದಾಚೂರನ ಮಗ ಗಮ್ಲೀಯೇಲನು ಸಮರ್ಪಿಸಿದ ಕಾಣಿಕೆಗಳು ಇವೇ.
- Verse 60: ಒಂಬತ್ತನೆಯ ದಿನ ಬೆನ್ಯಾಮಿನ್ ಕುಲಾಧಿಪತಿ ಗಿದ್ಯೋನಿಯ ಮಗ ಅಬೀದಾನನು ತಂದ ಕಾಣಿಕೆಗಳು:
- Verse 61: ದೇವಸ್ಥಾನದ ನಾಣ್ಯತೂಕದ ಮೇರೆಗೆ 130 ಶೆಕೆಲ್ ತೂಕದ ಒಂದು ಹರಿವಾಣ, 70 ಶೆಕೆಲ್ ತೂಕದ ಒಂದು ಬೆಳ್ಳಿಯ ಬಟ್ಟಲು; ಈ ಎರಡರ ತುಂಬ ನೈವೇದ್ಯಕ್ಕಾಗಿ ಎಣ್ಣೆಬೆರೆಸಿದ ಗೋದಿಯ ಹಿಟ್ಟು
- Verse 62: ಧೂಪದ್ರವ್ಯ ತುಂಬಿದ್ದ 10 ಶೆಕೆಲ್ ತೂಕದ ಒಂದು ಚಿನ್ನದ ಧೂಪಾರತಿ
- Verse 63: ದಹನಬಲಿಗಾಗಿ ಒಂದು ಹೋರಿ, ಒಂದು ಟಗರು, ಒಂದು ವರ್ಷದ ಕುರಿ,
- Verse 64: ಪಾಪ ಪರಿಕಾರಕ ಬಲಿಗಾಗಿ ಒಂದು ಹೋತ;
- Verse 65: ಸಮಾಧಾನ ಬಲಿಗಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ವರ್ಷದ ಐದು ಕುರಿಗಳು. ಇವೇ ಗಿದ್ಯೋನಿಯ ಮಗ ಅಬೀದಾನನು ಸಮರ್ಪಿಸಿದ ಕಾಣಿಕೆಗಳು.
- Verse 66: ಹತ್ತನೆಯ ದಿನ ದಾನ್ ಕುಲಾಧಿಪತಿ ಅಮ್ಮೀಷದ್ದೈಯನ ಮಗ ಅಹೀಗೆಜೆರನು ತಂದ ಕಾಣಿಕೆಗಳು:
- Verse 67: ದೇವಸ್ಥಾನದ ನಾಣ್ಯತೂಕದ ಮೇರೆಗೆ 130 ಶೆಕೆಲ್ ತೂಕದ ಒಂದು ಹರಿವಾಣ, 70 ಶೆಕೆಲ್ ತೂಕದ ಒಂದು ಬೆಳ್ಳಿಯ ಬಟ್ಟಲು; ಈ ಎರಡರ ತುಂಬ ನೈವೇದ್ಯಕ್ಕಾಗಿ ಎಣ್ಣೆಬೆರೆಸಿದ ಗೋದಿಯ ಹಿಟ್ಟು
- Verse 68: ಧೂಪದ್ರವ್ಯ ತುಂಬಿದ್ದ 10 ಶೆಕೆಲ್ ತೂಕದ ಒಂದು ಚಿನ್ನದ ಧೂಪಾರತಿ
- Verse 69: ದಹನಬಲಿಗಾಗಿ ಒಂದು ಹೋರಿ, ಒಂದು ಟಗರು, ಒಂದು ವರ್ಷದ ಕುರಿ,
- Verse 70: ಪಾಪ ಪರಿಕಾರಕ ಬಲಿಗಾಗಿ ಒಂದು ಹೋತ;
- Verse 71: ಸಮಾಧಾನ ಬಲಿಗಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ವರ್ಷದ ಐದು ಕುರಿಗಳು. ಅಮ್ಮೀಷದ್ದೈಯನ ಮಗ ಅಹೀಗೆಜೆರನು ಸಮರ್ಪಿಸಿದ ಕಾಣಿಕೆಗಳು ಇವೇ.
- Verse 72: ಹನ್ನೊಂದನೆಯ ದಿನ ಆಶೇರ್ ಕುಲಾಧಿಪತಿ ಒಕ್ರಾನನ ಮಗ ಪಗೀಯೇಲನು ತಂದ ಕಾಣಿಕೆಗಳು:
- Verse 73: ದೇವಸ್ಥಾನದ ನಾಣ್ಯತೂಕದ ಮೇರೆಗೆ 130 ಶೆಕೆಲ್ ತೂಕದ ಒಂದು ಹರಿವಾಣ, 70 ಶೆಕೆಲ್ ತೂಕದ ಒಂದು ಬೆಳ್ಳಿಯ ಬಟ್ಟಲು; ಈ ಎರಡರ ತುಂಬ ನೈವೇದ್ಯಕ್ಕಾಗಿ ಎಣ್ಣೆಬೆರೆಸಿದ ಗೋದಿಯ ಹಿಟ್ಟು
- Verse 74: ಧೂಪದ್ರವ್ಯ ತುಂಬಿದ್ದ 10 ಶೆಕೆಲ್ ತೂಕದ ಒಂದು ಚಿನ್ನದ ಧೂಪಾರತಿ
- Verse 75: ದಹನಬಲಿಗಾಗಿ ಒಂದು ಹೋರಿ, ಒಂದು ಟಗರು, ಒಂದು ವರ್ಷದ ಕುರಿ,
- Verse 76: ಪಾಪ ಪರಿಕಾರಕ ಬಲಿಗಾಗಿ ಒಂದು ಹೋತ;
- Verse 77: ಸಮಾಧಾನ ಬಲಿಗಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ವರ್ಷದ ಐದು ಕುರಿಗಳು. ಇವೇ ಒಕ್ರಾನನ ಮಗ ಪಗೀಯೇಲನು ಸಮರ್ಪಿಸಿದ ಕಾಣಿಕೆಗಳು.
- Verse 78: ಹನ್ನೆರಡನೆಯ ದಿನ ನಫ್ತಾಲಿ ಕುಲಾಧಿಪತಿ ಏನಾನನ ಮಗ ಅಹೀರನು ತಂದ ಕಾಣಿಕೆಗಳು:
- Verse 79: ದೇವಸ್ಥಾನದ ನಾಣ್ಯತೂಕದ ಮೇರೆಗೆ 130 ಶೆಕೆಲ್ ತೂಕದ ಒಂದು ಹರಿವಾಣ, 70 ಶೆಕೆಲ್ ತೂಕದ ಒಂದು ಬೆಳ್ಳಿಯ ಬಟ್ಟಲು; ಈ ಎರಡರ ತುಂಬ ನೈವೇದ್ಯಕ್ಕಾಗಿ ಎಣ್ಣೆಬೆರೆಸಿದ ಗೋದಿಯ ಹಿಟ್ಟು
- Verse 80: ಧೂಪದ್ರವ್ಯ ತುಂಬಿದ್ದ ಹತ್ತು ಶೆಕೆಲ್ ತೂಕದ ಒಂದು ಚಿನ್ನದ ಧೂಪಾರತಿ
- Verse 81: ದಹನಬಲಿಗಾಗಿ ಒಂದು ಹೋರಿ, ಒಂದು ಟಗರು, ಒಂದು ವರ್ಷದ ಕುರಿ,
- Verse 82: ಪಾಪ ಪರಿಕಾರಕ ಬಲಿಗಾಗಿ ಒಂದು ಹೋತ;
- Verse 83: ಸಮಾಧಾನ ಬಲಿಗಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ವರ್ಷದ ಐದು ಕುರಿಗಳು. ಇವೇ ಏನಾನನ ಮಗ ಅಹೀರನು ಸಮರ್ಪಿಸಿದ ಕಾಣಿಕೆಗಳು.
- Verse 84: ಬಲಿಪೀಠವನ್ನು ಅಭಿಷೇಕಿಸಲಾದ ದಿನದಂದು ಇಸ್ರಯೇಲರ ಕುಲಾಧಿಪತಿಗಳು ಅದರ ಪ್ರತಿಷ್ಠೆಗಾಗಿ ಸಮರ್ಪಿಸಿದ ಕಾಣಿಕೆಗಳು ಒಟ್ಟು: 12 ಬೆಳ್ಳಿಯ ಹರಿವಾಣಗಳು; 12 ಬೆಳ್ಳಿಯ ಬಟ್ಟಲುಗಳು; 12 ಚಿನ್ನದ ಧೂಪಾರತಿಗಳು;
- Verse 85: ಒಂದೊಂದು ಬೆಳ್ಳಿಯ ಹರಿವಾಣ 130 ಶೆಕೆಲ್ ತೂಕವುಳ್ಳದ್ದಾಗಿತ್ತು; ಒಂದೊಂದು ಬೆಳ್ಳಿಯ ಬಟ್ಟಲು 70 ಶೆಕೆಲ್ ತೂಕವುಳ್ಳದ್ದಾಗಿತ್ತು; ಆ ಬೆಳ್ಳಿಯ ಪಾತ್ರೆಗಳ ಒಟ್ಟು ತೂಕ ದೇವಸ್ಥಾನದ ನಾಣ್ಯದ ತೂಕದ ಮೇರೆಗೆ 2400 ಶೆಕೆಲ್ ತೂಕ.
- Verse 86: ಧೂಫದ್ರವ್ಯ ತುಂಬಿದ್ದ ಚಿನ್ನದ ಧೂಪಾರತಿಗಳು ಹನ್ನೆರಡು; ದೇವಸ್ಥಾನದ ನಾಣ್ಯದ ಪ್ರಕಾರ ಒಂದೊಂದರ ತೂಕ 10 ಶೆಕೆಲ್. ಹೀಗೆ ಸರ್ವೇಶ್ವರ ಸ್ವಾಮಿ ಆತನೊಡನೆ ಮಾತಾಡಿದರು.